ಪ್ರಿಯಾಂಕ್ ಖರ್ಗೆ, ಪ್ರಧಾನಿ ಮೋದಿ (ಸಾಂದರ್ಭಿಕ ಚಿತ್ರ) 
ರಾಜಕೀಯ

ಬಂಗಾರ ತ್ಯಜಿಸುವುದು ಅಚ್ಚೆ ದಿನ್, ಬದುಕು ತ್ಯಜಿಸುವುದು ಅಮೃತ್ ಕಾಲ್, ಇದು ಮೋದಿ ಮ್ಯಾಜಿಕ್: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಭಾರತವು ಎಕನಾಮಿಕಲ್ ಎಮರ್ಜೆನ್ಸಿ ಸ್ಥಿತಿಯ ಎದುರು ನಿಂತಿದೆಯೇ? ಬಂಗಾರ ಖರೀದಿಸಬೇಡಿ ಎಂಬ ಹೇಳಿಕೆ ನೀಡುವ ಮುನ್ನ 85 ಬಿಲಿಯನ್ ಡಾಲರ್ ಗಾತ್ರದ ಭಾರತದ ಜ್ಯುವೆಲ್ಲರಿ ಮಾರ್ಕೆಟ್ ನಂಬಿ ಬದುಕುತ್ತಿರುವ ಕುಟುಂಬಗಳ ರಕ್ಷಣೆಯ ಬಗ್ಗೆ ಯೋಚಿಸಿದ್ದಾರೆಯೇ?

ಬೆಂಗಳೂರು: ತಮ್ಮ ವೈಫಲ್ಯದ ಆಡಳಿತದ ಕಾರಣಕ್ಕೆ ಜನರಿಂದ ತ್ಯಾಗವನ್ನು ಬಯಸುವುದಕ್ಕೆ "ಅಮೃತ ಕಾಲ" ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೆಸರಿಟ್ಟಿದ್ದಾರೆ. ಹೊಣೆಗಾರಿಕೆ ಮತ್ತು ಉತ್ತರದಾಯಿತ್ವದ ಜವಾಬ್ದಾರಿಯನ್ನು ಜನರ ತಲೆಗೆ ವರ್ಗಾಯಿಸುವ ಕಲೆ ಮೋದಿಯವರಿಗೆ ಚೆನ್ನಾಗಿ ತಿಳಿದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆಯವರು ಟೀಕೆ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬಂಗಾರ ತ್ಯೆಜಿಸುವುದು ಅಚ್ಚೆ ದಿನ್. ಬದುಕು ತ್ಯೆಜಿಸುವುದು ಅಮೃತ್ ಕಾಲ್. ಇದು ಮೋದಿ ಮ್ಯಾಜಿಕ್ ಎಂದು ವ್ಯಂಗ್ಯವಾಡಿದ್ದಾರೆ.

ತಮ್ಮ ವೈಫಲ್ಯದ ಆಡಳಿತದ ಕಾರಣಕ್ಕೆ ಜನರಿಂದ ತ್ಯಾಗವನ್ನು ಬಯಸುವುದಕ್ಕೆ "ಅಮೃತ ಕಾಲ" ಎಂದು ಹೆಸರಿಟ್ಟಿದ್ದಾರೆ ಪ್ರಧಾನಿ ಮೋದಿ. ಹೊಣೆಗಾರಿಕೆ ಮತ್ತು ಉತ್ತರದಾಯಿತ್ವದ ಜವಾಬ್ದಾರಿಯನ್ನು ಜನರ ತಲೆಗೆ ವರ್ಗಾಯಿಸುವ ಕಲೆ ಮೋದಿಯವರಿಗೆ ಚೆನ್ನಾಗಿ ತಿಳಿದಿದೆ. ಕೋವಿಡ್ ನಿರ್ವಹಣೆಯ ವೈಫಲ್ಯದ ಸಮಯದಲ್ಲಿ ತಟ್ಟೆ ಬಡಿಯಿರಿ, ದೀಪ ಹಚ್ಚಿರಿ ಎನ್ನುತ್ತಲೇ ಲಕ್ಷಾಂತರ ಮಂದಿಯನ್ನು ಬಲಿ ಕೊಟ್ಟಿದ್ದಾಯ್ತು. ನೋಟ್ ಬ್ಯಾನ್ ಸಮಯದಲ್ಲಿ "50 ದಿನಗಳ ಸಮಯ ಕೊಡಿ, ಪರಿಸ್ಥಿತಿ ಸರಿ ಹೋಗದಿದ್ದರೆ ನೀವು ಕೊಡುವ ಶಿಕ್ಷೆಗೆ ನಾನು ಸಿದ್ದ" ಎನ್ನುತ್ತಲೇ ನೂರಾರು ಜನರ ಜೀವಕ್ಕೆ ಕಂಟಕವಾಗಿದ್ದಾಯ್ತು.

ಈಗ ಹೊಸ ವರಸೆಯಾಗಿ, ಚಿನ್ನ ಖರೀದಿಸಬೇಡಿ, ಪೆಟ್ರೋಲ್ ಮಿತವಾಗಿ ಬಳಸಿ, ಸರಳ ಜೀವನ ನಡೆಸಿ ಎಂಬ ಉಪದೇಶಗಳು ಶುರುವಾಗಿವೆ, ಈ ಉಪದೇಶಗಳು ಯಾವ ಭೀಕರ ದಿನಗಳ ಮುನ್ಸೂಚನೆ ಎಂದು ಪ್ರಶ್ನಿಸಿದ್ದಾರೆ.

2024 - "ಕಾಂಗ್ರೆಸ್ ನಿಮ್ಮ ಮಂಗಳಸೂತ್ರವನ್ನು ಕಸಿಯುತ್ತದೆ", 2026-ಬಂಗಾರದ ಮೇಲಿನ ಆಮದು ಸುಂಕ 6%ನಿಂದ 15%ಗೆ ಏರಿಕೆ, ಬಂಗಾರದ ಬೆಲೆ ಸಾರ್ವಕಾಲಿಕ ಏರಿಕೆ ಹಾಗೂ ಬಂಗಾರ ಖರೀದಿಸಬೇಡಿ ಎಂಬ ಬಿಟ್ಟಿ ಉಪದೇಶ. ಈಗ ಮಂಗಳಸೂತ್ರ ಕಸಿಯಲು ಕೈಹಾಕಿದವರು ಯಾರು? ಇದಕ್ಕೆ ಬಿಜೆಪಿಗರು ಉತ್ತರಿಸುವರೇ?

ಐತಿಹಾಸಿಕ ದಾಖಲೆ ಮಟ್ಟದ ಗ್ಯಾಸ್ ಬೆಲೆ ಏರಿಕೆಯ ನಂತರ ಈಗ ಇಂಧನ ತೈಲಗಳ ಬೆಲೆ ಏರಿಕೆಯ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿದೆ, ದುಸ್ತರವಾಗಿರುವ ಜನರ ಬದುಕನ್ನು ಇನ್ನಷ್ಟು ದುಸ್ತರವಾಗಿಸುವ ಅಚ್ಚೆ ದಿನಗಳಲ್ಲಿ ಬಂಗಾರ ತ್ಯಜಿಸುವುದನ್ನು ದೇಶಭಕ್ತಿ ಎನ್ನಲಾಗುತ್ತಿದೆ, ಮುಂದೆ ಅಮೃತ ಕಾಲದಲ್ಲಿ ಬದುಕು ತ್ಯಜಿಸುವುದನ್ನು ದೇಶಭಕ್ತಿ ಎನ್ನಲಾಗುತ್ತದೆ.

