ವಿಧಾಸಸೌಧ ಆವರಣದಲ್ಲಿ ಜವಹರಲಾಲ್ ಪುಣ್ಯತಿಥಿ ಅಂಗವಾಗಿ ಪುಷ್ಪನಮನಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ  
ರಾಜಕೀಯ

'ಎಲ್ಲಾ ವಿಷಯ ನಾಳೆ ಮಾತಾಡೋಣ': ಸಿಎಂ ಹುದ್ದೆ ತ್ಯಾಗದ ಗುಟ್ಟು ಬಿಟ್ಟುಕೊಡದ ಸಿಎಂ; Video

ನಿನ್ನೆ ದೆಹಲಿಯಿಂದ ಬಂದು ಇಂದು ಮಾಧ್ಯಮಗಳ ಮುಂದೆ ಕಾಣಿಸಿಕೊಂಡ ಸಿದ್ದರಾಮಯ್ಯನವರ ಮುಂದೆ ಪತ್ರಕರ್ತರು ನಾಯಕತ್ವ ಬದಲಾವಣೆ, ಸಿಎಂ ಹುದ್ದೆ ರಾಜೀನಾಮೆ ವಿಚಾರ ಪ್ರಸ್ತಾಪಿಸಿದರು.

ಬೆಂಗಳೂರು : ದೆಹಲಿಯಲ್ಲಿ ಹೈಕಮಾಂಡ್ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿ ವಾಪಾಸಾಗಿರುವ ಸಿಎಂ ಸಿದ್ದರಾಮಯ್ಯ ಇಂದು ಬೆಳಗ್ಗೆ ಮಾಜಿ ಪ್ರಧಾನ ಮಂತ್ರಿ ಪಂಡಿತ್ ಜವಹರಲಾಲ್ ನೆಹರೂ ಅವರ 62ನೇ ವರ್ಷದ ಪುಣ್ಯತಿಥಿ ಕಾರ್ಯಕ್ರಮದಲ್ಲಿ ವಿಧಾನಸೌಧ ಆವರಣದಲ್ಲಿ ಭಾಗವಹಿಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ ಅವರು ಜವಹರಲಾಲ್ ನೆಹರೂ ಗುಣಗಾನ ಮಾಡಿದರು. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಅವರು ಮೊದಲ ಪ್ರಧಾನಮಂತ್ರಿಯಾಗಿದ್ದರು. 17 ವರ್ಷಗಳ ಕಾಲ ಈ ದೇಶದ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದರು. ಆಧುನಿಕ ಭಾರತ ನಿರ್ಮಾಣದಲ್ಲಿ ಅವರ ಪಾತ್ರ ಮುಖ್ಯವಾಗಿತ್ತು. ಅವರು ಸಮಾಜವಾದಿಯೂ ಆಗಿದ್ದರು, ಬಂಡವಾಳಶಾಹಿಯೂ ಆಗಿದ್ದರು, ಮಿಶ್ರ ಆರ್ಥಿಕತೆಗೆ ಹೆಚ್ಚು ಒತ್ತು ನೀಡಿದ್ದರು ಎಂದರು. ಶಿಕ್ಷಣ ಮತ್ತು ಸಹಕಾರ ಕ್ಷೇತ್ರದಲ್ಲಿ ವೈಜ್ಞಾನಿಕ ಮನೋಭಾವ ಬೆಳೆಯಲು ನೆಹರೂರವರು ಕಾರಣ ಎಂದರು.

ನಾಳೆ ಬೆಳಗ್ಗೆ ಎಲ್ಲಾ ಮಾತನಾಡೋಣ

ನಿನ್ನೆ ದೆಹಲಿಯಿಂದ ಬಂದು ಇಂದು ಮಾಧ್ಯಮಗಳ ಮುಂದೆ ಕಾಣಿಸಿಕೊಂಡ ಸಿದ್ದರಾಮಯ್ಯನವರ ಮುಂದೆ ಪತ್ರಕರ್ತರು ನಾಯಕತ್ವ ಬದಲಾವಣೆ, ಸಿಎಂ ಹುದ್ದೆ ರಾಜೀನಾಮೆ ವಿಚಾರ ಪ್ರಸ್ತಾಪಿಸಿದರು. ಅದರ ಬಗ್ಗೆ ಮಾತನಾಡುತ್ತಾರೆ ಎಂದುಕೊಂಡಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ನಾಳೆ ಎಲ್ಲಾ ಮಾತನಾಡೋಣ ಎಂದು ಹಾಗೆಯೇ ಕುತೂಹಲ ಇರಿಸಿಕೊಂಡರು.

ಇಂದು ಬೆಳಗ್ಗೆ ವಿಧಾನಸೌ ಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಪುಣ್ಯ ತಿಥಿಯ ಅಂಗವಾಗಿ ನೆಹರು ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.

ನಾಳೆ ರಾಜ್ಯಪಾಲರ ಭೇಟಿ

ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಹೇಳಲಾ ಗಿದೆ. ಪಕ್ಷವಾಗಲಿ ಯಾವುದೇ ನಾಯಕರು ಈ ಬಗ್ಗೆ ಹೇಳಿಕೆ ನೀಡಿಲ್ಲ. ಯಾರೊಬ್ಬರೂ ರಾಜೀನಾಮೆ ನೀಡುವುದಿಲ್ಲ ಅವರು ಮುಂದುವರಿಯಲಿದ್ದಾರೆ ಎನ್ನುವ ಹೇಳಿಕೆಯನ್ನೂ ನೀಡಿಲ್ಲ. ಬೆಳಗ್ಗೆ 10.30 ರಾಜ್ಯಪಾಲರ ಭೇಟಿಗೆ ಸಮಯಾ ವಕಾಶ ನಿಗದಿಪಡಿಸಿದ್ದಾರೆ ಎಂದು ಕೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

HMT ಆದಾಗ ನಾನು ಹುಟ್ಟಿರ್ಲಿಲ್ಲ, ನೀವೇನು? ಅರಣ್ಯ ಭೂಮಿ ಅಂತ ದಾಖಲೆ ತೋರಿಸಿ ಕುಮಾರಸ್ವಾಮಿಗೆ ಈಶ್ವರ್ ಖಂಡ್ರೆ ಟಾಂಗ್

ಪಾಕ್ ಉಗ್ರರ ರಣಬೇಟೆ: ಬಲೂಚಿಸ್ತಾನದಲ್ಲಿ 88 ಭಯೋತ್ಪಾದಕರ ಹತ್ಯೆ!

'10 Snakes' ಪೋಸ್ಟ್ ಗೆ ಶ್ರೇಷ್ಠ ಅಯ್ಯರ್‌ ಲೈಕ್, ಭಾರಿ ವಿವಾದಕ್ಕೆ ಗುರಿಯಾದ ಶ್ರೇಯಸ್ ಅಯ್ಯರ್! ನೆಟ್ಟಿಗರು ತೀವ್ರ ಚರ್ಚೆ

INS Mahendragiri: ಪ್ರಾಜೆಕ್ಟ್ 17A; ಕೇವಲ 18 ತಿಂಗಳಲ್ಲಿ 6ನೇ ಯುದ್ಧನೌಕೆ ನೌಕಾಪಡೆಗೆ ಸೇರ್ಪಡೆ; Video