ಬಸವರಾಜ ಬೊಮ್ಮಾಯಿ  
ರಾಜಕೀಯ

ನೆಹರು-ಗಾಂಧಿ ಕುಟುಂಬದ ಮನಸ್ಸು ಗೆದ್ದವರಿಗೆ ಮಾತ್ರ ಕಾಂಗ್ರೆಸ್ ನಲ್ಲಿ ಸಿಎಂ ಪಟ್ಟ: ಬಸವರಾಜ ಬೊಮ್ಮಾಯಿ

ವಿಪರೀತ ಅಧಿಕಾರದ ಆಸೆಯಿಂದ ನಾಯಕರಲ್ಲಿ ತಿಕ್ಕಾಟ ಶುರುವಾಗಿದೆ ಎಂದರು. ಕ್ಯಾಬಿನೆಟ್ ಸಚಿವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕೆಲವರು ಮೂರು ಬಾರಿ ಗೆದ್ದಿದ್ದೇವೆ ನಮಗೆ ಸಚಿವ ಸ್ಥಾನ ಕೊಡಿ ಅಂತ ಕೇಳುತ್ತಾರೆ.

ಗದಗ: ಕಾಂಗ್ರೆಸ್ ನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮನಸ್ಸು ಯಾರು ಗೆಲ್ಲುತ್ತಾರೆ ಅವರು ಸಿಎಂ ಆಗುತ್ತಾರೆ. ಇದು ಪ್ರಜಾಪಭುತ್ವದ ವ್ಯವಸ್ಥೆಗೆ ನಾಚಿಗೇಡಿನ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪರೀತ ಅಧಿಕಾರದ ಆಸೆಯಿಂದ ನಾಯಕರಲ್ಲಿ ತಿಕ್ಕಾಟ ಶುರುವಾಗಿದೆ ಎಂದರು. ಕ್ಯಾಬಿನೆಟ್ ಸಚಿವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕೆಲವರು ಮೂರು ಬಾರಿ ಗೆದ್ದಿದ್ದೇವೆ ನಮಗೆ ಸಚಿವ ಸ್ಥಾನ ಕೊಡಿ ಅಂತ ಕೇಳುತ್ತಾರೆ.

ಹೊಸಬರು ತಮಗೂ ಸಚಿವ ಸ್ಥಾನ ಕೇಳುತ್ತಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಕುರ್ಚಿ ಉಳಿಸಿಕೊಳ್ಳಲು ಪಯತ್ನ ನಡೆಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯವರು ಬಹಳ ಹಿರಿಯವರು ಅವರು ತಮಗೆ ನ್ಯಾಯ ಸಮ್ಮತವಾಗಿ ಸಿಎಂ ಸ್ಥಾನ ಸಿಗಬೇಕು ಎಂಬ ನೋವು ಅವರ ಮನಸಿನಲ್ಲಿದೆ. ಅದಕ್ಕಾಗಿ ಆ ಭಾವನೆ ವ್ಯಪಡಿಸಿದ್ದಾರೆ ಎಂದರು.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹೈಕಮಾಂಡ್ ಅಂದರೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅಂತಾರೆ, ಮಲ್ಲಿಕಾರ್ಜುನ ಖಗೆರ್ಯವರು ಹೈಕಮಾಂಡ್ ಅಂದರೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅಂತಾರೆ ಇದೊಂದು ಕುಟುಂಬ ಆಧಾರಿತ ಪಕ್ಷ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಕಾಂ ಗಾಂಧಿ ಮನಸ್ಸು ಯಾರು ಗೆಲ್ಲುತ್ತಾರೋ ಅವರು ಸಿಎಂ ಆಗುತ್ತಾರೆ.

ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ನಾಚಿಗೇಡಿನ ಸಂಗತಿ, ಬಹಳಷ್ಟು ಪ್ರಜಾಪಭುತ್ವದ ಬಗ್ಗೆ ಮಾತನಾಡುವ ಕಾಂಗ್ರೆಸ್ಸಿಗರು ತಮ್ಮ ಪಕ್ಷದ ಅಂತರಿಕ ಪ್ರಜಾಪ್ರಭುತ್ವವವನ್ನೇ ಸಂಪೂರ್ಣವಾಗಿ ಕೊಲೆ ಮಾಡಿರುವುದು ಎದ್ದು ಕಾಣಿಸುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