ದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಿದ ಸಿದ್ದರಾಮಯ್ಯ 
ರಾಜಕೀಯ

ಸಿಎಂ ಸ್ಥಾನಕ್ಕೆ ರಾಜೀನಾಮೆ: ಇಂದು ದೆಹಲಿಯಲ್ಲಿ ಸೋನಿಯಾ, ರಾಹುಲ್, ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಸಿದ್ದರಾಮಯ್ಯ; Video

ಸಿದ್ದರಾಮಯ್ಯ ಅವರು ತಮ್ಮ ಪುತ್ರ ಯತೀಂದ್ರ ಅವರೊಂದಿಗೆ ಭೇಟಿ ನೀಡಿದ್ದು, ಪಕ್ಷದ ನಾಯಕತ್ವದಲ್ಲಿ ತಮ್ಮ ಭವಿಷ್ಯದ ಪಾತ್ರ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಇಂದು ಶುಕ್ರವಾರ ಬೆಳಗ್ಗೆ ದೆಹಲಿಯ 10 ಜನಪಥ್ ನಿವಾಸದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.

ಸಿದ್ದರಾಮಯ್ಯ ಅವರು ತಮ್ಮ ಪುತ್ರ ಯತೀಂದ್ರ ಅವರೊಂದಿಗೆ ಭೇಟಿ ನೀಡಿದ್ದು, ಪಕ್ಷದ ನಾಯಕತ್ವದಲ್ಲಿ ತಮ್ಮ ಭವಿಷ್ಯದ ಪಾತ್ರ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಭೇಟಿ ಮಹತ್ವ ಪಡೆದುಕೊಂಡಿದ್ದು, ಹಿರಿಯ ನಾಯಕ ಸಿದ್ದರಾಮಯ್ಯ ಅವರು ಈಗಾಗಲೇ ರಾಜ್ಯಸಭಾ ಸ್ಥಾನವನ್ನು ನಿರಾಕರಿಸಿ, ಕೇಂದ್ರದಲ್ಲಿ ಹುದ್ದೆ ಸ್ವೀಕರಿಸುವ ಬದಲು ಕರ್ನಾಟಕ ರಾಜಕಾರಣದಲ್ಲಿ ಸಕ್ರಿಯವಾಗಿಯೇ ಉಳಿಯಲು ಬಯಸಿದ್ದಾರೆ ಎಂದು ಹೇಳಿದ್ದಾರೆ.

ಜೆಡಿಎಸ್ ಪಕ್ಷವನ್ನು ತೊರೆದು 2006ರಲ್ಲಿ ಕಾಂಗ್ರೆಸ್‌ಗೆ ಸೇರಿದ ಬಳಿಕ ಕರ್ನಾಟಕದ ನಾಯಕತ್ವವನ್ನು ತಮ್ಮ ಮೇಲೆ ನಂಬಿಕೆ ಇಟ್ಟು ಒಪ್ಪಿಸಿದಕ್ಕಾಗಿ ಸೋನಿಯಾ ಗಾಂಧಿಗೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ನೂತನ ಸರ್ಕಾರದಲ್ಲಿ ತಮ್ಮ ಪುತ್ರ ಹಾಗೂ ನಿಷ್ಠಾವಂತರಿಗೆ ಸಚಿವ ಸ್ಥಾನಗಳು, ಅದರಲ್ಲೂ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಅವರು ಒತ್ತಾಯಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಮಲ್ಲಿಕಾರ್ಜುನ ಖರ್ಗೆ ಭೇಟಿ

ರಾಜಕೀಯ ಬದಲಾವಣೆ ಹಾಗೂ ಸರ್ಕಾರ ರಚನೆ ಕುರಿತು ಚರ್ಚಿಸಲು ಸಿದ್ದರಾಮಯ್ಯ ಅವರು ಬಳಿಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ರಾಹುಲ್ ಗಾಂಧಿ ಕುಟುಂಬದೊಂದಿಗೆ ನಡೆದ ಸಭೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಕೂಡ ಹಾಜರಿದ್ದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲಾ, ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರೊಂದಿಗೆ ಆತ್ಮೀಯವಾಗಿ ಸಂತೋಷವಾಗಿ ಮಾತುಕತೆ ನಡೆಸಿದ್ದು, ಹಲವು ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಿದರು.

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಬಳಿಕ, ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಆಗಮಿಸಿದರು.


ಇನ್ನೊಂದೆಡೆ, ರಾಜ್ಯಪಾಲ ಥಾವರಚಂದ್ ಗೆಹ್ಲೊಟ್ ಅವರು ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಮುಖ್ಯಮಂತ್ರಿ ಆಗುವ ನಿರೀಕ್ಷೆಯಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರ ರಚನೆ ಕುರಿತು ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಲಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಸಂಘಟನೆಯಲ್ಲಿ ಪುನಾರಚನೆ ಕುರಿತು ಪಕ್ಷದ ನಾಯಕತ್ವ ಚರ್ಚೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಮೇಲೆ ಶುಲ್ಕ ಘೋಷಿಸಿ ಕೆಲವೇ ಗಂಟೆಗಳಲ್ಲೇ ಟ್ರಂಪ್ ಯೂಟರ್ನ್‌; ಇರಾನ್‌ಗೆ 'ಭೀಕರ ದಾಳಿ' ಎಚ್ಚರಿಕೆ ನೀಡಿದ ನೆತನ್ಯಾಹು!

ಜಮೀರ್‌ಗೆ ಬಿಗ್ ರಿಲೀಫ್: ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಮನವಿ ತಿರಸ್ಕರಿಸಿದ ರಾಜ್ಯಪಾಲ

ಆದಿಚುಂಚನಗಿರಿ ಮಠಕ್ಕೆ ಸೇರಿದ 100 ಕೋಟಿ ರೂ ಮೌಲ್ಯದ ಭೂಮಿ ಕಬಳಿಸಲು ನಕಲಿ ದಾಖಲೆ ಸೃಷ್ಟಿ: 6 ಸರ್ಕಾರಿ ಅಧಿಕಾರಿಗಳು ಸೇರಿ 11 ಜನರ ಬಂಧನ!

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಅಮೆರಿಕ ಆರೋಪಪಟ್ಟಿ: ಗಡಿಪಾರು ಕುರಿತಂತೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ!

ಉಕ್ರೇನ್ ಮೇಲೆ ರಷ್ಯಾ ನ್ಯೂಕ್ಲಿಯರ್ ಬಾಂಬ್ ದಾಳಿ ನಡೆಸದಂತೆ ತಡೆದದ್ದು ಮೋದಿ: ಹೀಗೆ ಹೇಳಿದ್ದು ಯಾರು ಗೊತ್ತಾ?