ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತಿತರರು 
ರಾಜಕೀಯ

ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ- ಬಿಜೆಪಿ

ಕರ್ನಾಟಕದ ಅಭಿವೃದ್ಧಿಯನ್ನು ಸಂಪೂರ್ಣ ಸ್ತಬ್ಧಗೊಳಿಸಿ, ಕಲೆಕ್ಷನ್‌-ಕರಪ್ಷನ್‌-ಕಮಿಷನ್‌ನಲ್ಲಿಯೇ ಮೂರು ವರ್ಷ ದೂಡಿ, ಈಗ ರಾಜೀನಾಮೆ ಎಂಬ ಅಲ್ಪ ವಿರಾಮ ಇಟ್ಟಿದ್ದಾರೆ ಎಂದು ಟೀಕಿಸಿದೆ.

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನಕ್ಕೆ ತಾತ್ಕಾಲಿಕ ಅಂತ್ಯ ದೊರೆತಿದೆ. ಆದರೆ ಇದರಿಂದ ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ ಎಂದು ರಾಜ್ಯ ಬಿಜೆಪಿ ಗುರುವಾರ ಟೀಕಾ ಪ್ರಹಾರ ನಡೆಸಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ವಿಚಾರ ಹಂಚಿಕೊಂಡಿರುವ ರಾಜ್ಯ ಬಿಜೆಪಿ, ಕಾಂಗ್ರೆಸ್ ಸರ್ಕಾರದ ದ ಮೂರು ವರ್ಷಗಳ ಸಾಧನೆ ಎಂದರೆ ಅದು ದಲಿತರ ಹಣ ದುರ್ಬಳಕೆ, ವಾಲ್ಮೀಕಿ ನಿಗಮದ ಹಣ ಲೂಟಿ, ಯುವಕರಿಗೆ ಟೋಪಿ, ರೈತರಿಗೆ ನೇಣು ಕುಣಿಕೆ, ಜನಸಾಮಾನ್ಯರಿಗೆ ಬೆಲೆ ಏರಿಕೆ, ಕರ್ನಾಟಕಕ್ಕೆ ಸಾಲದ ಶೂಲ ಹೊದಿಕೆ ಎಂದು ಆರೋಪಿಸಿದೆ.

ಕರ್ನಾಟಕದ ಅಭಿವೃದ್ಧಿಯನ್ನು ಸಂಪೂರ್ಣ ಸ್ತಬ್ಧಗೊಳಿಸಿ, ಕಲೆಕ್ಷನ್‌-ಕರಪ್ಷನ್‌-ಕಮಿಷನ್‌ನಲ್ಲಿಯೇ ಮೂರು ವರ್ಷ ದೂಡಿ, ಈಗ ರಾಜೀನಾಮೆ ಎಂಬ ಅಲ್ಪ ವಿರಾಮ ಇಟ್ಟಿದ್ದಾರೆ ಎಂದು ಟೀಕಿಸಿದೆ.

ನೂತನವಾಗಿ ಯಾರೇ ಸಿಎಂ ಆಗಿ ಬಂದರೂ, ಕನ್ನಡಿಗರಿಗಾಗಲಿ, ಕರ್ನಾಟಕಕ್ಕಾಗಲಿ ನಯಾಪೈಸೆ ಪ್ರಯೋಜನ ಇಲ್ಲ. ಬಡವರು, ಶ್ರಮಿಕರು, ರೈತರು, ಯುವಕರು, ಮಹಿಳೆಯರು, ದೀನ-ದಲಿತರು, ಹಿಂದುಳಿದವರನ್ನು ಹಿಂಸಿಸಿ, ಶೋಷಿಸಿ ಸರ್ಕಾರ ನಡೆಸುವ ಇವರ ಪ್ರವೃತ್ತಿ ಮುಂದುವರೆಯುತ್ತದೆ ಹೊರತು ಬದಲಾಗುವುದಿಲ್ಲ ಎಂದು ಹೇಳಿದೆ.

ಕರ್ನಾಟಕವನ್ನು ಸಂಪೂರ್ಣ ದಿವಾಳಿ ಮಾಡುವುದು ಹಾಗೂ ಕಾಂಗ್ರೆಸ್‌ ಹೈಕಮಾಂಡಿಗೆ ಕರ್ನಾಟಕವನ್ನು ಎಟಿಎಂ ಮಾಡುವುದು ಎರಡೇ ಇವರ ಅಜೆಂಡಾ. ಹಾಗಾಗಿ, ಆದಷ್ಟು ಬೇಗ ಈ ಜನವಿರೋಧಿ ಸರ್ಕಾರ ತೊಲಗಿದರೆ ಕನ್ನಡಿಗರಿಗೆ ನೆಮ್ಮದಿಯ ದಿನ ಸಿಗಲಿದೆ ಎಂದು ಬಿಜೆಪಿ ಬಯಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ನಾವು ಕೈ ಜೋಡಿಸೋಣ": ಗಲ್ವಾನ್ ಸಂಘರ್ಷದ ಬಳಿಕ ಮೊದಲ ಮಾತುಕತೆ ವೇಳೆ Narendra Modi ಗೆ Xi Jinping ಸಂದೇಶ; ಭಾರತದೆದುರು ಮಂಡಿಯೂರಿದ ಚೀನಾ?

ಪ್ರಶ್ನೆ ಪತ್ರಿಕೆ ಸೋರಿಕೆ ಸಹಿಸಲ್ಲ: KPSC ವಿರುದ್ಧ ಹೋರಾಟಕ್ಕೆ CJP ಎಂಟ್ರಿ: ನೊಂದ ಅಭ್ಯರ್ಥಿಗಳಿಗೆ ನ್ಯಾಯದ ಭರವಸೆ

ಮೈಸೂರಿನ 'ಪೇಟೆ ರೌಡಿ' ಪೊಲೀಸ್ ಠಾಣೆಗೆ ನುಗ್ಗಿದ್ರೆ ನಾನು ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುತ್ತೇನೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನ್

ಚೀನಾ ಇದ್ದರೂ ಬ್ರಿಕ್ಸ್‌ ಸದಸ್ಯತ್ವಕ್ಕಾಗಿ 3 ವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ರೂ ಅವಕಾಶ ಸಿಕ್ಕಿಲ್ಲ: ಪಾಕ್ ಗೋಳಾಟ!

ಬಳ್ಳಾರಿ ನಂತರ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ; ಸೆಪ್ಟೆಂಬರ್ 15 ರಿಂದ ರಾಜ್ಯಾದ್ಯಂತ ಹೋರಾಟ