ಬಿ ಎಸ್ ಯಡಿಯೂರಪ್ಪ 
ರಾಜಕೀಯ

ಪಶ್ಚಿಮ ಬಂಗಾಳದಲ್ಲಿ TMC ಸೋತಂತೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿಪಟ: ಬಿ.ಎಸ್ ಯಡಿಯೂರಪ್ಪ

ಒಂದೆರಡು ಸ್ಥಾನಗಳನ್ನೂ ಗೆಲ್ಲಲೂ ಆಗದ ಕಾಂಗ್ರೆಸ್‍ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಜನತೆಯ ದೃಢವಿಶ್ವಾಸವನ್ನು ಮತ್ತೊಮ್ಮೆ ದೃಢಪಡಿಸಿದೆ.

ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಧೂಳೀಪಟವಾದಂತೆ ರಾಜ್ಯದಲ್ಲೂ ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ನೆಲಕಚ್ಚಲಿದೆ. ಕಾಂಗ್ರೆಸ್‍ಗೆ ಯಾವುದೇ ಭವಿಷ್ಯ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಂದೆರಡು ಸ್ಥಾನಗಳನ್ನೂ ಗೆಲ್ಲಲೂ ಆಗದ ಕಾಂಗ್ರೆಸ್‍ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಜನತೆಯ ದೃಢವಿಶ್ವಾಸವನ್ನು ಮತ್ತೊಮ್ಮೆ ದೃಢಪಡಿಸಿದೆ.

ಇದೊಂದು ಐತಿಹಾಸಿಕ ಫಲಿತಾಂಶ. ಇದಕ್ಕಾಗಿ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನವೀನ್ ಅವರು ನಿರಂತರ ಮಾರ್ಗದರ್ಶನ ನೀಡಿದ್ದಾರೆ ಮತ್ತು ಪಕ್ಷವನ್ನು ಸೂಕ್ತವಾಗಿ ಮುನ್ನಡೆಸಿದ್ದಾರೆ ಎಂದರು. ಮತದಾರರು ಅಭಿವೃದ್ಧಿಗಾಗಿ ಎನ್‌ಡಿಎಯ ಬದ್ಧತೆ ಮತ್ತು "ವಿಕ್ಷಿತ ಭಾರತ" ನಿರ್ಮಿಸುವ ದೃಷ್ಟಿಕೋನವನ್ನು ಆಶೀರ್ವದಿಸಿದ್ದಾರೆ.

ಉಚಿತ ಗ್ಯಾರಂಟಿ ಭರವಸೆಗಳಿಂದ ಜನರನ್ನು ದೀರ್ಘಕಾಲ ದಾರಿತಪ್ಪಿಸಲು ಸಾಧ್ಯವಿಲ್ಲ ಎಂದು ವಿಧಾನಸಭಾ ಚುನಾವಣಾ ಫಲಿತಾಂಶಗಳು ಸಾಬೀತುಪಡಿಸುತ್ತವೆ ಎಂದು ಅವರು ಹೇಳಿದರು. ಉಪಚುನಾವಣೆಗಳಲ್ಲಿನ ಸೋಲು ನೋವು ತಂದಿದ್ದು, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಪ್ರವಾಸ ಮಾಡುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel