ಡಿಕೆ ಶಿವಕುಮಾರ್-ರಾಹುಲ್ ಗಾಂಧಿ-ಸಿದ್ದರಾಮಯ್ಯ 
ರಾಜಕೀಯ

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ; ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ದೆಹಲಿಯ ಇಂದಿರಾ ಭವನದಲ್ಲಿ ರಾಹುಲ್ ಗಾಂಧಿ ಹಾಗೂ ಸಿಎಂ ಸಿದ್ದರಾಮಯ್ಯ ನಡುವೆ ಪ್ರತ್ಯೇಕ ಸಭೆ ನಡೆದಿದೆ.

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕ್ರೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಮುಖ್ಯಮಂತ್ರಿ ಕುರ್ಚಿಯ ‘ಫೈನಲ್ ಫೈಟ್’ ಆರಂಭವಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಮಂಗಳವಾರ ಮ್ಯಾರಥಾನ್ ಸಭೆಗಳನ್ನು ನಡೆಸುತ್ತಿದ್ದಾರೆ.

ದೆಹಲಿಯ ಇಂದಿರಾ ಭವನದಲ್ಲಿ ರಾಹುಲ್ ಗಾಂಧಿ ಹಾಗೂ ಸಿಎಂ ಸಿದ್ದರಾಮಯ್ಯ ನಡುವೆ ಪ್ರತ್ಯೇಕ ಸಭೆ ನಡೆದಿದೆ. ಸುಮಾರು 45 ನಿಮಿಷಗಳ ಕಾಲ ಉಭಯ ನಾಯಕರ ಸಭೆ ನಡೆದಿದ್ದು, ಈ ವೇಳೆ ನಾಯಕತ್ವ ಬದಲಾವಣೆ ಬಗ್ಗೆ ಗಂಭೀರ ಚರ್ಚೆಯಾಗಿದೆ. ಇನ್ನು ಸಾಧಕ-ಬಾಧಕಗಳ ಬಗ್ಗೆಯೂ ಸಹ ಸಿದ್ದರಾಮಯ್ಯನವರು, ರಾಹುಲ್ ಗಾಂಧಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈ ಹೈವೋಲ್ಟೇಜ್ ಸಭೆಯಲ್ಲಿ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಕೆಗೆ ಯತ್ನಿಸಿದ್ದು, ಹಲವು ಆಫರ್ ಗಳನ್ನು ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣಕ್ಕೆ ಆಹ್ವಾನಿಸಿದ್ದು, ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಆಫರ್ ನೀಡಿದ್ದಾರೆ. ಆದರೆ ಈ ಆಫರ್ ಅನ್ನು ಸಿಎಂ ಸಿದ್ದರಾಮಯ್ಯ ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ.

ಇನ್ನು ಸಿಎಂ ಬದಲಾವಣೆಗೆ ಸಿದ್ದರಾಮಯ್ಯ ಒಪ್ಪಿಕೊಂಡರೆ, ಡಿಕೆ ಶಿವಕುಮಾರ್ ಅವರ ಸಂಪುಟದಲ್ಲಿ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರನ್ನು ಉಪ ಮುಖ್ಯಮಂತ್ರಿ ಮಾಡುವ ಭರವಸೆಯನ್ನು ರಾಹುಲ್ ಗಾಂಧಿ ನೀಡಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಹೈಕಮಾಂಡ್ ನ ಯಾವುದೇ ಆಫರ್ ಗೂ ಒಪ್ಪಿಗೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel