ದೆಹಲಿಯಲ್ಲಿ ಬೀಡುಬಿಟ್ಟ ಸಚಿವಕಾಂಕ್ಷಿಗಳು 
ರಾಜಕೀಯ

ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳ ತೀವ್ರ ಲಾಬಿ: ಕಾಂಗ್ರೆಸ್ ವರಿಷ್ಠರ ಭೇಟಿಗಾಗಿ ದೆಹಲಿಯಲ್ಲಿ ಬೀಡುಬಿಟ್ಟ ಹಲವು ಶಾಸಕರು!

ಡಿಕೆ ಶಿವಕುಮಾರ್ ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಹೊಸ ನಾಯಕರಾಗಿ ಆಯ್ಕೆಯಾಗುವ ನಿರೀಕ್ಷೆಯಿದೆ. ಹೊಸ ಸಚಿವ ಸಂಪುಟದ ರಚನೆ ಹಾಗೂ ಅಧಿಕಾರ ಬದಲಾವಣೆ ಕುರಿತು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಬ್ಬರೂ ಶುಕ್ರವಾರ ಕಾಂಗ್ರೆಸ್ ವರಿಷ್ಠರೊಂದಿಗೆ ಚರ್ಚೆ ನಡೆಸಿದ್ದಾರೆ.

ಬೆಂಗಳೂರು: ಡಿಕೆ ಶಿವಕುಮಾರ್ ಪಟ್ಟಾಭಿಷೇಕಕ್ಕೆ ಸಿದ್ಧತೆಗಳು ನಡೆಯುತ್ತಿರುವಂತೆಯೇ ಸಚಿವ ಸ್ಥಾನಕ್ಕಾಗಿ ಲಾಬಿ ತೀವ್ರಗೊಂಡಿದ್ದು, ಕಾಂಗ್ರೆಸ್ ಹೈಕಮಾಂಡ್ ಭೇಟಿಯಾಗಲು ಹಲವು ಆಕಾಂಕ್ಷಿಗಳು ನವದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.

ಡಿಕೆ ಶಿವಕುಮಾರ್ ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಹೊಸ ನಾಯಕರಾಗಿ ಆಯ್ಕೆಯಾಗುವ ನಿರೀಕ್ಷೆಯಿದೆ. ಹೊಸ ಸಚಿವ ಸಂಪುಟದ ರಚನೆ ಹಾಗೂ ಅಧಿಕಾರ ಬದಲಾವಣೆ ಕುರಿತು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಬ್ಬರೂ ಶುಕ್ರವಾರ ಕಾಂಗ್ರೆಸ್ ವರಿಷ್ಠರೊಂದಿಗೆ ಚರ್ಚೆ ನಡೆಸಿದ್ದಾರೆ.

ಸಿದ್ದರಾಮಯ್ಯ ಸಂಪುಟದಲ್ಲಿದ್ದ ಕೆಲವು ಸಚಿವರು ಹೊಸ ಸಂಪುಟದಲ್ಲಿಯೂ ತಮ್ಮ ಸ್ಥಾನಗಳನ್ನು ಭದ್ರಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಈ ಬಾರಿ ಸಂಪುಟ ಸ್ಥಾನದ ನಿರೀಕ್ಷೆಯಲ್ಲಿರುವ ಅನೇಕ ಶಾಸಕರು ಕೂಡ ರಾಷ್ಟ್ರ ರಾಜಧಾನಿಗೆ ತೆರಳಿದ್ದಾರೆ. ಹೊಸ ಸಚಿವ ಸಂಪುಟದಲ್ಲಿ ಹಳೆಯ ಮತ್ತು ಹೊಸ ಮುಖಗಳಿಗೆ ಅವಕಾಶ ನೀಡಲಾಗುತ್ತದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಜಾತಿ, ಪ್ರದೇಶವಾರು ಆದ್ಯತೆ ಹಾಗೂ ಸಿದ್ದರಾಮಯ್ಯ ಬೆಂಬಲಿಗರನ್ನು ಗಮನದಲ್ಲಿಟ್ಟುಕೊಂಡು ಸಮತೋಲನವನ್ನು ಸಾಧಿಸಲು ಪ್ರಯತ್ನಿಸಲಾಗುತ್ತಿದೆ. ನಾಲ್ಕು ಡಿಸಿಎಂ ಹುದ್ದೆಗಳ ಸೃಷ್ಟಿಯೊಂದಿಗೆ ಸಿದ್ದರಾಮಯ್ಯ ಸಂಪುಟದಲ್ಲಿ ಹಲವು ಸಚಿವರನ್ನು ಉಳಿಸಿಕೊಳ್ಳದಿರಬಹುದು ಎಂಬ ಊಹಾಪೋಹಗಳು ಹರಡಿವೆ.

