ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್  
ರಾಜಕೀಯ

ತುಮಕೂರಿನಲ್ಲಿ ಸಾಧನಾ ಸಮಾವೇಶ: ಇತ್ತ ಸಾಹುಕಾರ್ ಮನೆಯಲ್ಲಿ ಸಿಎಂ ಆಪ್ತರ ಬ್ರೇಕ್ ಫಾಸ್ಟ್ ಮೀಟಿಂಗ್

ತುಮಕೂರು ಸಮಾವೇಶಕ್ಕೂ ಮುನ್ನ ಸತೀಶ್ ಜಾರಕಿಹೊಳಿ ಮನೆಯಲ್ಲಿ ಬ್ರೇಕ್​ಫಾಸ್ಟ್​ ಮೀಟಿಂಗ್ ನಡೆಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷ ಪೂರೈಸಿದ ಹಿನ್ನೆಲೆ ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಇಂದು ಸಾಧನಾ ಸಮಾವೇಶ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇವುಗಳ ಮಧ್ಯೆ ಸಮಾವೇಶಕ್ಕೆ ಮುನ್ನ ಸಚಿವ ಸತೀಶ್​​ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಆಪ್ತ ಸಚಿವರು ಇಂದು ಸಭೆ ನಡೆಸಿದ್ದು ಸೋಷಿಯಲ್ ಮೀಡಿಯಾದಲ್ಲಿ ಫೋಟೋಗಳು ವೈರಲ್ ಆಗಿವೆ.

ಬ್ರೇಕ್ ಫಾಸ್ಟ್ ಮೀಟಿಂಗ್

ತುಮಕೂರು ಸಮಾವೇಶಕ್ಕೂ ಮುನ್ನ ಸತೀಶ್ ಜಾರಕಿಹೊಳಿ ಮನೆಯಲ್ಲಿ ಬ್ರೇಕ್​ಫಾಸ್ಟ್​ ಮೀಟಿಂಗ್ ನಡೆಸಿದ್ದಾರೆ. ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಆಪ್ತ ಸಚಿವರಾದ ಹೆಚ್ ಸಿ ಮಹದೇವಪ್ಪ, ಜಮೀರ್ ಅಹಮದ್, ಕೆ ವೆಂಕಟೇಶ್ ಮಹತ್ವದ ಸಭೆ ನಡೆಸಿದ್ದು, ಪ್ರಸಕ್ತ ಕಾಂಗ್ರೆಸ್ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ತುಮಕೂರಿನಲ್ಲಿ ಸಾಧನಾ ಸಮಾವೇಶ

ತುಮಕೂರಿನಲ್ಲಿ ಇಂದು ನಡೆಯುತ್ತಿರುವ ಸಾಧನಾ ಸಮಾವೇಶದಲ್ಲಿ ಜಿಲ್ಲೆಯ 1.52 ಲಕ್ಷ ಫಲಾನುಭವಿಗಳಿಗೆ ಇ-ಖಾತಾ, ಹಕ್ಕುಪತ್ರ ಹಾಗೂ ನಿವೇಶನ ಪತ್ರಗಳು ಸೇರಿದಂತೆ ವಿವಿಧ ಸವಲತ್ತುಗಳನ್ನು ವಿತರಿಸಲಾಗುತ್ತಿದೆ. 600 ಅಂಗನವಾಡಿ ಕಾರ್ಯಕರ್ತೆಯರಿಗೆ ನೇಮಕಾತಿ ಆದೇಶ ಪತ್ರ ಹಾಗೂ 687 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026 : ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಆಸ್ಪತ್ರೆಗೆ ಭೇಟಿ ನೀಡಿ, ಫ್ಲೈದುಬೈ ಹೀರೋ ಸ್ಮಿತ್ ಮಚ್ಚಾರ್ ಹಣೆಗೆ ಮುತ್ತಿಟ್ಟ ದುಬೈ ಕ್ರೌನ್ ಪ್ರಿನ್ಸ್! ಹೇಳಿದ್ದೇನು?

ವಿಂಡೀಸ್ ವಿರುದ್ಧದ ಪಂದ್ಯದಲ್ಲಿ 9ನೇ ಶತಕ ಸಿಡಿಸಿದ KL Rahul: 10,000 ಅಂತಾರಾಷ್ಟ್ರೀಯ ರನ್!

ಅಂತಿಮ ಹಂತದಲ್ಲಿ 21 ಚಿನ್ನದ ಪದಕಗಳು: 2026 ರ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಒಟ್ಟು 85 ಪದಕ!

Asian Games 2026: ಪಾಕಿಸ್ತಾನ ಬಗ್ಗು ಬಡಿದ ಭಾರತಕ್ಕೆ ಮತ್ತೊಂದು ಚಿನ್ನ: ಗೋಲ್ಡ್ ಗೆದ್ದ ಕುಸ್ತಿಪಟು ಅಮನ್!