ಸಿದ್ದರಾಮಯ್ಯ 
ರಾಜಕೀಯ

CM ಬದಲಾವಣೆ ಚರ್ಚೆ ಮಧ್ಯೆ ಸಿದ್ದರಾಮಯ್ಯ ಸಂಪುಟದಲ್ಲಿ ಮಹತ್ವದ ಬದಲಾವಣೆ

ಇಂದು ರಾತ್ರಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಜಿ ಪರಮೇಶ್ವರ ಹಾಗೂ ಸಚಿವ ಬೈರತಿ ಬಸವರಾಜ್ ಅವರೊಂದಿಗೆ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ್ದು, ಡಿಕೆ ಶಿವಕುಮಾರ್ ಅವರು ಪ್ರತ್ಯೇಕವಾಗಿ ದೆಹಲಿಗೆ ತೆರಳುತ್ತಿದ್ದಾರೆ.

ಬೆಂಗಳೂರು: ಕಾಂಗ್ರೆಸ್‌ ಹೈಕಮಾಂಡ್‌, ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಗೊಂದಲಕ್ಕೆ ಮುಂದಿನ ಎರಡು ಮೂರು ದಿನಗಳಲ್ಲಿ ಸಾಧ್ಯತೆ ಇದ್ದು, ಈ ಸಂಬಂಧ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಕರೆದಿದೆ.

ಇಂದು ರಾತ್ರಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಜಿ ಪರಮೇಶ್ವರ ಹಾಗೂ ಸಚಿವ ಬೈರತಿ ಬಸವರಾಜ್ ಅವರೊಂದಿಗೆ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ್ದು, ಡಿಕೆ ಶಿವಕುಮಾರ್ ಅವರು ಪ್ರತ್ಯೇಕವಾಗಿ ದೆಹಲಿಗೆ ತೆರಳುತ್ತಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆಯಾಗಿದೆ. ಹೌದು, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್‌ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚುವರಿ ಖಾತೆಗಳ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಈ ಬಗ್ಗೆ ರಾಜಭವನದಿಂದ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, ಯೋಜನೆ ಮತ್ತು ಸಾಂಖ್ಯಿಕ ಖಾತೆಯ ಹೊಣೆಯನ್ನು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್‌ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್‌ ಅವರು ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾಗಿದ್ದರು. ಹೀಗಾಗಿ ಅವರ ಖಾತೆಯನ್ನು ಕೆ.ವೆಂಕಟೇಶ್‌ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.

ಇನ್ನು ಕೆ.ಎನ್‌.ರಾಜಣ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಸಹಕಾರ ಇಲಾಖೆ ಮತ್ತು ಬಿ.ನಾಗೇಂದ್ರ ರಾಜೀನಾಮೆಯಿಂದ ತೆರವಾಗಿರುವ ಯುವ ಜನ ಕ್ರೀಡೆ ಹಾಗೂ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಖಾತೆಯನ್ನು ಸಿಎಂ ಸಿದ್ದರಾಮಯ್ಯ ಅವರು ಯಾರಿಗೂ ಹಂಚಿಕೆ ಮಾಡದೆ ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ

MCAಗೆ FDA ಶಾಕ್: ಕ್ರಿಕೆಟ್ ಮಂಡಳಿಯ 5 ಆಹಾರ ಮಳಿಗೆಗಳ ಲೈಸೆನ್ಸ್ ಅಮಾನತು

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ: JDS ಶಾಸಕ ಹೆಚ್ ಡಿ ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು