ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ 
ರಾಜಕೀಯ

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ ಶಿವಕುಮಾರ್ ಆಯ್ಕೆ; ಶೀಘ್ರದಲ್ಲೇ ರಾಜ್ಯಪಾಲರ ಭೇಟಿ

ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಡಿಕೆ ಶಿವಕುಮಾರ್ ಅವರು ಸಂಜೆ ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಸಾಧ್ಯತೆ ಇದೆ.

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ನಂತರ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಿಎಲ್‌ಪಿ ಸಭೆಯಲ್ಲಿ, ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17 ವರ್ಷಗಳ ನಂತರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಸ್ತಾಪ ಮಂಡಿಸಿದರು. ಅದನ್ನು ಹಿರಿಯ ನಾಯಕ ಡಾ. ಜಿ. ಪರಮೇಶ್ವರ ಅನುಮೋದಿಸಿದರು. ಇದಕ್ಕೆ ಎಲ್ಲಾ 136 ಕಾಂಗ್ರೆಸ್ ಶಾಸಕರು ಒಪ್ಪಿಗೆ ಸೂಚಿಸಿದರು.

ಬಳಿಕ ಪಕ್ಷದ ಹೈಕಮಾಂಡ್ ಸೂಚಿಸುವ ನಾಯಕನನ್ನು ಒಪ್ಪಿಕೊಳ್ಳುವುದಾಗಿ ಎಲ್ಲಾ ಕಾಂಗ್ರೆಸ್ ಶಾಸಕರು ಹೇಳಿದ ನಂತರ ಒಂದು ಸಾಲಿನ ನಿರ್ಣಯವನ್ನು ಅಂಗೀಕರಿಸಲಾಯಿತು. ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸೂಚನೆಗಳನ್ನು ಅನುಸರಿಸಿ ಸಿಎಲ್ ಪಿ ನಾಯಕರಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿದರು. ಅದಕ್ಕೆ ಪರಮೇಶ್ವರ ಅವರು ಅನುಮೋದಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಮೇಲ್ವಿಚಾರಣೆಯಲ್ಲಿ ನಡೆದ ಸಭೆಯಲ್ಲಿ, ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಶಾಸಕಾಂಗ ಪಕ್ಷದ ಸಭೆಗೂ ಮೊದಲು ವಿಧಾನಸೌಧ ಕೊಠಡಿಯಲ್ಲಿ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿಯೇ ಡಿಕೆಶಿ ಆಗಮಿಸಿದ್ದರು. ಸಿಎಲ್‌ಪಿ ಸಭೆಗೆ ಹಾಜರಾದ ಎಲ್ಲಾ ಶಾಸಕರಿಗೆ ಅವರು ಕುಳಿತ ಸ್ಥಳಕ್ಕೇ ತೆರಳಿ ಡಿ.ಕೆ. ಶಿವಕುಮಾರ್​​ ಹಸ್ತಲಾಘವ‌ ಮಾಡಿದ್ದು ವಿಶೇಷವಾಗಿತ್ತು.

"ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮುಂದಿನ ನಾಯಕನನ್ನು ನೇಮಿಸುವ ನಿರ್ಧಾರವನ್ನು ಹೈಕಮಾಂಡ್‌ಗೆ ಬಿಡಲಾಗಿದೆ" ಎಂದು ಸಿಎಲ್‌ಪಿ ಸಭೆಯಿಂದ ಹೊರಬಂದ ನಂತರ ಸಿದ್ದರಾಮಯ್ಯ ಹೇಳಿದರು.

ರಾಜ್ಯಪಾಲರ ಭೇಟಿ

ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಡಿಕೆ ಶಿವಕುಮಾರ್ ಅವರು ಸಂಜೆ ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮುಂಬೈ ಕೋಸ್ಟಲ್ ರೋಡ್‌ನಲ್ಲಿ ಭೀಕರ ಅಪಘಾತ; 75 ಅಡಿ ಕೆಳಗೆ ಬಿದ್ದ BMW ಕಾರು, 3 ವಿದ್ಯಾರ್ಥಿಗಳ ಸಾವು! Video

ಮುಂಗಾರು ಹಿಂತೆಗೆತ ಆರಂಭ; ‘Arnab’ ಚಂಡಮಾರುತ ಭೀತಿ, ಈ ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ!

ಬೆಂಗಳೂರು ಎಕ್ಸ್‌ಪ್ರೆಸ್‌ಗೆ ಅಪ್ಪಳಿಸಿದ ಬೃಹತ್ ಬಂಡೆ: ಲೋಕೋ ಪೈಲಟ್‌ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ಮುಂಬೈ ಗಣೇಶೋತ್ಸವ ವೇಳೆ ದುರಂತ: ವಿದ್ಯುತ್ ತಗುಲಿ 8 ವರ್ಷದ ಬಾಲಕಿ ಸೇರಿ ಇಬ್ಬರ ಸಾವು!

‘ಮಹಿಳೆಯ ದೇಹವೇನು ಸಾರ್ವಜನಿಕ ಜಾಹಿರಾತು ಫಲಕವೇ?’; Katrina Kaif ಪರ ನಟಿ ಖುಷ್ಬೂ ಖಡಕ್ ಮಾತು!