ನಿಖಿಲ್ ಕುಮಾರಸ್ವಾಮಿ 
ರಾಜಕೀಯ

'ನಿಮ್ಮನ್ನು ಅಹಿಂದ ಚಾಂಪಿಯನ್ ಮಾಡಿದ್ದು ಯಾರು ಅನ್ನೋದನ್ನು ಮರೆತಿದ್ದೀರಾ? ನಮ್ಮ ಪಕ್ಷದಿಂದ ರಾಜಕೀಯವಾಗಿ ಬೆಳೆದು, ತಿಂದುಂಡು ದ್ರೋಹ'!

ಕಳೆದ ಎರಡು ದಶಕಗಳಲ್ಲಿ 54 ಜನರು ಜೆಡಿಎಸ್​ (JDS) ಪಕ್ಷದಿಂದ ಶಾಸಕರಾಗಿ ಅಧಿಕಾರ ಅನುಭವಿಸಿ, ರಾಜಕೀಯ ಲಾಭಕ್ಕಾಗಿ ಪಕ್ಷ ಬಿಟ್ಟು ಹೋದರು. ಅಷ್ಟು ಜನ ಬಿಟ್ಟರೂ ಪಕ್ಷ ಇಷ್ಟು ಸದೃಢವಾಗಿದೆ ಎಂದರೆ ಅದು ನಿಮ್ಮಂಥ ನಿಷ್ಠಾವಂತ ಕಾರ್ಯಕರ್ತರಿಂದ.

ಮೈಸೂರು: ಸಿದ್ದರಾಮಯ್ಯ ಅವರು ಸದನದ ಒಳಗಡೆ ಜೆಡಿಎಸ್ 17 ಸ್ಥಾನದಿಂದ ಸಿಂಗಲ್ ಡಿಜಿಟ್‌ಗೆ ಬರುತ್ತೆ ಎಂದು ಅಪಹಾಸ್ಯ ಮಾಡಿದ್ದಾರೆ. ವರುಣದಲ್ಲೇ ಈ ಸವಾಲನ್ನು ಸ್ವೀಕರಿಸುತ್ತೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನೇರ ಸವಾಲು ಹಾಕಿದರು.

ವರುಣ ಕ್ಷೇತ್ರದ ಮೆಲ್ಲಹಳ್ಳಿಯಲ್ಲಿ ನಡೆದ ಜನರೊಂದಿಗೆ ಜನತಾದಳ ಸಮಾರಂಭದಲ್ಲಿ ಮಾತನಾಡಿದ ಅವರು, 2004ರಲ್ಲಿ ಜೆಡಿಎಸ್‌ 58 ಸ್ಥಾನ ಪಡೆದಿತ್ತು. ಅದಕ್ಕಿಂತ ಒಂದು ಸ್ಥಾನ ಹೆಚ್ಚಾಗಿ ಪಡೆದು, 2028ಕ್ಕೆ ಎನ್‌ಡಿಎ ಸರ್ಕಾರ ರಚನೆ ಮಾಡುತ್ತೇವೆ ಎಂದು ತಿರುಗೇಟು ನೀಡಿದರು.

ಅಹಿಂದ ನಾಯಕ ಅಂತ ಹೇಳುವವರು, ನಿಮ್ಮನ್ನು ಚಾಂಪಿಯನ್ ಮಾಡಿದ್ದು ಯಾರು ಅನ್ನೋದನ್ನು ಮರೆತಿದ್ದೀರಾ? ಎಂದು ಪ್ರಶ್ನಿಸಿದ ನಿಖಿಲ್, ಇಂದು ದಾಖಲೆ ಬಜೆಟ್ ಮಂಡಿಸಿದ್ದೇನೆ ಎಂದು ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಮಾಜವಾದಿ ಅಂತ ಗುರುತಿಸಿಕೊಳ್ಳುವುದಕ್ಕೆ ಪಕ್ಷ ಯಾವುದು? ನಾಯಕರು ಯಾರು?" ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ ಅವರು, ನಮ್ಮ ಪಕ್ಷದಿಂದ ರಾಜಕೀಯವಾಗಿ ಬೆಳೆದು, ಉಂಡು ತಿಂದು ಬೆಳೆದವರು ಮನೆಗೆ ದ್ರೋಹ ಮಾಡಿದ್ದಾರೆ. ಸದನದ ಒಳಗೆ ಜೆಡಿಎಸ್​ 17 ಸ್ಥಾನಗಳಿಂದ ಸಿಂಗಲ್ ಡಿಜಿಟ್‌ಗೆ ಬರುತ್ತೆ ಎಂದು ಅಪಹಾಸ್ಯ ಮಾಡಿದರು"ಎಂದು ಆರೋಪಿಸಿದರು.

ಕಳೆದ ಎರಡು ದಶಕಗಳಲ್ಲಿ 54 ಜನರು ಜೆಡಿಎಸ್​ (JDS) ಪಕ್ಷದಿಂದ ಶಾಸಕರಾಗಿ ಅಧಿಕಾರ ಅನುಭವಿಸಿ, ರಾಜಕೀಯ ಲಾಭಕ್ಕಾಗಿ ಪಕ್ಷ ಬಿಟ್ಟು ಹೋದರು. ಅಷ್ಟು ಜನ ಬಿಟ್ಟರೂ ಪಕ್ಷ ಇಷ್ಟು ಸದೃಢವಾಗಿದೆ ಎಂದರೆ, ಅದು ನಿಮ್ಮಂಥ ನಿಷ್ಠಾವಂತ ಕಾರ್ಯಕರ್ತರಿಂದ ಎಂದು ಕಾರ್ಯಕರ್ತರಿಗೆ ಧೈರ್ಯ ತುಂಬಿದರು.

ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಕುರ್ಚಿ ಕದನ ಮತ್ತು ಸುಳ್ಳು ಪ್ರಚಾರದಿಂದ ರಾಜ್ಯದ ವ್ಯವಸ್ಥೆ ಮೂರಾಬಟ್ಟೆಯಾಗಿದೆ. ಕಳೆದ 3 ವರ್ಷಗಳಲ್ಲಿ SCP/TSP ಅಡಿ ದಲಿತ ಅಭಿವೃದ್ಧಿಗೆ ನಿಗದಿಯಾಗಿದ್ದ ₹29,764.10 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲಾಗಿದೆ. ಅನುದಾನವನ್ನು ₹190 ಕೋಟಿಯಿಂದ ₹50 ಕೋಟಿಗೆ ಇಳಿಸಿ, ₹140 ಕೋಟಿ ಕಡಿತ ಮಾಡಿರುವುದು ದಲಿತರಿಗೆ ಮಾಡಿದ ದ್ರೋಹ ಎಂದು ನಿಖಿಲ್ ಕಿಡಿಕಾರಿದರು.

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ 2,416 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಮಾತ್ರ ಕಳೆದ 2 ವರ್ಷಗಳಲ್ಲಿ 138 ರೈತರು ಬಲಿಯಾಗಿದ್ದಾರೆ. 2026ರ ಅಂತ್ಯಕ್ಕೆ ರಾಜ್ಯದ ಒಟ್ಟು ಸಾಲ ₹7.64 ಲಕ್ಷ ಕೋಟಿ ಮೀರಲಿದೆ ಎಂದು ಅಂಕಿ-ಅಂಶ ಸಮೇತ ವಿವರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!