ಆರ್ ಅಶೋಕ್  
ರಾಜಕೀಯ

ಸಿಎಂ ಕುರ್ಚಿ ಕಚ್ಚಾಟ: ಒಳಜಗಳದ 3ನೇ ಬಾಗಿಲು ಖರ್ಗೆ ಓಪನ್ ಮಾಡಿದ್ದಾರೆ; ಆರ್.ಅಶೋಕ್ ವ್ಯಂಗ್ಯ

ರಾಜ್ಯದಲ್ಲಿ ಸಿಎಂ ಕುರ್ಚಿ ಕಲಹ ರಾಜ್ಯದ ಆಡಳಿತವನ್ನು ಕುಗ್ಗಿಸುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸ ಹೇಳಿಕೆ ನೀಡಿ ಇನ್ನಷ್ಟು ಗೊಂದಲ ಉಂಟುಮಾಡಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಒಳಜಗಳದ ವಿಚಾರ ಮತ್ತೆ ಚರ್ಚೆಗೆ ಕಾರಣವಾಗಿದ್ದು, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತೀವ್ರವಾಗಿ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಲಹದಿಂದ ಹೆಚ್ಚು ಗೊಂದಲ ಉಂಟಾಗಿದೆ. ಇಬ್ಬರ ಜಗಳ ಮೂರನೆಯವನಿಗೆ ಲಾಭ ಎಂಬಂತೆ ಮಲ್ಲಿಕಾರ್ಜುನ ಖರ್ಗೆ ( ಕೂಡ ಸಿಎಂ ಆಗಲು ಪ್ರಯತ್ನ ಮಾಡಿದ್ದಾರೆಂದು ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ ಸಿಎಂ ಕುರ್ಚಿ ಕಲಹ ರಾಜ್ಯದ ಆಡಳಿತವನ್ನು ಕುಗ್ಗಿಸುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸ ಹೇಳಿಕೆ ನೀಡಿ ಇನ್ನಷ್ಟು ಗೊಂದಲ ಉಂಟುಮಾಡಿದ್ದಾರೆ. ಮುಂದೆ ನನ್ನ ಪರ್ವ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳುತ್ತಿದ್ದು, ಆ ಪರ್ವಕ್ಕೆ ಕಲ್ಲು ಬಿದ್ದಿದೆ.

ಈಗ ಮಲ್ಲಿಕಾರ್ಜುನ ಖರ್ಗೆ ಮಧ್ಯ ಪ್ರವೇಶ ಮಾಡಿ ನನಗೂ ಆಸೆಯಿದೆ, ಹಿಂದೆ ನನಗೆ ಮೋಸವಾಗಿದೆ ಎಂದು ಹೇಳಿದ್ದಾರೆ. ಬಹುಶಃ ಕಾಂಗ್ರೆಸ್‌ ಹೈಕಮಾಂಡ್‌ನಿಂದ ಅವರು ಸಿಎಂ ಆಗಲು ಗ್ರೀನ್‌ ಸಿಗ್ನಲ್‌ ಸಿಕ್ಕಿರಬಹುದು. ಖರ್ಗೆ ಸಿಎಂ ಆಗಬೇಕೆಂದು ಈಗಾಗಲೇ ಎಲ್ಲರೂ ಹೇಳಿದ್ದಾರೆ. ನಾನು ಸಿಎಂ ಆಗಲು ಸಿದ್ಧನಿದ್ದೇನೆ ಎಂದು ಖರ್ಗೆ ಹೇಳಿದ್ದಾರೆ. ಇದೂವರೆಗೆ ಅವರು ಬಹಳ ಪ್ರಯತ್ನ ಮಾಡಿದ್ದರೂ ಸಿಎಂ ಆಗಿರಲಿಲ್ಲ. ಈ ಸಮಯದಲ್ಲಾದರೂ ಸಿಎಂ ಆಗೋಣ ಎಂದು ಪ್ರಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್‌ನಲ್ಲೀಗ ಇಬ್ಬರ ಜಗಳ ಮೂರನೆಯವನಿಗೆ ಲಾಭ ಎನ್ನುವಂತಾಗಿದೆ ಎಂದು ಹೇಳಿದರು.

ಸಿನಿಮಾದ ಕ್ಲೈಮಾಕ್ಸ್‌ನಲ್ಲಿ ಆಗುವಂತೆಯೇ ಮಲ್ಲಿಕಾರ್ಜುನ ಖರ್ಗೆ ಬಂದಿದ್ದಾರೆ. ಮಾತುಕತೆಗೆ ಇನ್ನಷ್ಟು ಸಮಯಬೇಕೆಂದು ಅವರು ಹೇಳಿದ್ದಾರೆ. ಹಾಗೆಯೇ ಆದರೆ, ಸಿಎಂ ಬದಲಾವಣೆ ಬಹಳ ತಡವಾಗುತ್ತದೆ. ಆ ವೇಳೆಗೆ ಚುನಾವಣೆ ಸಮೀಪ ಬಂದಿರುತ್ತದೆ. ರಾಜಸ್ಥಾನ, ಮಧ್ಯಪ್ರದೇಶದಲ್ಲಾದಂತೆ ಕಾಂಗ್ರೆಸ್‌ ಗೊಂದಲದ ಗೂಡಾಗಿ ಸರ್ವನಾಶವಾಗಲಿದೆ ಎಂದು ತಿಳಿಸಿದರು.

"ಕಾಂಗ್ರೆಸ್‌ನ ಆಂತರಿಕ ಜಗಳಗಳಲ್ಲಿ ನಮಗೆ ಯಾವುದೇ ಆಸಕ್ತಿ ಇಲ್ಲ. ಆದರೆ, ಈ ಅಂತ್ಯವಿಲ್ಲದ ಘರ್ಷಣೆ ರಾಜ್ಯದ ಆಡಳಿತವನ್ನು ಕುಗ್ಗಿಸುತ್ತಿದೆ ಹೀಗಾಗಿ ಮಾತನಾಡುವುದು ನಮ್ಮ ಕರ್ತವ್ಯವಾಗುತ್ತದೆ. 1,000 ದಿನಗಳಿಗೂ ಹೆಚ್ಚು ಕಾಲ, ರಾಜ್ಯವು ವಿಚಲಿತ, ವಿಭಜಿತ ಮತ್ತು ದಿಕ್ಕಿಲ್ಲದ ಸರ್ಕಾರವನ್ನು ಕಂಡಿದೆ. ಈಗ, ಬೆಂಗಳೂರಿನ ಪರಿಸ್ಥಿತಿಯನ್ನು ಸರಿಪಡಿಸಲು ದೆಹಲಿಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು 'ನಿಯೋಜಿಸಲಾಗಿದೆ ಎಂದು ಟೀಕಿಸಿದ್ದಾರೆ.

ಪ್ರತಿ 15 ದಿನಗಳಿಗೊಮ್ಮೆ ಬೆಂಗಳೂರು ನಗರಕ್ಕೆ ಪರಿಶೀಲನಾ ಪ್ರವಾಸಕ್ಕೆ ಹೋಗುವುದಾಗಿ ಮುಖ್ಯಮಂತ್ರಿಗಳು ಈ ಹಿಂದೆ ಘೋಷಿಸಿದ್ದರು. ಆದರೆ ಮೂರು ತಿಂಗಳಲ್ಲಿ ಒಂದೂ ಪರಿಶೀಲನೆಯನ್ನು ಮಾಡಿಲ್ಲ. ಮಳೆಗೆ ಯಾವುದೇ ಸಿದ್ಧತೆಗಳನ್ನು ಮಾಡಿಕೊಳ್ಳದ ಕಾರಣ ಜೀವಗಳು ಬಲಿಯಾಗಿವೆ. ಸಾವಿಗೆ ನ್ಯಾಯ ಕೊಡಿ ಎಂದು ಜನರು ಕೇಳಿದರೆ, ತಮ್ಮ ತಪ್ಪನ್ನು ಮುಚ್ಚಿಟ್ಟು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ಒಂದು ತಿಂಗಳ ಮುನ್ನ ಸಭೆ ನಡೆಸಿ, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಬಗ್ಗೆ ವರದಿ ಪಡೆದು ದುರಸ್ತಿ ಮಾಡಿಸಬೇಕಿತ್ತು. ನೀರು ನಿಲ್ಲುವ ಕಡೆ ನೀರು ಹರಿದುಹೋಗಲು ವ್ಯವಸ್ಥೆ ಮಾಡಬೇಕಿತ್ತು. ಏನೂ ಮಾಡದೆಯೇ ಬೌರಿಂಗ್‌ ಆಸ್ಪತ್ರೆ ಮುಖ್ಯಸ್ಥರ ವಿರುದ್ಧ, ಎಂಜಿನಿಯರ್‌ಗಳ ವಿರುದ್ಧ ಕ್ರಮ ವಹಿಸಿದ್ದಾರೆ. ಆಸ್ಪತ್ರೆ ಮುಖ್ಯಸ್ಥರು ರೋಗಿಗಳಿಗೆ ಹೇಗೆ ಚಿಕಿತ್ಸೆ ನೀಡಬೇಕೆಂದು ನೋಡುತ್ತಾರೆಯೋ ಹೊರತು, ಕಾಂಪೌಂಡ್‌ ದುರಸ್ತಿ ಮಾಡುವುದು ಅವರ ಜವಾಬ್ದಾರಿಯಲ್ಲ. ಈ ಸಾವುಗಳಿಗೆ ಮುಖ್ಯಮಂತ್ರಿಯೇ ನೇರ ಕಾರಣ. ಇದರಲ್ಲಿ ಅಧಿಕಾರಿಗಳ ತಪ್ಪಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಾರ್ಮುಜ್ ಜಲಸಂಧಿ ಒಪ್ಪಂದ ಸನ್ನಿಹಿತ, ಆದರೆ ಯಾವುದಾದರೊಂದು ದೇಶ ತನ್ನ ನಿಲುವಿನಲ್ಲಿ ಸಡಿಲಿಕೆ ತೋರಿಸಬೇಕು: ಇರಾನ್-ಯುಎಸ್

Mojtaba Khamenei ಎಲ್ಲಿದ್ದಾರೆ? ರಹಸ್ಯ ತಾಣದಲ್ಲಿ ಪರಮೋಚ್ಛ ನಾಯಕ; ಅವರ ಉಪಸ್ಥಿತಿಯೇ ನಮ್ಮ ಧೈರ್ಯ ಎಂದ Iran ಅಧ್ಯಕ್ಷ

ಅಸಮಾಧಾನಿತ ಶಾಸಕರ ಸಮಸ್ಯೆ ಆಲಿಸಿದ್ದೇವೆ, ನಾವೆಲ್ಲಾ ಒಂದು ಕುಟುಂಬ- ಸುರ್ಜೆವಾಲ; ಸಚಿವ ಸ್ಥಾನ ಹೊರತಾಗಿ ಬೇರೆ ಏನು ಕೊಟ್ಟರೂ ಒಪ್ಪಲ್ಲ- ಎಂ ಕೃಷ್ಣಪ್ಪ

Sheikh Hasina: ವಾಪಸ್ ಬಾಂಗ್ಲಾದೇಶಕ್ಕೆ ಹೋಗಲು ನಿರ್ಧರಿಸಿದ್ದೇನೆ; ನನ್ನನ್ನು ಕೊಲ್ಲಲಿ, ಜೈಲಿಗೆ ಹಾಕಲಿ - ಶೇಖ್ ಹಸೀನಾ

ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