ಸಂಪುಟ ರಚನೆ ಕುರಿತು ಪಕ್ಷದ ವರಿಷ್ಠರೊಂದಿಗೆ ಚರ್ಚೆಗಳು ಇನ್ನೂ ನಡೆಯುತ್ತಿವೆ. ಸಿದ್ದರಾಮಯ್ಯ ಅವರ ಮಗ ಮತ್ತು ವಿಧಾನ ಪರಿಷತ್ ಸದಸ್ಯ ಯತೀಂದ್ರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಲು ತಮ್ಮ ತಂದೆಯೊಂದಿಗೆ ಬಂದಿರುವುದು ಅವರ ಸಂಪುಟ ಸೇರ್ಪಡೆ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿದೆ. ಸಿದ್ದರಾಮಯ್ಯ ಸಂಪುಟದಲ್ಲಿದ್ದ ಕೆಲವು ಹಿರಿಯ ಸಚಿವರಾದ ಡಾ. ಜಿ. ಪರಮೇಶ್ವರ, ಎಂ. ಬಿ. ಪಾಟೀಲ್, ಕೆ. ಎಚ್. ಮುನಿಯಪ್ಪ, ಕೆ. ಜೆ. ಜಾರ್ಜ್, ಬೈರತಿ ಸುರೇಶ್, ಪ್ರಿಯಾಂಕ್ ಖರ್ಗೆ ಮತ್ತು ಬೋಸರಾಜು ದೆಹಲಿಯಲ್ಲಿದ್ದಾರೆ. ಪಕ್ಷವು ಅವರಲ್ಲಿ ಕೆಲವರನ್ನು ಚರ್ಚೆಗಾಗಿ ರಾಷ್ಟ್ರ ರಾಜಧಾನಿಗೆ ಕರೆಸಿದೆ ಎನ್ನಲಾಗಿದೆ.

ಇನ್ನೂ ಸಚಿವ ಸ್ಥಾನದ ಆಕಾಂಕ್ಷಿಗಳಾದ ರಿಜ್ವಾನ್ ಅರ್ಷದ್, ಶಿವಲಿಂಗೇಗೌಡ, ನಾರಾಯಣಸ್ವಾಮಿ, ಕೆ. ವೈ. ನಂಜೇಗೌಡ, ಕೊತ್ತೂರು ಜಿ. ಮಂಜುನಾಥ್, ಶ್ರೀನಿವಾಸ್ ಮಾನೆ, ಯಾಸಿರ್ ಅಹ್ಮದ್ ಖಾನ್ ಪಠಾಣ್ ದೆಹಲಿಯಲ್ಲಿದ್ದಾರೆ. ಎಂಎಲ್‌ಸಿಗಳಾದ ನಾಸೀರ್ ಅಹ್ಮದ್, ಸಲೀಮ್ ಅಹ್ಮದ್ ಮತ್ತು ಅನಿಲ್ ಕುಮಾರ್ ಕೂಡ ರಾಷ್ಟ್ರ ರಾಜಧಾನಿಯಲ್ಲಿದ್ದಾರೆ. ನಾರಾಯಣಸ್ವಾಮಿ ಮತ್ತು ಕೆ. ವೈ. ನಂಜೇಗೌಡ ಸೇರಿದಂತೆ ಕೋಲಾರದ ಶಾಸಕರು ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಶಿವಕುಮಾರ್ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಜಿಲ್ಲೆಯ ಕೆಲವರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ.

ಈ ಮಧ್ಯೆ ಶಿವಲಿಂಗೇಗೌಡ ಹಾಸನ ಜಿಲ್ಲೆಯಿಂದ ಸಚಿವ ಸ್ಥಾನ ಪಡೆಯಲು ಪ್ರಯತ್ನಿಸಿದ್ದಾರೆ. ಕಳೆದ ಸಚಿವ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್ ಖಂಡ್ರೆ, ಗುರುವಾರ ಪ್ರಬಲ ಲಿಂಗಾಯತ ಸಮುದಾಯದ ಶಾಸಕರೊಂದಿಗೆ ಸಭೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟದಲ್ಲಿ ಲಿಂಗಾಯತರಿಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂದು ಹೇಳಿದರು. ಖಂಡ್ರೆ ಅವರು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿದ್ದಾರೆ. ನೂತನ ಕೆಪಿಸಿಸಿ ಅಧ್ಯಕ್ಷರ ಹುದ್ದೆಯ ಬಗ್ಗೆಯೂ ಮಾತುಕತೆ ನಡೆಯುತ್ತಿದೆ. ಹಿರಿಯ ಶಾಸಕ ಮತ್ತು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಈ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಾಧ್ಯಮಗಳಿಗೆ ಪ್ರವೇಶ ನಿರ್ಬಂಧಿಸುವ ಹಕ್ಕು ಯಾವುದೇ ಸರ್ಕಾರಕ್ಕೆ ಇಲ್ಲ: ಟ್ರಂಪ್ ವಿರುದ್ಧ ಒಂದಾದ ಅಮೆರಿಕದ ಮಾಧ್ಯಮಗಳು!

ಸೌಜನ್ಯ ಕೇಸ್‌ ಮರು ತನಿಖೆಗೆ ಸುಪ್ರೀಂ ಆದೇಶ: ಶ್ರೀ ಕ್ಷೇತ್ರ ಧರ್ಮಸ್ಥಳ ಹೇಳಿದ್ದು ಏನು?

ಬೆಳಗಾವಿ: 6 ಮಂದಿ ಸಾವಿನ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್; ವ್ಯಕ್ತಿ ಕೈಯಲ್ಲಿ ಬಕೆಟ್; CCTVಯಲ್ಲಿ ಸಿಕ್ತು ಸ್ಫೋಟಕ ತಿರುವು!

ಏಷ್ಯನ್ ಗೇಮ್ಸ್ 2026: ಎರಡನೇ ದಿನ ನಾಲ್ಕು ಪದಕ ಗೆದ್ದ ಭಾರತ, MMA ಸ್ಪರ್ಧೆಯಲ್ಲಿ ಕಂಚು ಗೆದ್ದು, ಇತಿಹಾಸ ಬರೆದ ಸುಚಿಕಾ ತರಿಯಾಲ್!

ಮಾಗಡಿ: ಚಕ್ರಬಾವಿ ಮರುಳಸಿದ್ದೇಶ್ವರ ಜಂಗಮ ಮಠದ ಸ್ವಾಮೀಜಿ ಲಿಂಗೈಕ್ಯ