ಡಿ ಕೆ ಶಿವಕುಮಾರ್  
ರಾಜಕೀಯ

ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್: ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು?

ಸಿಎಂ ನನಗೆ ಏನೂ ಹೇಳಿಲ್ಲ ಎಂದಿರುವ ಅವರು, ಹೈಕಮಾಂಡ್‌ನಿಂದ ತಮಗೆ ಕರೆ ಬಂದಿಲ್ಲ. ಕರೆದರೆ ಹೋಗುತ್ತೇನೆ ಎಂದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಬುಲಾವ್ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಅವರನ್ನು ಕರೆದಿರುವ ಬಗ್ಗೆ ನನಗೆ ಗೊತ್ತಿಲ್ಲ, ಯಾಕೆ ಕರೆದಿದ್ದಾರೆ ಎಂಬುದು ತಮಗೆ ತಿಳಿದಿಲ್ಲ ಎಂದು ಡಿಕೆಶಿ ಹೇಳಿದ್ದಾರೆ.

ಸಿಎಂ ನನಗೆ ಏನೂ ಹೇಳಿಲ್ಲ ಎಂದಿರುವ ಅವರು, ಹೈಕಮಾಂಡ್‌ನಿಂದ ತಮಗೆ ಕರೆ ಬಂದಿಲ್ಲ. ಕರೆದರೆ ಹೋಗುತ್ತೇನೆ ಎಂದರು. ಸಂಪುಟ ಪುನಾರಚನೆ ಅಥವಾ ನಾಯಕತ್ವ ಬದಲಾವಣೆಯೇ ಯಾವ ವಿಚಾರಕ್ಕೆ ಸಿಎಂ ಅವರನ್ನು ಹೈಕಮಾಂಡ್ ಕರೆದಿರಬಹುದು ಎಂದು ಕೇಳಿದ ಪ್ರಶ್ನೆಗೆ ನನಗೆ ಗೊತ್ತಿಲ್ಲ ಎಂದಷ್ಟೇ ಉತ್ತರಿಸಿದ್ದಾರೆ.

ಸದ್ಯಕ್ಕೆ ಹೈಕಮಾಂಡ್‌ನಿಂದ ಇನ್ನಾವುದೇ ಮಾಹಿತಿ ಬಂದಿಲ್ಲ, ಎಸ್ ಐಆರ್ ಬಗ್ಗೆ, ಜಿಬಿಎ ಎಲೆಕ್ಷನ್ ಬಗ್ಗೆ ಇಂದು ನಾನು, ಸಿಎಂ, ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಮೀಟಿಂಗ್ ಮಾಡುತ್ತಿದ್ದೇವೆ. ಅದು ಬಿಟ್ಟು ನನಗೆ ಏನೂ ಗೊತ್ತಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್