ಬಿಜೆಪಿ ಟ್ವೀಟ್ 
ರಾಜ್ಯ

ಇದೇನು ಗ್ಯಾರಂಟಿ ಅನುಷ್ಠಾನ ಸಮಿತಿಯೋ ಅಥವಾ ಕಾಂಗ್ರೆಸ್ ಅತೃಪ್ತರ ಜೇಬು ತುಂಬಿಸುವ ಗಂಜಿ ಕೇಂದ್ರವೋ..?

ನಿಮ್ಮ ಪಕ್ಷದ ಅತೃಪ್ತ ಆತ್ಮಗಳನ್ನು ಸಾಕಲು ವರ್ಷಕ್ಕೆ ರೂ.6.6 ಕೋಟಿ ಲೂಟಿ ಮಾಡುತ್ತಿದ್ದೀರಿ. ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡುವುದು ಯಾವ ನ್ಯಾಯ? ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಇಡೀ ಸರ್ಕಾರಿ ಯಂತ್ರವೇ ಇರುವಾಗ, ಈ ರಾಜಕೀಯ ಗಂಜಿ ಕೇಂದ್ರದ ಅಗತ್ಯವೇನಿತ್ತು?

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಬಡವರ ಉದ್ದಾರ ಮಾಡುತ್ತಿದ್ದೇವೆ ಎಂದು ಡಂಗುರ ಸಾರುವ ಈ ಕಾಂಗ್ರೆಸ್ ಸರ್ಕಾರ, ಒಳಗೊಳಗೆ ತನ್ನ ಪಕ್ಷದ ಅತೃಪ್ತ ನಾಯಕರಿಗೆ ಲಕ್ಷ ಲಕ್ಷ ರೂಪಾಯಿ ಸಂಬಳದ ಉಡುಗೊರೆ ನೀಡುತ್ತಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುಲವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ಸರ್ಕಾರ ಸದನಕ್ಕೆ ನೀಡಿರುವ ಅಧಿಕೃತ ದಾಖಲೆಗಳೇ ಇದಕ್ಕೆ ಸಾಕ್ಷಿ ಎಂದು ಹೇಳಿದ್ದಾರೆ.

ಗ್ಯಾರೆಂಟಿ ಅನುಷ್ಠಾನ ಸಮಿತಿ ಹೆಸರಿನಲ್ಲಿ ರಾಜ್ಯ ಸರ್ಕಾರ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ಅವರಿಗೆ ಮಾಸಿಕ ವೇತನ ರೂ.5,98,487 (ಸುಮಾರು 6 ಲಕ್ಷ!) ನೀಡುತ್ತಿದೆ. 5 ಉಪಾಧ್ಯಕ್ಷರ ಒಟ್ಟು ಮಾಸಿಕ ವೇತನ ರೂ.22,19,325 (ತಲಾ ರೂ.4,43,865), 6 ಕಚೇರಿಗಳ ಸಿಬ್ಬಂದಿ ವೆಚ್ಚ (ಫೆಬ್ರವರಿ ಮಾಹೆ) ರೂ. 27,15,304 ಸೇರಿ ಒಟ್ಟು ಒಟ್ಟು ಮಾಸಿಕ ವೆಚ್ಚ ರೂ. 55,33,116 (55 ಲಕ್ಷಕ್ಕೂ ಅಧಿಕ) ಆಗಿದೆ.

