ಬಿ ವೈ ವಿಜಯೇಂದ್ರ  
ರಾಜಕೀಯ

ಸಚಿವರು ಸೂಟ್ ಕೇಸ್ ನಲ್ಲಿ ಅಲ್ಲ ಗೋಣಿಚೀಲದಲ್ಲಿ ಹಣ ತಂದು ದಾವಣಗೆರೆಯಲ್ಲಿ ಕೂರುತ್ತಾರೆ: ಬಿ ವೈ ವಿಜಯೇಂದ್ರ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸಮರ್ಥ್ ಶಾಮನೂರುಗೆ ಕಾಂಗ್ರೆಸ್ ಟಿಕೆಟ್ ನೀಡಿರುವುದು ಅಲ್ಪಸಂಖ್ಯಾತ ಮುಸ್ಲಿಂ ಮುಖಂಡರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. 20ಕ್ಕೂ ಹೆಚ್ಚು ಮುಸ್ಲಿಮರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಬಾಗಲಕೋಟೆ: ರಾಜ್ಯದಲ್ಲಿ ಉಪಚುನಾವಣೆ ಪ್ರಚಾರ ಕಾವು ರಂಗೇರುತ್ತಿದೆ. ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಗಳ ಹಿನ್ನೆಲೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರ ನಡುವೆ ವಾಕ್ಸಮರ ಆರಂಭವಾಗಿದೆ.

ಇಂದು ಬಾಗಲಕೋಟೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ದಾವಣಗೆರೆಯಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡಿ ಆಮಿಷವೊಡ್ಡುವ ಪ್ರವೃತ್ತಿ ಜೋರಾಗಿದೆ. ಸೂಟ್‌ಕೇಸ್‌ನಲ್ಲಿ ಹಣ ತರುವುದಿಲ್ಲ, ಸಚಿವರೊಬ್ಬರು ಗೋಣಿಚೀಲದಲ್ಲಿ ಹಣ ತಂದು ಕೂರುತ್ತಾರೆ. ಕ್ಷೇತ್ರದ ರಾಜಕೀಯದಲ್ಲಿ ಏನೆಲ್ಲಾ ನಡೆಯುತ್ತಿದೆ ಎಂದು ನನಗೆ ಗೊತ್ತಿದೆ ಎಂದು ಆರೋಪಿಸಿದರು.

ರಾಜ್ಯದ ಜನತೆ ಕಾಂಗ್ರೆಸ್ ಆಡಳಿತದಿಂದ ಬೇಸತ್ತು ಹೋಗಿದ್ದಾರೆ. ಗ್ಯಾರಂಟಿ ಭಾಗ್ಯಗಳಿಂದ ರಾಜ್ಯದ ಆರ್ಥಿಕ ಸ್ಥಿತಿ ಹದಗೆಡುತ್ತಿದೆ. ಇದು ಬಡವರು ಮತ್ತು ದೀನದಲಿತರ ವಿರೋಧಿ ಸರ್ಕಾರ’, ಈ ಬಾರಿಯ ಉಪಚುನಾವಣೆಯಲ್ಲಿ ಬಿಜೆಪಿಗೆ ಜನ ಮತ ಹಾಕುತ್ತಾರೆ ಎಂದರು.

ಈ ಹಿಂದೆ ಸಿರಾ ಮತ್ತು ಕೆಆರ್ ಪೇಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕುತಂತ್ರ ಮಾಡಿತ್ತು ಎಂದು ಆರೋಪಿಸಿದ ಅವರು, ಮತದಾನ ಕೊನೆಯ ದಿನದವರೆಗೆ ಕಾರ್ಯಕರ್ತರು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಬಾಗಲಕೋಟೆ ಕ್ಷೇತ್ರದಲ್ಲಿ ಇದ್ದ ಸಣ್ಣಪುಟ್ಟ ಗೊಂದಲಗಳನ್ನು ಬಗೆಹರಿಸಲಾಗುವುದು. ಎಲ್ಲ ನಾಯಕರು ಒಟ್ಟಾಗಿ ಕೆಲಸ ಮಾಡಿ ಬಿಜೆಪಿ ಅಭ್ಯರ್ಥಿ ಚರಂತಿಮಠರ ಗೆಲುವಿಗೆ ಶ್ರಮಿಸಲಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

ಸಮರ್ಥ್ ಶಾಮನೂರ್ ಗೆ ಟಿಕೆಟ್, ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮಾಜಿ ಸಚಿವ ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರುಗೆ ಕಾಂಗ್ರೆಸ್ ಟಿಕೆಟ್ ನೀಡಿರುವುದು ಅಲ್ಪಸಂಖ್ಯಾತ ಮುಸ್ಲಿಂ ಮುಖಂಡರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಹೆಚ್ಚಿನ ಬೆಂಬಲ ನೀಡುತ್ತೇವೆ ಎಂದು 12ನೇ ವಾರ್ಡ್‌ನ ಯುವಕರು, ‘ಕೈ’ ಮುಖಂಡ ಶಫೀಕ್ ಪಂಡಿತ್ ಅವರ ನೇತೃತ್ವದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಬಹಿರಂಗವಾಗಿ ಬೆಂಬಲ ಘೋಷಿಸಿದ್ದಾರೆ. 20ಕ್ಕೂ ಹೆಚ್ಚು ಮುಸ್ಲಿಮರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war effect: ಷೇರು ಮಾರುಕಟ್ಟೆಯಲ್ಲಿ 'ರಕ್ತಪಾತ': ಸೆನ್ಸೆಕ್ಸ್ 1,555 ಅಂಕ ಕುಸಿತ, ನಿಮಿಷಗಳಲ್ಲಿ ಹೂಡಿಕೆದಾರರಿಗೆ 8 ಲಕ್ಷ ಕೋಟಿ ರೂ ನಷ್ಟ..!

ನ್ಯೂಯಾರ್ಕ್‌: ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ Air Canada Express ವಿಮಾನ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

West Asia war: ವಿದ್ಯುತ್ ಸ್ಥಾವರಗಳ ಮೇಲೆ ದಾಳಿಯಾದರೆ, ಹಾರ್ಮುಜ್ ಜಲಸಂಧಿ ಸಂಪೂರ್ಣ ಬಂದ್; ಇರಾನ್ ಕಠಿಣ ಎಚ್ಚರಿಕೆ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು-Video

ಉರಿದ ಹೊರ್ಮುಸ್; ಮುಂಚೂಣಿಗೆ ಬಂದ ಯುಎಸ್ ಮರೀನ್ಸ್ (ಜಾಗತಿಕ ಜಗಲಿ)

SCROLL FOR NEXT