ಮಹಾಕುಂಭಮೇಳದಲ್ಲಿ ತ್ರಿವೇಣಿ ಸಂಗಮದಲ್ಲಿ ನೊಣವಿನಕೆರೆ ಶ್ರೀಗಳಿಂದ ಆಶೀರ್ವಾದ ಪಡೆದು ಪವಿತ್ರ ಸ್ನಾನ ಮಾಡಿದ್ದ ಡಿ ಕೆ ಶಿವಕುಮಾರ್ ದಂಪತಿ(ಸಂಗ್ರಹ ಚಿತ್ರ) 
ರಾಜಕೀಯ

'ಮಾತು ಆಡಿದರೆ ಮುತ್ತು ಒಡೆದು ಹೋಗಲಿದೆ, ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವವರೆಗೆ ಹುಷಾರ್': ಡಿ.ಕೆ ಶಿವಕುಮಾರ್ ಗೆ ನೊಣವಿನಕೆರೆ ಶ್ರೀ ಎಚ್ಚರಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು, ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಕರೆಸಿದ್ದ ಸಂದರ್ಭದಲ್ಲಿ ಶಿವಯೋಗೀಶ್ವರ ಸ್ವಾಮೀಜಿಗಳು, ನೂರಕ್ಕೆ ನೂರು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಪಕ್ಕಾ ಎಂದು ಹೇಳಿದ್ದರು.

ಬೆಂಗಳೂರು: ತುಮಕುರು ಜಿಲ್ಲೆ ತಿಪಟೂರಿನ ನೊಣವಿನಕೆರೆ ಶ್ರೀ ಕಾಡುಸಿದ್ದೇಶ್ವರ ಮಠದ ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿಗಳg, ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತರು. ಧಾರ್ಮಿಕತೆ, ದೇವರ ಮೇಲೆ ಅಪಾರ ನಂಬಿಕೆ ಇಟ್ಟಿರುವ ಡಿ ಕೆ ಶಿವಕುಮಾರ್ ಏನೇ ಶುಭಕಾರ್ಯ ಮಾಡುವುದಿದ್ದರೂ ಅವರ ಸಲಹೆ ಸೂಚನೆ ಕೇಳಿ ಅಭಿಪ್ರಾಯ ಪಡೆದು ಮುಂದುವರಿಯುತ್ತಾರೆ. ಅದೇ ರೀತಿ ಈಗ ಅವರು ಮುಖ್ಯಮಂತ್ರಿಯಾಗುತ್ತಿರುವ ಹೊತ್ತಿನಲ್ಲಿ ಶ್ರೀಗಳು ಕೆಲವೊಂದು ಜಾಗರೂಕತೆಯ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು, ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಕರೆಸಿದ್ದ ಸಂದರ್ಭದಲ್ಲಿ ಶಿವಯೋಗೀಶ್ವರ ಸ್ವಾಮೀಜಿಗಳು, ನೂರಕ್ಕೆ ನೂರು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಪಕ್ಕಾ ಎಂದು ಹೇಳಿದ್ದರು. ಅವರ ಭವಿಷ್ಯ ನಿಜವಾಗುತ್ತಿದೆ, ಡಿ ಕೆ ಶಿವಕುಮಾರ್ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗುತ್ತಿದ್ದಾರೆ. ಆದರೆ ಈಗ, ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಸಾಧ್ಯವಾದಷ್ಟು ಮೌನವಾಗಿ ಇರಬೇಕು, ಹೆಚ್ಚು ಮಾತನಾಡುವುದು ಬೇಡ ಎಂದು ಸಲಹೆ ನೀಡಿದ್ದಾರಂತೆ.

ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸುವವರೆಗೆ ಜಾಸ್ತಿ ಮಾತು ಬೇಡ

ಮಾತು ಆಡಿದರೆ ಮುತ್ತು ಒಡೆದು ಹೋಗಲಿದೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವವರೆಗೆ ಯಾರ ಬಳಿಯೂ ಅವಶ್ಯಕತೆಗಿಂತ ಜಾಸ್ತಿ ಮಾತನಾಡದಂತೆ, ನೊಣವಿನಕೆರೆ ಶಿವಯೋಗೀಶ್ವರ ಶ್ರೀಗಳು ಸೂಚನೆಯನ್ನು ನೀಡಿದ್ದಾರೆ ಎಂದು ವರದಿಯಾಗಿದೆ.

ಪದಗ್ರಹಣ ಆಗುವವರೆಗೆ ಹೆಚ್ಚು ಮಾತನಾಡಲು ಹೋಗಬೇಡಿ

ಸಿಎಂ ಪದಗ್ರಹಣ ಆಗುವವರೆಗೆ ಜಾಸ್ತಿ ಮಾತನಾಡಲು ಹೋಗಬೇಡಿ, ಕೆಲಸ ಕೆಡಲಿದೆ ಎನ್ನುವ ಎಚ್ಚರಿಕೆಯನ್ನು ನೊಣವಿನಕೆರೆ ಶಿವಯೋಗೀಶ್ವರ ಶ್ರೀಗಳು ನೀಡಿದ್ದಾರೆ. ಈ ಕಾರಣಕ್ಕಾಗಿ, ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಡಿಕೆ ಸುರೇಶ್, ಬೆಂಬಲಿಗರಿಗೆ ಯಾವುದೇ ಹೇಳಿಕೆಯನ್ನು ನೀಡಬಾರದು ಎನ್ನುವ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದರು. ಸ್ವಾಮೀಜಿಗಳ ಎಚ್ಚರಿಕೆ ಬೆನ್ನಲ್ಲೇ, ಸಹೋದರರಿಬ್ಬರು ಸಾಧ್ಯವಾದಷ್ಟು ಮೌನಕ್ಕೆ ಶರಣಾಗಿದ್ದಾರಂತೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi Building Collapse: ಸಾವಿನ ಸಂಖ್ಯೆ 5ಕ್ಕೆ ಏರಿಕೆ; ಮೂವರ ಸ್ಥಿತಿ ಗಂಭೀರ, ಇನ್ನೂ 40ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ, ತನಿಖೆಗೆ ಸಮಿತಿ ರಚನೆ!

43ನೇ ವಯಸ್ಸಿನಲ್ಲಿ ಶಿಶ್ನ ಹಿಗ್ಗುವಿಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಕೋಟ್ಯಾಧಿಪತಿ ಇಘೋ ಉಬಿರಿಬೊ ಸಾವು!

Delhi building collapse: ‘ಪ್ರತಿ ವಿದ್ಯಾರ್ಥಿಯ ಜೀವವೂ ಅಮೂಲ್ಯ, ರಕ್ಷಣೆ ಖಚಿತಪಡಿಸಬೇಕು’: ಮೋದಿ ಸರ್ಕಾರಕ್ಕೆ ರಾಹುಲ್ ಗಾಂಧಿ ಆಗ್ರಹ

Toxic ಮೂಲಕ ಇತಿಹಾಸ ಸೃಷ್ಟಿಸಿದ ಯಶ್; ಕನ್ನಡದ ಏಕೈಕ ನಟನಾಗಿ ಹೊಸ ದಾಖಲೆ!

ರಕ್ಷಾಬಂಧನ ದಿನದಂದೇ ಅಣ್ಣನ ಬಗ್ಗೆ ಕೆಟ್ಟ ಕಾಮೆಂಟ್, ಅತ್ತಿಗೆಯ ಕತ್ತು ಕೊಯ್ದು ನೀರಿನ ಟ್ಯಾಂಕ್‌ಗೆ ಎಸೆದ ತಂಗಿ!