ಸುಪ್ರಿಯಾ ಶ್ರೀನಾಟೆ ಮತ್ತು ಪವನ್ ಖೇರಾ 
ರಾಜಕೀಯ

ರಾಜ್ಯಸಭೆ ಚುನಾವಣೆ ರೇಸ್: ಕರ್ನಾಟಕ ಕಾಂಗ್ರೆಸ್ ನಿಂದ ಸುಪ್ರಿಯಾ ಶ್ರೀನಾಟೆ ಮತ್ತು ಪವನ್ ಖೇರಾ ಮುಂಚೂಣಿಯಲ್ಲಿ

ಕಾಂಗ್ರೆಸ್ ಮೂರು ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ನಿರೀಕ್ಷೆಯಿರುವ ಹಿನ್ನೆಲೆ, 2023ರ ವಿಧಾನಸಭಾ ಚುನಾವಣೆಗೆ ಮುನ್ನ ಕರ್ನಾಟಕ ಕಾಂಗ್ರೆಸ್ ಘಟಕದೊಂದಿಗೆ ಇಬ್ಬರೂ ನಾಯಕರು ಆಕ್ರಮಣಕಾರಿ ಪ್ರಚಾರ ನಡೆಸಿದ್ದರಿಂದ ಅವರಿಗೆ ಅವಕಾಶ ನೀಡಬಹುದು ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಜೂನ್ 18ರಂದು ನಡೆಯಲಿರುವ ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಮುನ್ನ, ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ ಸುಪ್ರಿಯಾ ಶ್ರೀನಾಟೆ ಮತ್ತು ಪವನ್ ಖೇರಾ ಅವರ ಹೆಸರುಗಳು ರಾಜ್ಯದಿಂದ ನಾಮನಿರ್ದೇಶನಕ್ಕೆ ಭಾರೀ ಚರ್ಚೆಗೆ ಗ್ರಾಸವಾಗಿವೆ.

ಕಾಂಗ್ರೆಸ್ ಮೂರು ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ನಿರೀಕ್ಷೆಯಿರುವ ಹಿನ್ನೆಲೆ, 2023ರ ವಿಧಾನಸಭಾ ಚುನಾವಣೆಗೆ ಮುನ್ನ ಕರ್ನಾಟಕ ಕಾಂಗ್ರೆಸ್ ಘಟಕದೊಂದಿಗೆ ಇಬ್ಬರೂ ನಾಯಕರು ಆಕ್ರಮಣಕಾರಿ ಪ್ರಚಾರ ನಡೆಸಿದ್ದರಿಂದ ಅವರಿಗೆ ಅವಕಾಶ ನೀಡಬಹುದು ಎಂದು ಹೇಳಲಾಗುತ್ತಿದೆ.

ಈ ನಡುವೆ, ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಅವರ ಹೆಸರೂ ರಾಜ್ಯಸಭೆ ನಾಮನಿರ್ದೇಶನಕ್ಕೆ ಕೇಳಿಬರುತ್ತಿದೆ. ಜೂನ್ 30ರಂದು ಎಂಎಲ್‌ಸಿ ಹುದ್ದೆಯಿಂದ ನಿವೃತ್ತಿಯಾಗಲಿರುವ ಬಿ ಕೆ ಹರಿಪ್ರಸಾದ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಶಾಶ್ವತ ಸದಸ್ಯರಾಗಿದ್ದು, ಎಐಸಿಸಿ ಹರಿಯಾಣ ಉಸ್ತುವಾರಿಯೂ ಆಗಿದ್ದಾರೆ. ಸಿದ್ದರಾಮಯ್ಯ ಸಚಿವ ಸಂಪುಟ ಪುನಾರಚನೆ ನಡೆದರೆ ಅವರು ಸಚಿವ ಸ್ಥಾನಕ್ಕೂ ಆಕಾಂಕ್ಷಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಪಕ್ಷದ ಒಳವಲಯದ ಕೆಲವರು, ಸುಪ್ರಿಯಾ ಶ್ರೀನಾಟೆ ಮತ್ತು ಪವನ್ ಖೇರಾ ಅವರನ್ನು ಅವರ ರಾಜ್ಯಗಳಿಂದಲೇ ರಾಜ್ಯಸಭೆಗೆ ನಾಮನಿರ್ದೇಶನ ಮಾಡಬೇಕು ಹಾಗೂ ಕರ್ನಾಟಕದ ನಾಯಕರಿಗೆ ಅವಕಾಶ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಬಿ ಕೆ ಹರಿಪ್ರಸಾದ್ ಸಚಿವ ಸಂಪುಟ ಪುನಾರಚನೆಯಲ್ಲಿ ಸಚಿವರಾಗುವ ಸಾಧ್ಯತೆಯೂ ಇದೆ ಎಂದು ಅವರು ಹೇಳಿದ್ದಾರೆ.

ರಾಜ್ಯಸಭಾ ನಾಮನಿರ್ದೇಶನಕ್ಕೆ ಪರಿಗಣಿಸಲ್ಪಡಬಹುದಾದ ಇತರ ಆಕಾಂಕ್ಷಿಗಳಲ್ಲಿ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮೋಹನ್ ಕಟಾರ್ಕಿ, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, ಮಾಜಿ ರಾಜ್ಯಸಭಾ ಸದಸ್ಯ ರಾಜೀವ್ ಗೌಡ, ಮಾವು ಅಭಿವೃದ್ಧಿ ನಿಗಮ ಅಧ್ಯಕ್ಷ ಡಾ. ಬಿ.ಸಿ. ಮುದ್ದುಗಂಗಾಧರ್ ಹಾಗೂ ಮಾಜಿ ಕೇಂದ್ರ ಸಚಿವ ಕೆ ರೆಹಮಾನ್ ಖಾನ್ ಅವರ ಪುತ್ರ ಮನ್ಸೂರ್ ಅಲಿ ಖಾನ್ ಅವರ ಹೆಸರುಗಳೂ ಸೇರಿವೆ. 2024ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದಿಂದ ಮನ್ಸೂರ್ ಅಲಿ ಖಾನ್ ಸೋತಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!