ಸಿದ್ದರಾಮಯ್ಯ 
ರಾಜಕೀಯ

'ಉಪಚುನಾವಣೆ ಫಲಿತಾಂಶಕ್ಕೂ, ಸಿಎಂ ಕುರ್ಚಿಗೂ ಲಿಂಕ್ ಮಾಡಬೇಡಿ': ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?

ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಉಪ ಚುನಾವಣೆಯಲ್ಲಿ ನಮ್ಮ ಪಕ್ಷವು ಎರಡೂ ಸ್ಥಾನಗಳನ್ನು ಉಳಿಸಿಕೊಳ್ಳುತ್ತದೆ ಎಂದರು.

ಮೈಸೂರು: ಮುಂದಿನ ತಿಂಗಳು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಉಪ ಚುನಾವಣೆಯಲ್ಲಿ ನಮ್ಮ ಪಕ್ಷವು ಎರಡೂ ಸ್ಥಾನಗಳನ್ನು ಉಳಿಸಿಕೊಳ್ಳುತ್ತದೆ ಎಂದರು.

ದಾವಣಗೆರೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧದ ಬಂಡಾಯವನ್ನು ಶಮನಗೊಳಿಸಲಾಗಿದೆ, ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ ಎಂದು ಸಿಎಂ ತಿಳಿಸಿದರು.

ಮಾರ್ಚ್ 30 ಮತ್ತು 31 ರಂದು ಬಾಗಲಕೋಟೆಯಲ್ಲಿ ಮತ್ತು ಏಪ್ರಿಲ್ 1 ಹಾಗೂ 2 ರಂದು ದಾವಣಗೆರೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಾಗಿ ಸಿದ್ದರಾಮಯ್ಯ ಹೇಳಿದರು.

ಉಪಚುನಾವಣೆ ಫಲಿತಾಂಶಕ್ಕೂ ಸಿಎಂ ಕುರ್ಚಿಗೂ ಸಂಬಂಧ ಇಲ್ಲ

ಉಪಚುನಾವಣೆ ಫಲಿತಾಂಶಕ್ಕೂ ಮತ್ತು ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧ ಇಲ್ಲ. ಎರಡಕ್ಕೂ ಲಿಂಕ್ ಮಾಡಬೇಡಿ. ಹೈಕಮಾಂಡ್ ಒಪ್ಪಿದರೆ ಇನ್ನೂ ಎರಡು ಬಜೆಟ್ ಮಂಡಿಸುತ್ತೇನೆ ಎಂದು ಸಿಎಂ ಹೇಳಿದರು.

ಪಕ್ಷವು "ಖಂಡಿತವಾಗಿಯೂ ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುತ್ತದೆ" ಮತ್ತು 2028ರ ವಿಧಾನಸಭಾ ಚುನಾವಣೆಯಲ್ಲೂ ಗೆದ್ದು ಅಧಿಕಾರ ಉಳಿಸಿಕೊಳ್ಳುತ್ತದೆ ಎಂದು ಹೇಳಿದರು.

ಉಪಚುನಾವಣೆ ಫಲಿತಾಂಶವು ಜನ ಸರ್ಕಾರಕ್ಕೆ ಮಾಡುವ ಆರ್ಶೀವಾದ ಆಗಲಿದೆ. ಯಾವುದೇ ಚುನಾವಣೆ ನಡೆದರೂ ನಾವೇ ಗೆಲ್ಲುತ್ತೇವೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