ಡಿ.ಕೆ ಶಿವಕುಮಾರ್ 
ರಾಜಕೀಯ

ಮತದಾನದ ಹಕ್ಕು ಕೈತಪ್ಪಿದರೆ, ಪೆನ್ಷನ್-ಗೃಹಲಕ್ಷ್ಮಿ ಸೇರಿ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೀರಿ: ಮತದಾರರಿಗೆ ಡಿಕೆಶಿ ಎಚ್ಚರಿಕೆ

ನಮ್ಮ ಪಕ್ಷದ ಕಾರ್ಯಕರ್ತರು ಈ ಪ್ರಕ್ರಿಯೆಯ ಬಗ್ಗೆ ಅತ್ಯಂತ ಜಾಗರೂಕರಾಗಿರಬೇಕು ಎಂದು ಸೂಚಿಸಿದ್ದೇನೆ. ಈಗಾಗಲೇ ಸಭೆಗಳನ್ನು ಕರೆಯಲಾಗುತ್ತಿದ್ದು, ದಿನಾಂಕಗಳನ್ನೂ ಪ್ರಕಟಿಸಲಾಗಿದೆ. ಇದೇ ಕಾರಣಕ್ಕೆ ನಾವು ಜಾಗೃತಿ ಮೂಡಿಸಲು ಮುಂದಾಗಿದ್ದೇವೆ.

ಬೆಂಗಳೂರು: ಮತದಾರರ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ಮೂಲಕ ಬಡವರ ಮತಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ದೊಡ್ಡ ಪಿತೂರಿ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಆರ್ ಕುರಿತು ಕಾಂಗ್ರೆಸ್ ಶಾಸಕರು ಮತ್ತು ಬೂತ್ ಮಟ್ಟದ ಏಜೆಂಟ್‌ಗಳಲ್ಲಿ ಜಾಗೃತಿ ಮೂಡಿಸಲು ಪಕ್ಷವು ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ನಮ್ಮ ಪಕ್ಷದ ಕಾರ್ಯಕರ್ತರು ಈ ಪ್ರಕ್ರಿಯೆಯ ಬಗ್ಗೆ ಅತ್ಯಂತ ಜಾಗರೂಕರಾಗಿರಬೇಕು ಎಂದು ಸೂಚಿಸಿದ್ದೇನೆ. ಈಗಾಗಲೇ ಸಭೆಗಳನ್ನು ಕರೆಯಲಾಗುತ್ತಿದ್ದು, ದಿನಾಂಕಗಳನ್ನೂ ಪ್ರಕಟಿಸಲಾಗಿದೆ. ಇದೇ ಕಾರಣಕ್ಕೆ ನಾವು ಜಾಗೃತಿ ಮೂಡಿಸಲು ಮುಂದಾಗಿದ್ದೇವೆ.

ಪ್ರತಿಯೊಬ್ಬರೂ ಈ ನಿಟ್ಟಿನಲ್ಲಿ ಅರ್ಜಿ ಸಲ್ಲಿಸುವುದು ಅನಿವಾರ್ಯವಾಗಿದೆ, ಇಲ್ಲದಿದ್ದರೆ ನಾಗರಿಕರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳಬೇಕಾಗುತ್ತದೆ. ಇತರ ರಾಜ್ಯಗಳಲ್ಲಿಯೂ ಇಂತಹ ಘಟನೆಗಳು ನಡೆದಿರುವುದನ್ನು ನಾವು ನೋಡಿದ್ದೇವೆ. ಒಂದೊಮ್ಮೆ ಮತದಾನದ ಹಕ್ಕು ಕೈತಪ್ಪಿದರೆ, ನಾಗರಿಕರು ಪೆನ್ಷನ್ ಮತ್ತು ಗೃಹಲಕ್ಷ್ಮಿ ಯೋಜನೆಯೂ ಸೇರಿದಂತೆ ಸರ್ಕಾರದ ಹಲವು ಸೌಲಭ್ಯಗಳಿಂದ ವಂಚಿತರಾಗಲಿದ್ದಾರೆ. ಹೀಗಾಗಿಯೇ ನಾವು ಜನರಲ್ಲಿ ಜಾಗೃತಿ ಮೂಡಿಸಲು ಶ್ರಮಿಸುತ್ತಿದ್ದೇವೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ: 10 ದಿನಗಳಲ್ಲಿ 3ನೇ ಬಾರಿ ತೈಲ ದರ ಏರಿಕೆ, ಗ್ರಾಹಕರಿಗೆ ಮತ್ತೆ ಇಂಧನ ಕಂಪನಿಗಳ ಶಾಕ್..!

ಭಾರತಕ್ಕೆ ಆಗಮಿಸಿದ ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ; ಕೋಲ್ಕತ್ತಾದಲ್ಲಿ ಭರ್ಜರಿ ಸ್ವಾಗತ, ಭಾರತ-ಅಮೆರಿಕಾ ಬಾಂಧವ್ಯಕ್ಕೆ ಹೊಸ ಬಲ

ಮಗನ ಮದುವೆಗಿಂತ ದೇಶವೇ ಮುಖ್ಯ: 'ಇರಾನ್ ಬಿಕ್ಕಟ್ಟು' ಹಿನ್ನೆಲೆಯಲ್ಲಿ ಟ್ರಂಪ್ ಮಹತ್ವದ ನಿರ್ಧಾರ, ಟೆಹ್ರಾನ್ ಮೇಲೆ ಭಾರೀ ದಾಳಿಗೆ ಅಮೆರಿಕಾ ಸಜ್ಜು..!

ರಾಜ್ಯಸಭಾ ಚುನಾವಣೆ: ಎಚ್.ಡಿ. ದೇವೇಗೌಡರಿಗೆ NDA ಟಿಕೆಟ್..? ಮತ್ತೊಮ್ಮೆ ದೆಹಲಿ ಮೆಟ್ಟಿಲೇರುತ್ತಾರಾ 'ಮಣ್ಣಿನ ಮಗ'? ಹೆಚ್ಚಿದ ಕುತೂಹಲ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತಕ್ಕೆ GBA ನಿರ್ಲಕ್ಷ್ಯವೇ ಕಾರಣ: ತನಿಖಾ ವರದಿ

SCROLL FOR NEXT