ರಾಹುಲ್ ಗಾಂಧಿ - ಮಲ್ಲಿಕಾರ್ಜುನ ಖರ್ಗೆ 
ರಾಜಕೀಯ

ಶೃಂಗೇರಿಯಲ್ಲಿ ಕಾಂಗ್ರೆಸ್ ಗೆಲುವು ಅಸಿಂಧು; ಸತ್ಯಕ್ಕೆ ಜಯ: ಈಗ ವೋಟ್ ಚೋರ್ ಕೌನ್ ಹೈ..?

ಜನಾದೇಶಕ್ಕೆ ಮೋಸ ಮಾಡಿ ಅಕ್ರಮವಾಗಿ ಗೆಲುವು ಸಾಧಿಸಲು ಅಧಿಕಾರ ದುರ್ಬಳಕೆ ಮಾಡಿಕೊಂಡ ಕಾಂಗ್ರೆಸ್ ಪಕ್ಷಕ್ಕೆ ನ್ಯಾಯಾಂಗ ತಕ್ಕ ಉತ್ತರ ನೀಡಿದೆ.

ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಫಲಿತಾಂಶ ಕಾಂಗ್ರೆಸ್ ಪಕ್ಷದ ಕರಾಳ ಮುಖವನ್ನ ಮತ್ತೊಮ್ಮೆ ಬಯಲು ಮಾಡಿದೆ. ಜನಾದೇಶಕ್ಕೆ ಮೋಸ ಮಾಡಿ ಅಕ್ರಮವಾಗಿ ಗೆಲುವು ಸಾಧಿಸಲು ಅಧಿಕಾರ ದುರ್ಬಳಕೆ ಮಾಡಿಕೊಂಡ ಕಾಂಗ್ರೆಸ್ ಪಕ್ಷಕ್ಕೆ ನ್ಯಾಯಾಂಗ ನೀಡಿದ ತಕ್ಕ ಉತ್ತರ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಹೇಳಿದ್ದಾರೆ.

ಶೃಂಗೇರಿ ವಿಧಾನಸಭಾ ಚುನಾವಣೆಯ ಅಂಚೆ ಮತಗಳ ಮರು ಎಣಿಕೆ ಫಲಿತಾಂಶ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಶೃಂಗೇರಿಯಲ್ಲಿ ಕಾಂಗ್ರೆಸ್ ಗೆಲುವು ಅಸಿಂಧುವಾಗಿದ್ದು, ಸತ್ಯಕ್ಕೆ ಜಯ ಸಿಕ್ಕಿದೆ. ಈಗ ವೋಟ್ ಚೋರ್ ಕೌನ್ ಹೈ...? ಎಂದು ಪ್ರಶ್ನೆ ಮಾಡಿದ್ದಾರೆ.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಫಲಿತಾಂಶ ಕಾಂಗ್ರೆಸ್ ಪಕ್ಷದ ಕರಾಳ ಮುಖವನ್ನ ಮತ್ತೊಮ್ಮೆ ಬಯಲು ಮಾಡಿದೆ. ಜನಾದೇಶಕ್ಕೆ ಮೋಸ ಮಾಡಿ ಅಕ್ರಮವಾಗಿ ಗೆಲುವು ಸಾಧಿಸಲು ಅಧಿಕಾರ ದುರ್ಬಳಕೆ ಮಾಡಿಕೊಂಡ ಕಾಂಗ್ರೆಸ್ ಪಕ್ಷಕ್ಕೆ ನ್ಯಾಯಾಂಗ ತಕ್ಕ ಉತ್ತರ ನೀಡಿದೆ. 2023ರ ಚುನಾವಣೆಯಲ್ಲಿ 279 ಅಂಚೆ ಮತಗಳನ್ನು ಅಕ್ರಮವಾಗಿ ತಿರಸ್ಕರಿಸುವ ಮೂಲಕ ಜನಾದೇಶವನ್ನು ಕಸಿದುಕೊಳ್ಳಲಾಗಿತ್ತು. ಅಂದು ಬಿಜೆಪಿ ಅಭ್ಯರ್ಥಿ ಶ್ರೀ ಡಿ.ಎನ್. ಜೀವರಾಜ್ ಅವರ ಮನವಿಯನ್ನು ತಿರಸ್ಕರಿಸಿ ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡರನ್ನು ವಿಜೇತರೆಂದು ಘೋಷಿಸಲಾಗಿತ್ತು.

ಅಧಿಕಾರ ಬಲಕ್ಕೆ ಮಣಿಯದ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿ ಆರ್. ನಟರಾಜ್ ಅವರ ಪೀಠವು ನೀಡಿದ ಐತಿಹಾಸಿಕ ಆದೇಶದಂತೆ ನಿನ್ನೆ ಮರು ಎಣಿಕೆ ನಡೆಯಿತು. ಕಾಂಗ್ರೆಸ್ ಪಕ್ಷದ ಮೋಸ ಬಯಲಾಗಿದೆ ಎಂದು ಹೇಳಿದ್ದಾರೆ.

ಕಳೆದ ಮೂರು ವರ್ಷಗಳಿಂದ ಅನರ್ಹವಾಗಿ ಅಧಿಕಾರ ಅನುಭವಿಸಿದ ಕಾಂಗ್ರೆಸ್‌ಗೆ ಈಗ ಮುಖಭಂಗವಾಗಿದೆ. ಇದು ಕೇವಲ ಒಬ್ಬ ವ್ಯಕ್ತಿಯ ಗೆಲುವಲ್ಲ, ಇದು ಪ್ರಜಾಪ್ರಭುತ್ವದ ಗೆಲುವು. ಶೃಂಗೇರಿಯ ಮತದಾರರ ಮತದ ಮೌಲ್ಯಕ್ಕೆ ಸಂದ ಜಯವಾಗಿದೆ. ನ್ಯಾಯದೇವತೆಯ ಮೇಲೆ ವಿಶ್ವಾಸವಿಟ್ಟು ಸಂವಿಧಾನಾತ್ಮಕವಾಗಿ ಹೋರಾಡಿ ನ್ಯಾಯ ಪಡೆದ ಶ್ರೀ ಡಿ.ಎನ್. ಜೀವರಾಜ್ (@DNJeevaraj) ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್