ಸಚಿವ ಜಮೀರ್ ಅಹ್ಮದ್ ಮತ್ತು ಕಾಂಗ್ರೆಸ್ ಸಭೆ 
ರಾಜಕೀಯ

ದಾವಣಗೆರೆ ದಕ್ಷಿಣ ಉಪ ಚುನಾವಣೆ: 'ಮುಸ್ಲಿಮರು ಹೆಚ್ಚಿದ್ದೇವೆ, ನಮಗೇ ಟಿಕೆಟ್ ನೀಡಬೇಕು'; Zameer Ahmed ರಾಜಿನಾಮೆ ಬಾಂಬ್?

ದಾವಣಗೆರೆ ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಶಾಮನೂರು ಕುಟುಂಬ ಮತ್ತು ಮುಸ್ಲಿಂ ಸಮುದಾಯದ ನಾಯಕರ ನಡುವೆ ದೊಡ್ಡ ಹಗ್ಗಜಗ್ಗಾಟವೇ ನಡೆದಿದೆ ಎಂದು ಹೇಳಲಾಗಿದೆ.

ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿನ ಕಾಂಗ್ರೆಸ್ ಪಕ್ಷದ ಟಿಕೆಟ್ ಭಾರಿ ಜಟಾಪಟಿಯೇ ನಡೆಯುತ್ತಿದ್ದು, ಇತ್ತ ಸಚಿವ ಜಮೀಹ್ ಅಹ್ಮದ್ ಕ್ಷೇತ್ರದಲ್ಲಿ ತಮ್ಮ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ತಮ್ಮ ಸಮುದಾಯಕ್ಕೇ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎಂದು ಹೇಳಲಾಗಿದೆ.

ಹೌದು.. ಉಪ ಚುನಾವಣೆ ಟಿಕೆಟ್ ನೀಡಿಕೆ ವಿಚಾರ ರಾಜ್ಯ ಕಾಂಗ್ರೆಸ್ ನಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡುತ್ತಿದ್ದು, ಟಿಕೆಟ್ ಹಂಚಿಕೆ ಸಂಬಂಧ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ರಾಜ್ಯ ನಾಯಕರ ಜೊತೆ ಮಹತ್ವದ ಸಭೆ ನಡೆಸುತ್ತಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಶಾಮನೂರು ಕುಟುಂಬ ಮತ್ತು ಮುಸ್ಲಿಂ ಸಮುದಾಯದ ನಾಯಕರ ನಡುವೆ ದೊಡ್ಡ ಹಗ್ಗಜಗ್ಗಾಟವೇ ನಡೆದಿದೆ ಎಂದು ಹೇಳಲಾಗಿದೆ.

ಈ ಸಭೆಯಲ್ಲಿ ಕಾಂಗ್ರೆಸ್ ನಾಯಕ, ಸಚಿವ ಜಮೀರ್ ಅಹಮ್ಮದ್ ರಾಜೀನಾಮೆ ಅಸ್ತ್ರ ಪ್ರಯೋಗಿಸಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಮಾಧ್ಯಮವೊಂದು ವರದಿ ಮಾಡಿದ್ದು, ದಾವಣೆಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಟಿಕೆಟ್ ಘೋಷಣೆ ವಿಚಾರವಾಗಿ ನಡೆದ ಸಭೆಯಲ್ಲಿ ಜಮೀರ್ ಅಹಮ್ಮದ್ ರಾಜೀನಾಮೆ ಬಾಂಬ್ ಸಿಡಿಸಿದ್ದಾರೆ.

ಕರ್ನಾಟಕದ ದಾವಣೆಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ವಿಧಾನಸಭಾ ಉಪಚುನಾವಣೆ ಕುರಿತು ಕಾಂಗ್ರೆಸ್ ಸತತ ಸಭೆ ನಡೆಸುತ್ತಿದೆ. ಟಿಕೆಟ್ ಘೋಷಣೆ ವಿಚಾರವಾಗಿ ತೀವ್ರ ಗೊಂದಲ, ಜಟಾಪಟಿ ಏರ್ಪಟ್ಟಿದೆ. ಹೀಗಾಗಿ ನಿನ್ನೆ ರಾತ್ರಿಯಿಂದ ರಾಜ್ಯ ನಾಯಕರ ಜೊತೆ ಸಭೆ ನಡೆಸುತ್ತಿರುವ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮುಂದೆ ನಾಯಕರು ವಿವಿದ ಬೇಡಿಕೆ ಮುಂದಿಟ್ಟಿದ್ದಾರೆ.

ಜಮೀರ್ ಪಟ್ಟೇನು?

ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಮುಸ್ಲಿಮ್ ನಾಯಕರಿಗೆ ನೀಡಬೇಕು ಎಂದು ಜಮೀರ್ ಪಟ್ಟು ಹಿಡಿದಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಿದೆ. ನಮ್ಮ ಸಮುದಾಯಕ್ಕೆ ಟಿಕೆಟ್ ನೀಡಲು ಮೌಲ್ವಿಗಳು,ಮುಸ್ಲಿಂ ಪ್ರಮುಖರು ಆಗ್ರಹಿಸಿದ್ದಾರೆ.

ಹೀಗಾಗಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕು. ಇಲ್ಲದಿದ್ದರೆ ರಾಜೀನಾಮೆ ನೀಡುವುದಾಗಿ ಜಮೀರ್ ಅಹಮ್ಮದ್ ಹೇಳಿದ್ದಾರೆ. ಆ ಮೂಲಕ ರಣದೀಪ್ ಸಿಂಗ್ ಸುರ್ಜೆವಾಲ ಮುಂದೆ ಜಮೀರ್ ರಾಜೀನಾಮೆ ಅಸ್ತ್ರ ಪ್ರಯೋಗಿಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!