ಸಿದ್ದರಾಮಯ್ಯ, ಡಿಕೆ.ಶಿವಕುಮಾರ್ ಅವರೇ, ನಿಮ್ಮ ಪಕ್ಷದ ಅತೃಪ್ತ ಆತ್ಮಗಳನ್ನು ಸಾಕಲು ವರ್ಷಕ್ಕೆ ರೂ.6.6 ಕೋಟಿ ಲೂಟಿ ಮಾಡುತ್ತಿದ್ದೀರಿ. ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡುವುದು ಯಾವ ನ್ಯಾಯ? ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಇಡೀ ಸರ್ಕಾರಿ ಯಂತ್ರವೇ ಇರುವಾಗ, ಈ ರಾಜಕೀಯ ಗಂಜಿ ಕೇಂದ್ರದ ಅಗತ್ಯವೇನಿತ್ತು? ಇದನ್ನು "ಸಾಂಸ್ಥಿಕ ಭ್ರಷ್ಟಾಚಾರ", "ಸಾಂಸ್ಥಿಕ ಲೂಟಿ" ಅನ್ನದೆ ಇನ್ನೇನನ್ನಬೇಕು? ಗ್ಯಾರಂಟಿ ಹಣಕ್ಕೆ ಕಾಯುವ ಬಡವರಿಗೆ "ಪ್ರತಿ ತಿಂಗಳು ಸರಿಯಾಗಿ ಕೊಡೋದಕ್ಕೆ ಇದೇನು ಸಂಬಳಾನಾ" ಎನ್ನುತ್ತೀರಿ, ಆದರೆ ನಿಮ್ಮ ಪಕ್ಷದ ಅತೃಪ್ತರ ಜೇಬು ತುಂಬಿಸಲು ತಿಂಗಳಿಗೆ 55 ಲಕ್ಷ ಎಲ್ಲಿಂದ ಬರುತ್ತದೆ? ಎಂದು ಪ್ರಶ್ನೆ ಮಾಡಿದ್ದಾರೆ.

ಇದೇ ವೇಳೆ ಗ್ಯಾರಂಟಿ ಅನುಷ್ಠಾನ ಸಮಿತಿಯನ್ನು "ಅತೃಪ್ತ ಕಾಂಗ್ರೆಸ್ಸಿಗರ ಪುನರ್ವಸತಿ ಕೇಂದ್ರ" ಎಂದು ಕರೆದಿರುವ ಅವರು, ಕನ್ನಡಿಗರ ಬೆವರಿನ ತೆರಿಗೆ ಹಣವನ್ನು ಹೀಗೆ ಲೂಟಿ ಮಾಡುತ್ತಿರುವ ಈ ಕಾಂಗ್ರೆಸ್ ಸರ್ಕಾರದ 'ಪರ್ಸಂಟೇಜ್ ಮತ್ತು ಪೇಮೆಂಟ್' ರಾಜಕಾರಣಕ್ಕೆ ಮಂಗಳ ಹಾಡುವ ಕಾಲ ಹತ್ತಿರ ಬಂದಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನರಕ ಸೃಷ್ಟಿಸುತ್ತೇವೆ: ಅಮೆರಿಕಾ ಬೆದರಿಕೆಗೆ ಕ್ಯಾರೆ ಎನ್ನದ ಇರಾನ್; ಇಸ್ರೇಲ್-ಕುವೈತ್ ಮೇಲೆ ಕ್ಷಿಪಣಿ-ಡ್ರೋನ್ ದಾಳಿ..!

IPL 2026: ಅಹಮದಾಬಾದ್ ಮೈದಾನದಲ್ಲಿ RR ವಿರುದ್ಧ ಅತ್ಯಧಿಕ ರನ್ ಚೇಸ್‌ನಲ್ಲಿ ಕೊನೆಯ ಓವರ್‌ನಲ್ಲಿ ಸೋತ Gujarat Titans

ವಿದೇಶಗಳ Mk-84 ಗೆ ಪರ್ಯಾಯ, ಆತ್ಮನಿರ್ಭರತೆಗೆ ಉತ್ತೇಜನ: ದೇಶೀಯವಾಗಿ 1000-kg ವಾಯುಬಾಂಬ್‌ ತಯಾರಿಸಲಿರುವ ಭಾರತ!

ಮಾಗಡಿ Congress ಶಾಸಕ ಹೆಚ್​​.ಸಿ ಬಾಲಕೃಷ್ಣಗೆ ಕೋರ್ಟ್ ಶಾಕ್​​: ಜಾಮೀನು ರಹಿತ ವಾರೆಂಟ್ ಜಾರಿ

'ನೀವೇನು ಸುರಕ್ಷಿತ ಅಲ್ಲ': ಟ್ರಂಪ್ 48 ಗಂಟೆಗಳ ಕೊನೆ ಎಚ್ಚರಿಕೆ ಬೆನ್ನಲ್ಲೆ CIA Station ಗೆ ಡ್ರೋನ್ ನುಗ್ಗಿಸಿ ಇರಾನ್; 1 ನಿಮಿಷದ ಅಂತರದಲ್ಲಿ 2 ಸ್ಫೋಟ!

SCROLL FOR NEXT