ಸಿದ್ದರಾಮಯ್ಯ-ಡಿಕೆ ಶಿವಕುಮಾರ್  online desk
ರಾಜಕೀಯ

ಸಂಪುಟ ರಚನೆ ಕಸರತ್ತು: ನಿಯೋಜಿತ ಸಿಎಂ ಡಿ.ಕೆ ಶಿವಕುಮಾರ್, ಹಂಗಾಮಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ

ಸಿಎಲ್‌ಪಿ ನಾಯಕನಾಗಿ ಆಯ್ಕೆಯಾಗುತ್ತಿದ್ದಂತೆ ಸಾಲು ಸಾಲು ನಾಯಕರು ಸಚಿವ ಸ್ಥಾನಕ್ಕಾಗಿ ಒತ್ತಡ ಹಾಕುತ್ತಿದ್ದು, ಡಿ.ಕೆ ಶಿವಕುಮಾರ್ ಅವರು​​ ನಾಳೆಯೇ ದೆಹಲಿಗೆ ಹಾರಲಿದ್ದಾರೆ.

ನವದೆಹಲಿ: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಸಂಪುಟ ರಚನೆಯ ಕಸರತ್ತು ಆರಂಭಿಸಿದ್ದು, ಸೋಮವಾರ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರೊಂದಿಗೆ ಸಭೆ ನಡೆಸಿ, ತಮ್ಮ ಸಂಪುಟ ಸೇರುವ ಶಾಸಕರ ಬಗ್ಗೆ ಮತ್ತು ರಾಜ್ಯದ ಇತರ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಇಂದು ಬೆಳಗ್ಗೆ ಜೂನ್ 3 ರಂದು ತಮ್ಮೊಂದಿಗೆ ಎಷ್ಟು ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ಹೈಕಮಾಂಡ್ ನಿರ್ಧರಿಸಿದ್ದು ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಸಿಎಲ್‌ಪಿ ನಾಯಕನಾಗಿ ಆಯ್ಕೆಯಾಗುತ್ತಿದ್ದಂತೆ ಸಾಲು ಸಾಲು ನಾಯಕರು ಸಚಿವ ಸ್ಥಾನಕ್ಕಾಗಿ ಒತ್ತಡ ಹಾಕುತ್ತಿದ್ದು, ಡಿಕೆ ಶಿವಕುಮಾರ್ ಅವರು​​ ನಾಳೆಯೇ ದೆಹಲಿಗೆ ಹಾರಲಿದ್ದಾರೆ.

ಪ್ರಮಾಣ ವಚನ ಕಾರ್ಯಕ್ರಮ ಹಾಗೂ ಸಚಿವರ ಹೆಸರು ಫೈನಲ್ ಮಾಡಲು ಹೈಕಮಾಂಡ್ ಭೇಟಿ ಮಾಡಲಿದ್ದಾರೆ. ಸಚಿವ ಸಂಪುಟ ಕುರಿತು ಚರ್ಚಿಸಲಿರುವ ಡಿಕೆ ಶಿವಕುಮಾರ್​ ತಮ್ಮ ಜೊತೆ ಎಷ್ಟು ಸಚಿವರು ಪ್ರಮಾಣ ವಚನ ಸ್ವೀಕರಿಸಬೇಕು. ಮುಂದಿನ ಪ್ರಕ್ರಿಯೆ ಸೇರಿ ಹಲವು ವಿಚಾರದ ಬಗ್ಗೆ ಚರ್ಚಿಸಲಿದ್ದಾರೆ.

ಇನ್ನು ಹಂಗಾಮಿ ಸಿಎಂ ಸಿದ್ದರಾಮಯ್ಯ ಅವರು ಸಹ ನಾಳೆ ದೆಹಲಿಗೆ ತೆರಳಲು ಸಜ್ಜಾಗಿದ್ದಾರೆ. ನಾಳೆ ಬೆಳಗ್ಗೆ 9.30ಕ್ಕೆ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದಾರೆ.

ತಮ್ಮ ಆಪ್ತರಿಗೆ ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿರುವ ಸಿದ್ದರಾಮಯ್ಯ ಅವರು, ಈ ಸಂಬಂಧ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!