ಸಚಿವ ಜಮೀರ್ ಅಹ್ಮದ್ ಖಾನ್ online desk
ರಾಜಕೀಯ

ಜಮೀರ್-ಮಲ್ಲಿಕಾರ್ಜುನ್ ಜಟಾಪಟಿ: ದಾವಣಗೆರೆ ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಗೆ ಬಿಸಿ ತುಪ್ಪ; ಶಾಮನೂರು ಕುಟುಂಬದ ವಿರುದ್ಧ ಮುಸ್ಲಿಮರ ಕೋಪ!

ಮಲ್ಲಿಕಾರ್ಜುನ ಅವರಿಗೆ ಬೇಡವಾದರೆ ದಾವಣಗೆರೆ ದಕ್ಷಿಣಕ್ಕೆ ಹೋಗುವುದಿಲ್ಲ ಎಂದು ಜಮೀರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೇಳಿದ್ದರು.

ಬೆಂಗಳೂರು: ಉಪ ಚುನಾವಣೆ ನಡೆಯಲಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ ಶಾಮನೂರು ಪರ ಪ್ರಚಾರ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.

ಹೀಗಾಗಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮುಸ್ಲಿಂ ಮತಗಳನ್ನು ಗಳಿಸುವ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ. ಜಮೀರ್ ಸದ್ಯ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ 33 ಕ್ಷೇತ್ರಗಳ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ. ಸಮುದಾಯದ ಮತದಾರರ ಮೇಲೆ ಪ್ರಭಾವ ಬೀರಲು ಅವರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ ಮತ್ತು ಧರ್ಮಗುರುಗಳೊಂದಿಗೆ ಸಂವಹನ ನಡೆಸುತ್ತಿದ್ದಾರೆ.

ದಾವಣಗೆರೆ ದಕ್ಷಿಣದಿಂದ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಶಾಮನೂರು ಕಣದಲ್ಲಿದ್ದಾರೆ, ಕ್ಷೇತ್ರದಲ್ಲಿ ಪ್ರಚಾರಕ್ಕೆ ಜಮೀರ್ ಬಾರದೇ ಇದ್ದರೂ ನಡೆಯುತ್ತೆ ಎಂದು ಮಲ್ಲಿಕಾರ್ಜುನ್ ಹೇಳಿಕೆ ನೀಡಿದ್ದರು. ಈ ಬಗ್ಗೆ ಸಿದ್ದರಾಮಯ್ಯ ಜತೆ ಮಾತನಾಡಿರುವ ಜಮೀರ್‌, ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ, ಅಲ್ಲಿಗೆ ಪ್ರಚಾರಕ್ಕೆ ಹೋಗಬೇಕೇ ಎಂದು ಪ್ರಶ್ನಿಸಿದ್ದಾರೆಂದು ತಿಳಿದು ಬಂದಿದೆ.

ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಸಮುದಾಯದ ಸದಸ್ಯರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಜಮೀರ್ ಒತ್ತಾಯಿಸಿದ್ದರು. ಕಾಂಗ್ರೆಸ್ ನಾಯಕ ಸಾದಿಕ್ ಪೈಲ್ವಾನ್ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು, ಆದರೆ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಮತ್ತು ಪರಿಷತ್ತಿನ ಮುಖ್ಯ ಸಚೇತಕ ಎಂಎಲ್‌ಸಿ ಸಲೀಂ ಅಹ್ಮದ್ ಸೇರಿ ಸಾದಿಕ್ ಅವರ ಮನವೊಲಿಸುವಲ್ಲಿ ಯಶಸ್ವಿಯಾದರು.

ಮಲ್ಲಿಕಾರ್ಜುನ ಅವರಿಗೆ ಬೇಡವಾದರೆ ದಾವಣಗೆರೆ ದಕ್ಷಿಣಕ್ಕೆ ಹೋಗುವುದಿಲ್ಲ ಎಂದು ಜಮೀರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೇಳಿದ್ದರು. ತಮ್ಮ ಸಮುದಾಯದ ಸದಸ್ಯರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವಂತೆ ಮುಸ್ಲಿಂ ಧಾರ್ಮಿಕ ನಾಯಕರು ಮುದಾಯದ ಸದಸ್ಯರಿಗೆ ಆಗ್ರಹಿಸಿದ್ದಾರೆ, ಹೀಗಾಗಿ ಧಾರ್ಮಿಕ ಮುಖಂಡರ ಕೋಪಕ್ಕೆ ಹೆದರಿ ಜಮೀರ್ ದಾವಣಗೆರೆ ಕ್ಷೇತ್ರ ಪ್ರಚಾರ ನಿರಾಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET paper leak: ಯುವಕರ ಭವಿಷ್ಯದ ಜೊತೆ ಆಟ, ತಕ್ಷಣ ಧರ್ಮೇಂದ್ರ ಪ್ರಧಾನ್ ವಜಾಗೊಳಿಸಿ: ರಾಹುಲ್ ಗಾಂಧಿ ಆಗ್ರಹ

ನಟ Jayam Ravi ವಿಚ್ಛೇದನ: ನಿರಾಕರಿಸಿದ್ದು ಯಾರು?, ಮದುವೆಯಾಗಿದ್ದು ಯಾರು? ಎಂಬುದನ್ನು ಸಾಬೀತು ಪಡಿಸುತ್ತೇನೆ: ಆರ್ತಿ ತಾಯಿ ಸುಜಾತ

IPL 2026: 2 ಓವರ್ ನಲ್ಲಿ ಪಂದ್ಯ ಕಳೆದುಕೊಂಡ GT, KKRಗೆ 29 ರನ್ ಗಳ ಭರ್ಜರಿ ಜಯ

IPL 2026: ಗಾಯದ ನಡುವೆಯೂ ಭರ್ಜರಿ ಬ್ಯಾಟಿಂಗ್, Sai Sudharsan ದಾಖಲೆ

'ಪ್ಲೀಸ್ ನಾಳೆ ಒಂದಿನ ಗೆಲ್ರಪ್ಪಾ': ಎದುರಾಳಿ RCB ಬೆನ್ನು ಬಿದ್ದ CSK ಫ್ಯಾನ್ಸ್! ಬೆಂಗಳೂರು ಗೆಲುವು ಚೆನ್ನೈಗೇಕೆ ಮುಖ್ಯ?

SCROLL FOR NEXT