ಸಂಗ್ರಹ ಚಿತ್ರ 
ರಾಜಕೀಯ

ಗ್ಯಾರಂಟಿಗೆ ಸಾಲ-ಅಭಿವೃದ್ಧಿಗೆ ಶೂನ್ಯ, ಅಧಿಕಾರದ ಕಾಳಗದಲ್ಲೇ ಬ್ಯುಸಿ: ಕಾಂಗ್ರೆಸ್ ಸಾಧನಾ ಸಮಾವೇಶ ವಿರುದ್ಧ BJP ವಾಗ್ದಾಳಿ

ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿಗಿಂತ ಅಧಿಕಾರದ ಕಾಳಗವೇ ಹೆಚ್ಚು ನಡೆದಿದೆ. ಇತ್ತೀಚಿನ ವಿಧಾನಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಹಲವು ರಾಜ್ಯಗಳಲ್ಲಿ ಸೋಲು ಕಂಡಿದೆ.

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆ ತುಮಕೂರಿನಲ್ಲಿ ಆಯೋಜಿಸಿದ್ದ ‘ಸಾಧನಾ ಸಮಾವೇಶ’ಕ್ಕೆ ಬಿಜೆಪಿ ನಾಯಕರು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಯಾವುದೇ ಮಹತ್ವದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿರುವ ಬಿಜೆಪಿ, “ಸರ್ಕಾರದ ಸಾಧನೆಗಳ ಪಟ್ಟಿಯನ್ನು ಬಿಡುಗಡೆ ಮಾಡಿ” ಎಂದು ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದೆ.

ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮೈಸೂರು ನಗರ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ ಅವರು, ಮುಖ್ಯಮಂತ್ರಿ ಸ್ಥಾನ ಹಾಗೂ ಸಚಿವ ಸ್ಥಾನ ಉಳಿಸಿಕೊಳ್ಳುವ ಆಂತರಿಕ ರಾಜಕೀಯ ಪೈಪೋಟಿಯಲ್ಲೇ ಕಾಂಗ್ರೆಸ್ ನಾಯಕರು ಬ್ಯುಸಿಯಾಗಿದ್ದಾರೆಂದು ಟೀಕಿಸಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿಗಿಂತ ಅಧಿಕಾರದ ಕಾಳಗವೇ ಹೆಚ್ಚು ನಡೆದಿದೆ. ಇತ್ತೀಚಿನ ವಿಧಾನಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಹಲವು ರಾಜ್ಯಗಳಲ್ಲಿ ಸೋಲು ಕಂಡಿದೆ. ಮುಂದಿನ ಎರಡು ವರ್ಷಗಳಲ್ಲಿ ಅಭಿವೃದ್ಧಿ ಕೆಲಸಗಳು ನಡೆಯದಿದ್ದರೆ ಕರ್ನಾಟಕದಲ್ಲೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರ ಭಾರೀ ಪ್ರಮಾಣದ ಸಾಲ ಮಾಡಿದ್ದು, ಅದರ ಬಹುಪಾಲು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಬಳಸಲಾಗುತ್ತಿದೆ. ಸರ್ಕಾರ ಪಡೆದಿರುವ ಸಾಲ ಹಾಗೂ ಅದಕ್ಕೆ ಪಾವತಿಸುತ್ತಿರುವ ಬಡ್ಡಿಯ ಪ್ರಮಾಣವೇ ಆಡಳಿತದ ಸ್ಥಿತಿಯನ್ನು ತೋರಿಸುತ್ತದೆ ಎಂದು ತಿಳಿಸಿದರು. ಇದೇ ವೇಳೆ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಭ್ರಷ್ಟಾಚಾರದ ಆರೋಪವನ್ನೂ ಮಾಡಿದರು.

ಮೈಸೂರು ಮೂಲದವರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ತವರೂರು ಭಾಗಕ್ಕೆ ಸಮರ್ಪಕ ಅಭಿವೃದ್ಧಿ ಕಾರ್ಯಗಳನ್ನು ತರಲು ವಿಫಲರಾಗಿದ್ದಾರೆಂದು ಆರೋಪಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಕ್ಷೇತ್ರಗಳಾದ ಶಿವಮೊಗ್ಗ ಹಾಗೂ ಶಿಕಾರಿಪುರದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳನ್ನು ಉದಾಹರಣೆಯಾಗಿ ಉಲ್ಲೇಖಿಸಿದ ನಾಗೇಂದ್ರ ಅವರು, “ಅದೇ ಮಟ್ಟದ ಅಭಿವೃದ್ಧಿ ಮೈಸೂರಿನಲ್ಲಿ ಕಾಣುತ್ತಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಜೊತೆ ಒಪ್ಪಂದಕ್ಕೆ ಇರಾನ್‌ ಕಾತರ, ಶೀಘ್ರದಲ್ಲೇ ಯುದ್ಧ ಅಂತ್ಯ: ತೈಲ ಬೆಲೆ ಭಾರೀ ಕುಸಿತ; ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ನಿಜಕ್ಕೂ ನಮ್ಮದು F…Good Team: ಲೈವ್​ನಲ್ಲೇ 'ಅಶ್ಲೀಲ ಪದ' ಬಳಸಿದ ರಿಷಭ್ ಪಂತ್, ವ್ಯಾಪಕ ಟೀಕೆ, Video!

ಇಟಲಿಯಲ್ಲಿ ಪ್ರಧಾನಿ ಮೋದಿ: “ವೆಲ್‌ಕಮ್ ಟು ರೋಮ್ ಮೈ ಫ್ರೆಂಡ್” ಎಂದು ಆತ್ಮೀಯ ಸ್ವಾಗತ ಕೋರಿದ ಜಾರ್ಜಿಯಾ ಮೆಲೋನಿ..!

Operation Epic Fury: ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕಾಗೆ ಮಹಾಘಾತಕ: F-35 ಸೇರಿ 42 ಯುದ್ಧ ವಿಮಾನ, ಡ್ರೋನ್‌ಗಳಿಗೆ ಹಾನಿ..!

ಪ್ರಧಾನಿ ಮೋದಿಯನ್ನು 'ಹಾವಾಡಿಗ'ನಂತೆ ಬಿಂಬಿಸಿ ವಿಕೃತಿ: ಭಾರತವನ್ನು ಹೀಯಾಳಿಸಿದ ನಾರ್ವೆ ಪತ್ರಿಕೆ; ನೆಟ್ಟಿಗರು ತೀವ್ರ ಕಿಡಿ

SCROLL FOR NEXT