ಸಿದ್ದರಾಮಯ್ಯ - ಡಿಕೆ ಶಿವಕುಮಾರ್ 
ರಾಜಕೀಯ

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಮಂಗಳವಾರ ಮ್ಯಾರಥಾನ್ ಸಭೆಗಳನ್ನು ನಡೆಸುತ್ತಿದ್ದಾರೆ.

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕ್ರೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಮುಖ್ಯಮಂತ್ರಿ ಕುರ್ಚಿಯ ‘ಫೈನಲ್ ಫೈಟ್’ ಆರಂಭವಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಮಂಗಳವಾರ ಮ್ಯಾರಥಾನ್ ಸಭೆಗಳನ್ನು ನಡೆಸುತ್ತಿದ್ದಾರೆ.

ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಹೈವೋಲ್ಟೇಜ್ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೈಕಮಾಂಡ್ ನಾಯಕರ ಸಮ್ಮುಖದಲ್ಲೇ ಮೂರು ಷರತ್ತುಗಳನ್ನು ಇಟ್ಟಿದ್ದು, ಕೊಟ್ಟ ಮಾತು ಉಳಿಸಿಕೊಳ್ಳಿ ಎಂದು ಗರ್ಜಿಸಿದ್ದಾರೆ.

ಡಿಕೆ ಶಿವಕುಮಾರ್ ಅವರು ಅಧಿಕಾರ ಹಂಚಿಕೆಯ ಸೂತ್ರವನ್ನು ಮುಂದಿಟ್ಟುಕೊಂಡು ಹೈಕಮಾಂಡ್ ಮುಂದೆ ಮೂರು ಸ್ಫೋಟಕ ಷರತ್ತುಗಳನ್ನು ವಿಧಿಸಿ ಬಿಗಿಪಟ್ಟು ಹಿಡಿದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಡಿಕೆಶಿ ಅವರ ಈ ಪಟ್ಟು ಈಗ ಹೈಕಮಾಂಡ್ ನಾಯಕರನ್ನೂ ಧರ್ಮಸಂಕಟಕ್ಕೆ ಸಿಲುಕಿಸಿದೆ.

ಕೊಟ್ಟ ಮಾತು ಉಳಿಸಿಕೊಳ್ಳಿ

ಈ ಹಿಂದೆ ಕರ್ನಾಟಕದಲ್ಲಿ ಸರ್ಕಾರ ರಚನೆಯಾಗುವಾಗ ಅಧಿಕಾರ ಹಂಚಿಕೆ ವಿಚಾರದಲ್ಲಿ ಏನು ಮಾತುಕತೆಯಾಗಿತ್ತೋ, ಆ ಮಾತನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ಇಬ್ಬರೂ ಉಳಿಸಿಕೊಳ್ಳಬೇಕು. ಕಾಲಮಿತಿ ಮುಗಿದಿದ್ದು, ಈಗ ನಾಯಕತ್ವ ಬದಲಾವಣೆ ಆಗಲೇಬೇಕು ಎಂದು ಡಿಕೆಶಿ ಪಟ್ಟು ಹಿಡಿದಿದ್ದಾರೆ.

ಆಗಲ್ಲಾ ಅಂದ್ರೆ ಬಹಿರಂಗವಾಗಿ ಒಪ್ಪಿಕೊಳ್ಳಿ

ಒಂದು ವೇಳೆ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿಯಾಗಿ ಆಗಿ ಮುಂದುವರಿಸಲು ನಿರ್ಧರಿಸಿದ್ದರೆ ಮತ್ತು ಕೊಟ್ಟ ಮಾತು ಈಡೇರಿಸಲು ಆಗುತ್ತಿಲ್ಲ ಎಂದಾದರೆ, ಅದನ್ನು ಹೈಕಮಾಂಡ್ ಹಾಗೂ ಸಿಎಂ ಇಬ್ಬರೂ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿ ಬಹಿರಂಗವಾಗಿ ಒಪ್ಪಿಕೊಳ್ಳಲಿ. ಈ ಮೂಲಕ ದಿನನಿತ್ಯದ ಗೊಂದಲಕ್ಕೆ ಮತ್ತು ಕಾರ್ಯಕರ್ತರ ಆತಂಕಕ್ಕೆ ತಕ್ಷಣ ತೆರೆ ಎಳೆಯಿರಿ.

ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಹುದ್ದೆಯೂ ಬೇಡ

ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ನನಗೆ ಉಪ ಮುಖ್ಯಮಂತ್ರಿ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾವುದೂ ಬೇಡ, ಎರಡೂ ಸ್ಥಾನಗಳಿಗೂ ನಾನು ರಾಜೀನಾಮೆ ನೀಡುತ್ತೇನೆ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಕೆಲಸ ಮಾಡುತ್ತೇನೆ ಎಂದು ಡಿಕೆ ಶಿವಕುಮಾರ್ ಅವರು ಹೈಕಮಾಂಡ್ ನಾಯಕರ ಮುಂದೆ ಖಡಕ್ ಆಗಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ಸೀತಾಪುರದಲ್ಲಿ ವಿಚಿತ್ರ ಪ್ರಕರಣ: ಹಗಲು ಪ್ರೇಮಿ, ರಾತ್ರಿ ಗಂಡ ಬೇಕಂತೆ! ಇಬ್ಬರ ಜತೆ ಸಂಸಾರ ನಡೆಸಲು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ! Video

‘ಏನೇನ್ ಮಾಡ್ತಾರೋ ಗೊತ್ತಿಲ್ಲ’: Donald Trump ‘ಅನಿರೀಕ್ಷಿತ ವರ್ತನೆ’ ಬಗ್ಗೆ ಎಚ್ಚರಿಕೆ: ಮೋದಿ ಭೇಟಿ ಬಳಿಕ ಜಂಟಿ ಸುದ್ದಿಗೋಷ್ಠಿಗೆ ಭಾರತ ಹಿಂದೇಟು!

ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ಯಾವುದೇ ಚರ್ಚೆಯಿಲ್ಲದೇ ವಿಧಾನ ಪರಿಷತ್ತಿನಲ್ಲಿ ಎರಡು ವಿಧೇಯಕಗಳು ಪಾಸ್

Biggboss Kannada ಅಗ್ನಿಪರೀಕ್ಷೆ: ಗೆಟ್ ಔಟ್, ಇದೆಲ್ಲಾ ಬೇಡ ಬ್ರೋ; ವಿನಯ್ ಗೌಡಗೆ ಸ್ಪರ್ಧಿ ತಿರುಗೇಟು, Video ವೈರಲ್!