ಬಿ ವೈ ವಿಜಯೇಂದ್ರ  
ರಾಜಕೀಯ

'ಜನರ ತೀರ್ಪು ಗೌರವಿಸಿ 2 ವರ್ಷ ಶಾಸಕರಾಗಿ ಕೆಲಸ ಮಾಡಲು ಜೀವರಾಜ್ ಅವರಿಗೆ ಅವಕಾಶ ನೀಡಬೇಕು': ಬಿ.ವೈ ವಿಜಯೇಂದ್ರ; Video

ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಅಧಿಕಾರಿಗಳ ಮೇಲೆ ಸಾಕಷ್ಟು ಒತ್ತಡ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ನಮಗೆ ಮಾಹಿತಿ ಬಂದಿದೆ ಎಂದರು.

ಬೆಂಗಳೂರು: 2023ರಲ್ಲಿ ಪರಾಭವಗೊಂಡಾಗಲೇ ಡಿ ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರೆಗೆ ಕೂಡ ಹೋಯಿತು. ಈಗ ಹೈಕೋರ್ಟ್ ಆದೇಶ ಪ್ರಕಾರ ಅಂಚೆಮತ ಮರು ಎಣಿಕೆ ಆಗಿದೆ. ಮಧ್ಯರಾತ್ರಿಯೇ ನಮಗೆ ಮಾಹಿತಿ ಸಿಕ್ಕಿತು, ಜೀವರಾಜ್ ಅವರು 56 ಮತಗಳಿಂಗ ಗೆದ್ದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಅಧಿಕಾರಿಗಳ ಮೇಲೆ ಸಾಕಷ್ಟು ಒತ್ತಡ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ನಮಗೆ ಮಾಹಿತಿ ಬಂದಿದೆ. ಚುನಾವಣಾ ಫಲಿತಾಂಶ ಘೋಷಣೆ ಮಾಡಬಾರದು ಎಂದು ಕೂಡ ಹೇಳುತ್ತಿದ್ದಾರೆ, ರಾಜೇಗೌಡರಿಗೆ ಹೈಕೋರ್ಟ್ ಮೊರೆ ಹೋಗಲು ಸಮಯ ಕೊಡಬೇಕೆಂದು ಕುತಂತ್ರ ನಡೆಸುತ್ತಿದ್ದಾರೆ ಎಂಬ ವಿಚಾರ ನಮಗೆ ಗೊತ್ತಾಗಿದೆ ಎಂದು ವಿಜಯೇಂದ್ರ ಆರೋಪಿಸಿದರು.

ಜೀವರಾಜ್ ಅವರು ಜನರ ಆಶೀರ್ವಾದದಿಂದ ಗೆದ್ದಿದ್ದಾರೆ, ಅವರಿಗೆ ಈಗಾಗಲೇ ಮೂರು ವರ್ಷ ಅನ್ಯಾಯವಾಗಿದೆ. ಇನ್ನು ಎರಡು ವರ್ಷವಾದರೂ ಗೌರವಯುತವಾಗಿ ಜನರ ಆಶೀರ್ವಾದದಂತೆ ಶಾಸಕರಾಗಿ ಕೆಲಸ ಮಾಡಲು ಅವಕಾಶ ನೀಡಬೇಕೆಂದು ಕೇಳಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಸಮಾಧಾನಿತ ಶಾಸಕರ ಸಮಸ್ಯೆ ಆಲಿಸಿದ್ದೇವೆ, ನಾವೆಲ್ಲಾ ಒಂದು ಕುಟುಂಬ- ಸುರ್ಜೆವಾಲ; ಸಚಿವ ಸ್ಥಾನ ಹೊರತಾಗಿ ಬೇರೆ ಏನು ಕೊಟ್ಟರೂ ಒಪ್ಪಲ್ಲ- ಎಂ ಕೃಷ್ಣಪ್ಪ

Sheikh Hasina: ವಾಪಸ್ ಬಾಂಗ್ಲಾದೇಶಕ್ಕೆ ಹೋಗಲು ನಿರ್ಧರಿಸಿದ್ದೇನೆ; ನನ್ನನ್ನು ಕೊಲ್ಲಲಿ, ಜೈಲಿಗೆ ಹಾಕಲಿ - ಶೇಖ್ ಹಸೀನಾ

ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ

E20 ಪೆಟ್ರೋಲ್ ನಲ್ಲಿ ಹೆಚ್ಚು ಕ್ಲೋರೈಡ್ ಮಟ್ಟ ತೋರಿಸಿದ್ದ SIAM; ಸಚಿವಾಲಯಕ್ಕೆ ಕಳುಹಿಸಿದ್ದ ಪತ್ರ ವಾಪಸ್

"ಜನ ನಾಯಗನ್ ಬಜೆಟ್': ಮಹಿಳೆಯರು, ಯುವಜನತೆಗೆ ದಳಪತಿ ವಿಜಯ್ ಬಂಪರ್ ಗಿಫ್ಟ್; ಶಾಲಾ ಶಿಕ್ಷಣಕ್ಕೆ ಅತಿ ಹೆಚ್ಚು ಅನುದಾನ