ಭಾರತವು ಎಕನಾಮಿಕಲ್ ಎಮರ್ಜೆನ್ಸಿ ಸ್ಥಿತಿಯ ಎದುರು ನಿಂತಿದೆಯೇ? ದೇಶದ ಖಜಾನೆಯ ಪರಿಸ್ಥಿತಿ ಹೇಗಿದೆ? ಇಂಧನ ಭದ್ರತೆಗೆ ಸರ್ಕಾರ ಕೈಗೊಂಡ ಕ್ರಮಗಳೇನು? ಬಂಗಾರ ಖರೀದಿಸಬೇಡಿ ಎಂಬ ಹೇಳಿಕೆ ನೀಡುವ ಮುನ್ನ 85 ಬಿಲಿಯನ್ ಡಾಲರ್ ಗಾತ್ರದ ಭಾರತದ ಜ್ಯುವೆಲ್ಲರಿ ಮಾರ್ಕೆಟ್ ನಂಬಿ ಬದುಕುತ್ತಿರುವ ಕುಟುಂಬಗಳ ರಕ್ಷಣೆಯ ಬಗ್ಗೆ ಯೋಚಿಸಿದ್ದಾರೆಯೇ? ಇವರಿಗೆ ಸರ್ಕಾರ ನೀಡುವ ಪರಿಹಾರಗಳೇನು? ಎಂದು ಪ್ರಶ್ನಿಸಿದ್ದಾರೆ.

ಈ ಎಲ್ಲದರ ಬಗ್ಗೆ ಪ್ರಧಾನಿಯವರು ಶ್ವೇತ ಪತ್ರ ಹೊರಡಿಸಲಿ, ಇಲ್ಲವೇ ವಿಶೇಷ ಅಧಿವೇಶನ ಕರೆದು ಚರ್ಚಿಸಲಿ ಅಥವಾ ಪತ್ರಿಕಾಗೋಷ್ಠಿಯನ್ನಾದರೂ ನಡೆಸಿ ನೈಜ ಪರಿಸ್ಥಿತಿಯನ್ನು ತಿಳಿಸಲಿ ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ISIS ಉಗ್ರ ಸಂಘಟನೆಗೆ ಭಾರೀ ಹೊಡೆತ: ಅಮೆರಿಕಾ-ನೈಜೀರಿಯಾ ಜಂಟಿ ಕಾರ್ಯಾಚರಣೆಯಲ್ಲಿ ಉನ್ನತ ಕಮಾಂಡರ್ ಅಬು-ಬಿಲಾಲ್ ಅಲ್-ಮಿನುಕಿ ಹತ್ಯೆ..!

ನಟ ದರ್ಶನ್ ವಿರುದ್ಧದ 'ಮಾಧ್ಯಮ ವಿಚಾರಣೆ'ಗೆ ಹೈಕೋರ್ಟ್ ಆಕ್ಷೇಪ; ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಸೂಚನೆ

'ಪಾಕಿಸ್ತಾನಕ್ಕೆ ಉಪಕಾರ' ಮಾಡಲು ಇರಾನ್‌ನೊಂದಿಗೆ ಕದನವಿರಾಮ; ಪಾಕ್ ಪ್ರಧಾನಿ ಅದ್ಭುತ: ಟ್ರಂಪ್ ಶಾಕಿಂಗ್ ಹೇಳಿಕೆ

ಪ್ರಸವಾನಂತರದ ಮೊದಲ ವರ್ಷ 60 ಲೀಟರ್ ಎದೆ ಹಾಲು ದಾನ ಮಾಡಿದ ಮಾಜಿ ಬ್ಯಾಡ್ಮಿಂಟನ್ ಆಟಗಾರ್ತಿ! ಜ್ವಾಲಾ ಗುಟ್ಟಾ ಹೀಗೆ ಮಾಡಿದ್ಯಾಕೆ..?

ಮಧ್ಯಪ್ರಾಚ್ಯ ಸಂಘರ್ಷ: ಅಮೆರಿಕಾ ನಂಬಿಕೆಗೆ ಅರ್ಹವಲ್ಲ, ಭಾರತ ಬಂದರೆ ಶಾಂತಿ ಸಾಧ್ಯ- ಇರಾನ್

SCROLL FOR NEXT