ಇಕ್ಬಾಲ್ ಹುಸೇನ್  
ರಾಜಕೀಯ

ಡಿ.ಕೆ ಶಿವಕುಮಾರ್, ಪ್ರಿಯಾಂಕ್ ಖರ್ಗೆಯವರಂತೆ ನಮಗೂ ಮಂತ್ರಿ ಪದವಿ ನೀಡಿ: ಶಾಸಕ ಇಕ್ಬಾಲ್ ಹುಸೇನ್

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಪ್ರಿಯಾಂಕ ಖರ್ಗೆ ಅವರು ಮೊದಲ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾಗ ಸಚಿವರಾಗಿದ್ದರು ಎಂದರು.

ರಾಮನಗರ: ಮೊದಲ ಬಾರಿಗೆ ಹಾಗೂ ಎರಡನೇ ಬಾರಿ ಗೆದ್ದವರಿಗೆ ಈ ಬಾರಿಯ ಸಂಪುಟ ಪುನಾರಚನೆ ವೇಳೆ ಮಂತ್ರಿಗಿರಿ ಕೊಡಿ ಎಂದು ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನ್ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಪ್ರಿಯಾಂಕ ಖರ್ಗೆ ಅವರು ಮೊದಲ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾಗ ಸಚಿವರಾಗಿದ್ದರು. ಹಾಗಾಗಿ, ಈಗಲೂ ಮೊದಲ ಬಾರಿ ಗೆದ್ದವರನ್ನು ಸಚಿವರನ್ನಾಗಿ ಮಾಡಬೇಕೆಂದು ನಾವು ಹೈಕಮಾಂಡ್ ಒತ್ತಾಯಿಸುತ್ತೇವೆ ಎಂದರು.

ಈ ಬಗ್ಗೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಔತಣಕೂಟದಲ್ಲಿ ಸುಮಾರು 55 ಮಂದಿ ಸೇರಿ, ಒಟ್ಟಿಗೆ ಊಟ ಮಾಡಿ, ಈ ಎಲ್ಲಾ ವಿಚಾರಗಳನ್ನು ಚರ್ಚೆ ಮಾಡಿದ್ದೇವೆ. ನಮ್ಮ ಮನವಿಯನ್ನು ಮುಖ್ಯಮಂತ್ರಿಗೆ ತಿಳಿಸಿದ್ದೇವೆ. ಮುಖ್ಯಮಂತ್ರಿಗಳು ಸ್ಪಂದಿಸುವ ವಿಶ್ವಾಸ ಇದೆ ಎಂದು ಹೇಳಿದರು.

ಮೂರು-ನಾಲ್ಕು ಬಾರಿ ಗೆದ್ದ ಶಾಸಕರು ಸಭೆ ಮಾಡಿ, ಮುಖ್ಯಮಂತ್ರಿಗಳಲ್ಲಿ ಸಚಿವ ಪದವಿಗೆ ಮನವಿ ಮಾಡಿದ್ದಾರೆ. ಹಾಗಾಗಿ, ಮೊದಲ ಬಾರಿ ಹಾಗೂ ಎರಡು ಬಾರಿ ಗೆದ್ದ ಶಾಸಕರು ಕೂಡ ನಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳಿಗೆ ತಿಳಿಸುವ ನಿಟ್ಟಿನಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದೇವೆ ಎಂದು ಇಕ್ಬಾಲ್ ಹುಸೇನ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್