ಸಿಎಂ ಸಿದ್ದರಾಮಯ್ಯ-ಡಿಕೆ ಶಿವಕುಮಾರ್  online desk
ರಾಜಕೀಯ

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ನೂತನ ಮುಖ್ಯಮಂತ್ರಿ ಆಯ್ಕೆ ಸಂಬಂಧ ಇಂದು ಸಂಜೆ ಬೆಂಗಳೂರಿಗೆ ಆಗಮಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು, ಮಾಧ್ಯಮಗಳು ಈ ವಿಷಯದ ಬಗ್ಗೆ ಊಹಾಪೋಹಗಳನ್ನು ವರದಿ ಮಾಡಬಾರದು ಎಂದರು.

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಗೊಂದಲಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ತೆರೆ ಎಳೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ.

ಮುಖ್ಯಮಂತ್ರಿ ಬದಲಾವಣೆ ಹಾಗೂ ನೂತನ ಮುಖ್ಯಮಂತ್ರಿ ಆಯ್ಕೆ ಸಂಬಂಧ ಇಂದು ಸಂಜೆ ಬೆಂಗಳೂರಿಗೆ ಆಗಮಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು, ಮಾಧ್ಯಮಗಳು ಈ ವಿಷಯದ ಬಗ್ಗೆ ಊಹಾಪೋಹಗಳನ್ನು ವರದಿ ಮಾಡಬಾರದು ಎಂದರು.

ಕಾಂಗ್ರೆಸ್ ತನ್ನ ನಾಯಕತ್ವದ ವಿಷಯಗಳನ್ನು ನಿರ್ಧರಿಸುವ ಸಾಮರ್ಥ್ಯ ಹೊಂದಿದೆ ಮತ್ತು ಯಾವುದೇ ನಿರ್ಧಾರ ತೆಗೆದುಕೊಂಡರೂ ಅದನ್ನು ಸಾರ್ವಜನಿಕರಿಗೆ ತಿಳಿಸುತ್ತದೆ. ಅಲ್ಲಿಯವರೆಗೆ, ದಯವಿಟ್ಟು ಊಹಾಪೋಹಗಳನ್ನು ಹರಡಬೇಡಿ ಎಂದರು.

"ಪ್ರಸ್ತುತ, ಕಾಂಗ್ರೆಸ್ ಪಕ್ಷವು ಶಾಸಕಾಂಗ ಪಕ್ಷದ ಯಾವುದೇ ಸಭೆಯನ್ನು ಕರೆದಿಲ್ಲ. ಇನ್ನೂ ಈ ಬಗ್ಗೆ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ನಿರ್ಧಾರ ತೆಗೆದುಕೊಂಡ ನಂತರ, ನಾವು ನಿಮಗೆ ತಿಳಿಸುತ್ತೇವೆ. ಅದು ಒಂದು ತಿಂಗಳು, 20 ದಿನಗಳು, ನಾಳೆ ಎಂದು ನಾನು ನಿಮಗೆ ಹೇಳಲು ಸಾಧ್ಯವಿಲ್ಲ" ಎಂದು ಸುರ್ಜೇವಾಲ ಹೇಳಿದರು.

ನಿನ್ನೆ ದೆಹಲಿಯಲ್ಲಿ ಸಭೆ ನಡೆಸಲಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ವೇಣುಗೋಪಾಲ್ ಭಾಗಿಯಾಗಿದ್ದರು. ರಾಜ್ಯಸಭಾ ಮತ್ತು ವಿಧಾನ ಪರಿಷತ್ ಬಗ್ಗೆ ಸಭೆ ಮಾಡಿದ್ವಿ. ಪವರ್ ಶೇರಿಂಗ್ ಆ ರೀತಿಯದ್ದು ಏನು ಇಲ್ಲ. ರಾಜ್ಯ ಸಭೆಯದ್ದು ಮಾತ್ರ ಚರ್ಚೆ ಆಗಿದೆ. ಸಿಎಂ ಬದಲಾವಣೆ ಬಗ್ಗೆ ಮುಂದೆ ಹೇಳುತ್ತೇವೆ. ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿ, ಎರಡು ಬಾರಿ ಸಿಎಂ ಆಗಿ ಕೆಲಸ ಮಾಡಿದ್ದಾರೆ. ಅವರಿಗೆ ಅವರದ್ದೇ ಆದ ವರ್ಚಸ್ಸು ಇದೆ ಎಂದರು.

ಇನ್ನು ಡಿಕೆ ಶಿವಕುಮಾರ್ ಅವರು ಸಹ ಲೀಡರ್ ಆಗಿ ಬೆಳೆದು ಬಂದವರು. ಹಲವು ಮುಖ್ಯಮಂತ್ರಿಗಳ ಕೈ ಕೆಳಗೆ ಸಚಿವರಾಗಿ ಕೆಲಸ ಮಾಡಿದ್ದಾರೆ ಎಂದು ಹೇಳುವ ಮೂಲಕ ಸರ್ಜೇವಾಲ ಅವರು, ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂಬುದನ್ನು ಪರೋಕ್ಷವಾಗಿ ಹೇಳಿದ್ದಾರೆ.

ಸಿದ್ದರಾಮಯ್ಯ ಬಹಳ ಪ್ರಮುಖ ನಾಯಕರು. ಡಿಕೆಶಿ ಸಂಘಟನೆಯಿಂದ ಬಂದವರು. ನಾವು ತೆಗೆದುಕೊಳ್ಳುವ ತೀರ್ಮಾನ ನಿಮಗೆ ತಿಳಿಸುತ್ತೇವೆ. ಏನೇ ಆದರೂ, ಅದನ್ನು ಕರ್ನಾಟಕ ಜನತೆಗೆ ಹೇಳುತ್ತೇವೆ. ಕರ್ನಾಟಕ ಜನತೆಗಾಗಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸರ್ಜೇವಾಲ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!