ಸಚಿವ ಸತೀಶ್ ಜಾರಕಿಹೊಳಿ 
ರಾಜಕೀಯ

'ಮುಸ್ಲಿಂ', 'ಪಾಕಿಸ್ತಾನ' ಪದಗಳನ್ನು ಅಸ್ತ್ರವಾಗಿ ಬಳಸುತ್ತಿದ್ದಾರೆ: BJP ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ವಾಗ್ದಾಳಿ

ಬಿಜೆಪಿ ನಾಯಕರಿಗೆ ಕೇವಲ 'ಮುಸ್ಲಿಂ' ಮತ್ತು 'ಪಾಕಿಸ್ತಾನ' ಎಂಬ ಹೆಸರುಗಳನ್ನು ಉಲ್ಲೇಖಿಸಿ ಜನರ ಭಾವನೆಗಳನ್ನು ಕೆರಳಿಸುವುದಷ್ಟೇ ಗೊತ್ತು.

ಬೆಂಗಳೂರು: ಪ್ರಮುಖ ಜನಪರ ಸಮಸ್ಯೆಗಳಿಂದ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ನಾಯಕರು 'ಮುಸ್ಲಿಂ' ಮತ್ತು 'ಪಾಕಿಸ್ತಾನ' ಎಂಬ ಪದಗಳನ್ನು ರಾಜಕೀಯ ಅಸ್ತ್ರವಾಗಿ ಪದೇ ಪದೇ ಬಳಸುತ್ತಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಈ ಧೋರಣೆಯನ್ನು ಕೇವಲ ರಾಜಕೀಯ ಸ್ಟಂಟ್ ಎಂದು ಕರೆದಿದ್ದಾರೆ.

ರಾಜ್ಯ ಸರ್ಕಾರವು ಪ್ರಸ್ತುತ ಮುಸ್ಲಿಮರು, ರೈತರು, ಕನ್ನಡ ಕಾರ್ಯಕರ್ತರು ಸೇರಿದಂತೆ ಸಮಾಜದ ವಿವಿಧ ವರ್ಗಗಳಿಗೆ ಸಂಬಂಧಿಸಿದ ಸುಮಾರು 50 ರಿಂದ 60 ಪ್ರಮುಖ ಪ್ರಕರಣಗಳನ್ನು ನಿರ್ವಹಿಸುತ್ತಿದೆ ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಶ್ರಮಿಸುತ್ತಿದೆ. ಆದರೆ, ಬಿಜೆಪಿ ನಾಯಕರಿಗೆ ಕೇವಲ 'ಮುಸ್ಲಿಂ' ಮತ್ತು 'ಪಾಕಿಸ್ತಾನ' ಎಂಬ ಹೆಸರುಗಳನ್ನು ಉಲ್ಲೇಖಿಸಿ ಜನರ ಭಾವನೆಗಳನ್ನು ಕೆರಳಿಸುವುದಷ್ಟೇ ಗೊತ್ತು ಎಂದು ಕಿಡಿಕಾರಿದರು.

ಈ ರೀತಿಯ ಪದಗಳನ್ನು ಬಳಸುವುದರಿಂದ ಮಾತ್ರ ಸಾರ್ವಜನಿಕರ ಗಮನವನ್ನು ತಮ್ಮತ್ತ ಸೆಳೆಯಬಹುದು ಎಂಬ ಭ್ರಮೆಯಲ್ಲಿ ಬಿಜೆಪಿ ನಾಯಕರಿದ್ದಾರೆ. ಇದು ಜನರ ದಾರಿ ತಪ್ಪಿಸುವ ಮತ್ತು ರಾಜಕೀಯ ಲಾಭ ಪಡೆಯುವ ಬಿಜೆಪಿಯ ತಂತ್ರಗಾರಿಕೆಯಾಗಿದೆ ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್