ಕಾಂಗ್ರೆಸ್ ನಾಯಕರ ಸಭೆ. 
ರಾಜಕೀಯ

SIR ಹೆಸರಿನಲ್ಲಿ ಮತದಾರರ ಹೆಸರು ಡಿಲೀಟ್ ಆರೋಪ; war room ಸ್ಥಾಪಿಸಿದ ಕಾಂಗ್ರೆಸ್; ಎಚ್ಚರ ವಹಿಸುವಂತೆ 'ಕೈ' ನಾಯಕರಿಗೆ ಸಿದ್ದು-ಡಿಕೆಶಿ ಸೂಚನೆ

ಪಶ್ಚಿಮ ಬಂಗಾಳದ ಬಳಿಕ ಕರ್ನಾಟಕದಲ್ಲಿಯೂ ಲಕ್ಷಾಂತರ ನಿಜವಾದ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಪ್ರಯತ್ನ ನಡೆಯಬಹುದು ಎಂಬ ಅನುಮಾನ ಕಾಂಗ್ರೆಸ್ ವಲಯದಲ್ಲಿ ವ್ಯಕ್ತವಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ಜೂನ್ 20ರಿಂದ ಆರಂಭವಾಗಲಿರುವ ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಎಚ್ಚರಿಕೆ ವಹಿಸುವಂತ ನಾಯಕರು ಹಾಗೂ ಕಾರ್ಯಕರ್ತರಿಗೆ ಕಾಂಗ್ರೆಸ್ ಸೂಚನೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಪಕ್ಷದ ಶಾಸಕರು ಮತ್ತು ಮುಖಂಡರೊಂದಿಗೆ ಮಹತ್ವದ ಸಭೆ ನಡೆಸಿದರು.

ಪಶ್ಚಿಮ ಬಂಗಾಳದ ಬಳಿಕ ಕರ್ನಾಟಕದಲ್ಲಿಯೂ ಲಕ್ಷಾಂತರ ನಿಜವಾದ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಪ್ರಯತ್ನ ನಡೆಯಬಹುದು ಎಂಬ ಅನುಮಾನ ಕಾಂಗ್ರೆಸ್ ವಲಯದಲ್ಲಿ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ನಂದಿ ಬೆಟ್ಟದ ಸಮೀಪದ ರೆಸಾರ್ಟ್‌ನಲ್ಲಿ ಸಚಿವರು, ಹಾಲಿ ಮತ್ತು ಮಾಜಿ ಶಾಸಕರ ಸಭೆ ನಡೆಸಿ SIR ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ನಿಜವಾದ ಮತದಾರರ ಹೆಸರುಗಳು ಮತದಾರರ ಪಟ್ಟಿಯಿಂದ ಅಳಿಸದಂತೆ ನೋಡಿಕೊಳ್ಳಲು ಕಾಂಗ್ರೆಸ್ ನಾಯಕರು ಕಾರ್ಯಕರ್ತರಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ,

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ತೊಡಗುವ ಬೂತ್ ಲೆವೆಲ್ ಅಧಿಕಾರಿಗಳ (BLO) ಚಟುವಟಿಕೆಗಳ ಮೇಲೆ ನಿಗಾ ಇರಿಸುವಂತೆ ಹಾಗೂ ಪಕ್ಷದ BLOಗಳನ್ನು ಸಕ್ರಿಯಗೊಳಿಸುವಂತೆ ಸೂಚನೆ ನೀಡಲಾಗಿದೆ.

ಮುಂದಿನ ದಿನಗಳಲ್ಲಿ ನಡೆಯಲಿರುವ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ SIR ಪ್ರಕ್ರಿಯೆ ಮಹತ್ವ ಪಡೆದುಕೊಂಡಿದೆ.

ಸುಪ್ರೀಂ ಕೋರ್ಟ್ ಆಗಸ್ಟ್ 31ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಗಡುವು ನೀಡಿರುವ ಹಿನ್ನೆಲೆ, ಈ ಚುನಾವಣೆಗಳು ಮುಂದಿನ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ 2028ರ ವಿಧಾನಸಭಾ ಚುನಾವಣೆಯ ದಿಕ್ಕು ತೋರಿಸುವಂತಿವೆ ಎಂದು ಕಾಂಗ್ರೆಸ್ ಅಂದಾಜಿಸಿದೆ.

ಸಭೆಯಲ್ಲಿ ಬಿಜೆಪಿ ಹಲವು ರಾಜ್ಯಗಳಲ್ಲಿ SIR ದುರುಪಯೋಗ ಮಾಡಿಕೊಂಡು ಚುನಾವಣೆಯಲ್ಲಿ ಗೆಲುವು ಸಾಧಿಸಿದೆ ಎಂಬ ಆರೋಪದ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.

ಕರ್ನಾಟಕದ 136 ಕಾಂಗ್ರೆಸ್ ಶಾಸಕರಲ್ಲಿ ಸುಮಾರು 70 ರಿಂದ 80 ಮಂದಿ ಸಭೆಯಲ್ಲಿ ಭಾಗವಹಿಸಿದ್ದರು. ಉಳಿದವರು ಸೋಮವಾರ ನಡೆಯಲಿರುವ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಕೆಪಿಸಿಸಿ ಕಚೇರಿಯಲ್ಲಿ ವಿಶೇಷ ‘ವಾರ್ ರೂಂ’ ಸ್ಥಾಪಿಸಲು ನಿರ್ಧರಿಸಲಾಗಿದ್ದು, SIR ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ಅಥವಾ ವ್ಯತ್ಯಾಸ ಕಂಡುಬಂದರೆ ಕಾರ್ಯಕರ್ತರು ತಕ್ಷಣ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಏತನ್ಮಧ್ಯೆ ಗ್ರಾಮೀಣಾಭಿವೃದ್ಧಿ ಹಾಗೂ ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, SIR ಪ್ರಕ್ರಿಯೆಯನ್ನು “ಅಸಂವಿಧಾನಿಕ” ಎಂದು ಟೀಕಿಸಿದ್ದಾರೆ.

“ಪಶ್ಚಿಮ ಬಂಗಾಳದಲ್ಲಿ ಲಾಜಿಕಲ್ ಡಿಸ್ಕ್ರೆಪೆನ್ಸಿ ಹೆಸರಿನಲ್ಲಿ ಅರ್ಹ ಮತದಾರರ ಹೆಸರನ್ನೇ ತೆಗೆದುಹಾಕಲಾಗಿದೆ. ಕರ್ನಾಟಕದಲ್ಲೂ ಅದೇ ಪ್ರಯತ್ನ ನಡೆಯುವ ಆತಂಕ ಇದೆ,” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ಕಾಂಗ್ರೆಸ್ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು SIR ವಿಚಾರವನ್ನು ಮುಂದಿಟ್ಟಿದೆ ಎಂದು ಆರೋಪಿಸಿದ್ದಾರೆ.

ಜನರ ಸಮಸ್ಯೆಗಳನ್ನು ಬಗೆಹರಿಸುವ ಬದಲು ಕಾಂಗ್ರೆಸ್ ಹೊಸ ಹೊಸ ವಿಚಾರಗಳನ್ನು ಎತ್ತಿ ಜನರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದೆ ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು