ಆರ್.ಅಶೋಕ್ ಸಾಂದರ್ಭಿಕ ಚಿತ್ರ 
ರಾಜಕೀಯ

DMK ಬೆನ್ನಿಗೆ ಕಾಂಗ್ರೆಸ್ ಚೂರಿ ಹಾಕಿದೆ; ಇಂಡಿಯಾ ಒಕ್ಕೂಟ ಪಕ್ಷಗಳು ಪರಾಮರ್ಶೆ ಮಾಡಿಕೊಳ್ಳಲಿ: ಆರ್.ಅಶೋಕ್

ವಿಜಯ್ ನೇತೃತ್ವದ TVK ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿರುವುದರಿಂದ, ಇಂಡಿಯಾ ಮೈತ್ರಿಕೂಟದಲ್ಲಿರುವ ಇತರ ಪಕ್ಷಗಳು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಹೇಳಿದ್ದಾರೆ.

ಬೆಂಗಳೂರು: ತಮಿಳುನಾಡಿನಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (DMK) ಜೊತೆಗಿನ ಮೈತ್ರಿಯನ್ನು ಮುರಿದು ತಮಿಳಗ ವೆಟ್ರಿ ಕಳಗಂ (TVK) ಜೊತೆ ಕೈಜೋಡಿಸಿರುವ ಕಾಂಗ್ರೆಸ್‌ನ “ನಿಜಸ್ವರೂಪ” ಬಹಿರಂಗವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಬುಧವಾರ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಡಿಎಂಕೆ ಚುನಾವಣೆಯಲ್ಲಿ ಸೋತ ಕೂಡಲೇ ಕಾಂಗ್ರೆಸ್ ವಿಜಯ್ ನೇತೃತ್ವದ TVK ಜೊತೆ ಸೇರಿಕೊಂಡಿದೆ. ಕಾಂಗ್ರೆಸ್‌ಗೆ ಯಾವುದೇ ಸಿದ್ಧಾಂತವಿಲ್ಲ. ಡಿಎಂಕೆ ವಿಶ್ವಾಸಕ್ಕೆ ದ್ರೋಹ ಮಾಡಿದೆ. ಅದಕ್ಕಾಗಿಯೇ ಜನರು ಕಾಂಗ್ರೆಸ್‌ನ್ನು ನಂಬುವುದಿಲ್ಲ ಎಂದು ಕಿಡಿಕಾರಿದರು.

ವಿಜಯ್ ನೇತೃತ್ವದ TVK ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿರುವುದರಿಂದ, ಇಂಡಿಯಾ ಮೈತ್ರಿಕೂಟದಲ್ಲಿರುವ ಇತರ ಪಕ್ಷಗಳು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಡಿಎಂಕೆಗೆ ಬೆನ್ನಿಗೆ ಚೂರಿ ಹಾಕಿದೆ. ಈಗ ಡಿಎಂಕೆ ಒಂಟಿಯಾಗಿಬಿಟ್ಟಿದೆ. ಗೆಲ್ಲುವ ಕುದುರೆಯ ಬಾಲ ಹಿಡಿಯುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ ಎಂದು ವ್ಯಂಗ್ಯವಾಡಿದ್ದಾರೆ.

ಈ ಬೆಳವಣಿಗೆಯಿಂದ ಕಾಂಗ್ರೆಸ್ ನಂಬಿಕೆಗೆ ಅರ್ಹವಲ್ಲ ಎಂಬುದು ಸ್ಪಷ್ಟವಾಗಿದೆ. INDIA ಮೈತ್ರಿಕೂಟದಲ್ಲಿರುವ ಪಕ್ಷಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಅವರಿಗೆ ಕೂಡ ಇದೇ ರೀತಿಯ ಪರಿಸ್ಥಿತಿ ಎದುರಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತಂತೆಯೂ ಮಾತನಾಡಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಧ್ಯಪ್ರವೇಶಿಸಿದ ಬಳಿಕ ಮುಖ್ಯಮಂತ್ರಿ ಕುರ್ಚಿಯ ಚರ್ಚೆ ನಿಂತಿದೆ ಎಂದು ಹೇಳಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದರು. ಈಗ ಅವರ ಕನಸು ಭಗ್ನವಾಗಿದೆ” ಎಂದು ಟೀಕಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!