ಡಿಕೆ.ಶಿವಕುಮಾರ್  
ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ರಾಜಣ್ಣ ಬಯಸುತ್ತಿದ್ದಾರೆಯೇ? ಪಕ್ಷಕ್ಕಾಗಿ ಮಾಡಿದ ಕೆಲಸಕ್ಕೆ ಎಂದಿಗೂ 'ಕೂಲಿ' ಕೇಳಿಲ್ಲ: ಡಿ.ಕೆ ಶಿವಕುಮಾರ್; Video

ಅವರಿಗೆ ಸಿದ್ದರಾಮಯ್ಯ ಮುಂದುವರಿಯಬೇಕು ಎಂದು ಬೆಂಬಲಿಸುವ ಸ್ವಾತಂತ್ರ್ಯ ಇದೆ. ಆದರೆ ಪರಮೇಶ್ವರ್ ಸಿಎಂ ಆಗಬೇಕು ಎಂದರೆ, ಸಿದ್ದರಾಮಯ್ಯ ಸ್ಥಾನ ತ್ಯಜಿಸಬೇಕು ಎಂಬುದೇ ಅವರ ಉದ್ದೇಶವೇ?

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನ ಕುರಿತ ಚರ್ಚೆ ಮತ್ತೆ ತೀವ್ರಗೊಂಡಿರುವ ನಡುವೆ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಿರಿಯ ಶಾಸಕ ಕೆ.ಎನ್. ರಾಜಣ್ಣ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನವು “ಶ್ರಮಕ್ಕೆ ಪ್ರತಿಫಲ” ಆಗಿದ್ದರೆ, ಡಿ.ಕೆ. ಶಿವಕುಮಾರ್‌ಗಿಂತ ಮೊದಲು ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಅವಕಾಶ ಬರಬೇಕು ಎಂದು ರಾಜಣ್ಣ ಹೇಳಿಕೆ ನೀಡಿದ್ದರು.

ಪರಮೇಶ್ವರ್ ಅವರು ಎಂಟು ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿದ್ದರು. 2013ರಲ್ಲಿ ಅವರು ಚುನಾವಣೆಯಲ್ಲಿ ಸೋಲದೇ ಇದ್ದಿದ್ದರೆ ಆಗಲೇ ಮುಖ್ಯಮಂತ್ರಿ ಆಗುತ್ತಿದ್ದರು ಎಂದು ರಾಜಣ್ಣ ತಿಳಿಸಿದ್ದರು.

ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, ತಾನು ಪಕ್ಷಕ್ಕಾಗಿ ಮಾಡಿದ ಕೆಲಸಕ್ಕೆ ಎಂದಿಗೂ “ಕೂಲಿ” ಕೇಳಿಲ್ಲ ಎಂದು ಸ್ಪಷ್ಟಪಡಿಸಿದರು.

“ರಾಜಣ್ಣ ಅವರು ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಹೇಳುತ್ತಿರುವುದು ಏಕೆ? ಅವರಿಗೆ ಸಿದ್ದರಾಮಯ್ಯ ಮುಂದುವರಿಯಬೇಕು ಎಂದು ಬೆಂಬಲಿಸುವ ಸ್ವಾತಂತ್ರ್ಯ ಇದೆ. ಆದರೆ ಪರಮೇಶ್ವರ್ ಸಿಎಂ ಆಗಬೇಕು ಎಂದರೆ, ಸಿದ್ದರಾಮಯ್ಯ ಸ್ಥಾನ ತ್ಯಜಿಸಬೇಕು ಎಂಬುದೇ ಅವರ ಉದ್ದೇಶವೇ? ಎಂದು ಪ್ರಶ್ನಿಸಿದರು.

ದೆಹಲಿಗೆ ಭೇಟಿ ನೀಡಲಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಭೇಟಿ ವೇಳೆ ರಾಜ್ಯ ರಾಜಕೀಯ ಹಾಗೂ ಕೇಂದ್ರದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ತಂತ್ರಗಳ ಬಗ್ಗೆ ಚರ್ಚೆ ನಡೆಯಲಿದೆ. “ಹೈಕಮಾಂಡ್ ಕರೆದಾಗ ನಾನು ದೆಹಲಿಗೆ ಹೋಗುತ್ತೇನೆ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಯುವ ಕಾಂಗ್ರೆಸ್‌ನಲ್ಲಿ ನಡೆದ ಗಲಾಟೆ ಕುರಿತೂ ಕಠಿಣ ಎಚ್ಚರಿಕೆ ನೀಡಿದ ಅವರು. “ಪಕ್ಷದಲ್ಲಿ ಶಿಸ್ತು ಮುಖ್ಯ. ಗಲಾಟೆ ಮಾಡುವವರನ್ನು ಹೊರಹಾಕಲಾಗುತ್ತದೆ. ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಯಾಧ್ಯಕ್ಷರು ಶಿಸ್ತು ಕ್ರಮ ಕೈಗೊಳ್ಳುತ್ತಾರೆ” ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel