ನಿಖಿಲ್ ಕುಮಾರಸ್ವಾಮಿ 
ರಾಜಕೀಯ

ಗೃಹಲಕ್ಷ್ಮಿ ಯೋಜನೆಯ 5,000 ಕೋಟಿ ರೂ. ಹಣ ಎಲ್ಲಿ..?: ರಾಜ್ಯ ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಪ್ರಶ್ನೆ

2024-25ರ ಆರ್ಥಿಕ ವರ್ಷದಲ್ಲಿ ಒಟ್ಟು 1,28,80,594 ಫಲಾನುಭವಿಗಳಿದ್ದರು. ಇವರಿಗಾಗಿ ಬಜೆಟ್‌ನಲ್ಲಿ 28,608.4 ಕೋಟಿ ರೂಪಾಯಿಯನ್ನು ಸರ್ಕಾರ ಮೀಸಲಿಟ್ಟಿತ್ತು. ಆದರೆ, ವಾಸ್ತವದಲ್ಲಿ ಕೇವಲ 23,608 ಕೋಟಿ ರೂಪಾಯಿಯನ್ನು ಮಾತ್ರ 10 ತಿಂಗಳ ಅವಧಿಗೆ ಬಿಡುಗಡೆ ಮಾಡಲಾಗಿದೆ.

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಹಂಚಿಕೆಯಾಗಬೇಕಿದ್ದ ಸುಮಾರು 5,000 ಕೋಟಿ ರೂಪಾಯಿ ಹಣವನ್ನು ಅರ್ಹ ಮಹಿಳೆಯರ ಖಾತೆಗೆ ಜಮೆ ಮಾಡದೆ ವಂಚಿಸಲಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಣದ ಸಂಪೂರ್ಣ ವಿವರವನ್ನು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

2024-25ನೇ ಸಾಲಿನಲ್ಲಿ ಮನೆಯ ಯಜಮಾನಿಯರಿಗೆ ಕೇವಲ 10 ತಿಂಗಳ ಹಣವನ್ನು ಮಾತ್ರ ನೀಡಲಾಗಿದ್ದು, ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣವನ್ನು ಇನ್ನುವರೆಗೂ ಪಾವತಿಸಿಲ್ಲ. ಈ ಎರಡು ತಿಂಗಳಿಗಾಗಿ ಬರೋಬ್ಬರಿ 5,000 ಕೋಟಿ ರೂಪಾಯಿ ಹಣ ಮೀಸಲಿಟ್ಟಿದ್ದರೂ, ಅದು ಫಲಾನುಭವಿಗಳಿಗೆ ತಲುಪಿಲ್ಲ ಎಂದು ದೂರಿದ್ದಾರೆ.

2024-25ರ ಆರ್ಥಿಕ ವರ್ಷದಲ್ಲಿ ಒಟ್ಟು 1,28,80,594 ಫಲಾನುಭವಿಗಳಿದ್ದರು. ಇವರಿಗಾಗಿ ಬಜೆಟ್‌ನಲ್ಲಿ 28,608.4 ಕೋಟಿ ರೂಪಾಯಿಯನ್ನು ಸರ್ಕಾರ ಮೀಸಲಿಟ್ಟಿತ್ತು. ಆದರೆ, ವಾಸ್ತವದಲ್ಲಿ ಕೇವಲ 23,608 ಕೋಟಿ ರೂಪಾಯಿಯನ್ನು ಮಾತ್ರ 10 ತಿಂಗಳ ಅವಧಿಗೆ ಬಿಡುಗಡೆ ಮಾಡಲಾಗಿದೆ.

ಬಜೆಟ್‌ನಲ್ಲಿ ಹಣ ನಿಗದಿಯಾಗಿದ್ದರೂ, 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಮೊತ್ತವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡದೆ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಪ್ರಚಾರ ಪಡೆಯುತ್ತಿರುವ ಕಾಂಗ್ರೆಸ್ ಸರ್ಕಾರ, ಅರ್ಹ ಫಲಾನುಭವಿಗಳಿಗೆ ತಲುಪಬೇಕಾದ ಹಣವನ್ನು ಸರಿಯಾದ ಸಮಯಕ್ಕೆ ನೀಡದೆ ಸತಾಯಿಸುತ್ತಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ: 10 ದಿನಗಳಲ್ಲಿ 3ನೇ ಬಾರಿ ತೈಲ ದರ ಏರಿಕೆ, ಗ್ರಾಹಕರಿಗೆ ಮತ್ತೆ ಇಂಧನ ಕಂಪನಿಗಳ ಶಾಕ್..!

ಮಗನ ಮದುವೆಗಿಂತ ದೇಶವೇ ಮುಖ್ಯ: 'ಇರಾನ್ ಬಿಕ್ಕಟ್ಟು' ಹಿನ್ನೆಲೆಯಲ್ಲಿ ಟ್ರಂಪ್ ಮಹತ್ವದ ನಿರ್ಧಾರ, ಟೆಹ್ರಾನ್ ಮೇಲೆ ಭಾರೀ ದಾಳಿಗೆ ಅಮೆರಿಕಾ ಸಜ್ಜು..!

ರಾಜ್ಯಸಭಾ ಚುನಾವಣೆ: ಎಚ್.ಡಿ. ದೇವೇಗೌಡರಿಗೆ NDA ಟಿಕೆಟ್..? ಮತ್ತೊಮ್ಮೆ ದೆಹಲಿ ಮೆಟ್ಟಿಲೇರುತ್ತಾರಾ 'ಮಣ್ಣಿನ ಮಗ'? ಹೆಚ್ಚಿದ ಕುತೂಹಲ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತಕ್ಕೆ GBA ನಿರ್ಲಕ್ಷ್ಯವೇ ಕಾರಣ: ತನಿಖಾ ವರದಿ

ಕಲಬುರಗಿ: ಕ್ರೂಸರ್-ಲಾರಿ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

SCROLL FOR NEXT