ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ Online Desk
ರಾಜಕೀಯ

ಕಾಂಗ್ರೆಸ್ ಆಕ್ರೋಶಕ್ಕೆ ಮಣಿದ ವಿಜಯೇಂದ್ರ: ಪೋಸ್ಟರ್ ಸಮರ ಬೆನ್ನಲ್ಲೇ 'ಈ ನನ್ನ ಮಕ್ಕಳು' ಹೇಳಿಕೆಗೆ ಕ್ಷಮೆಯಾಚಿಸಿದ ಬಿಜೆಪಿ ರಾಜ್ಯಾಧ್ಯಕ್ಷ

ಕಾಂಗ್ರೆಸ್ ಪಕ್ಷದ ತೀವ್ರ ಆಕ್ರೋಶ ಮತ್ತು ಪ್ರತಿಭಟನೆಯ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಾವು ನೀಡಿದ್ದ ‘ಈ ನನ್ನ ಮಕ್ಕಳು ಕಾಂಗ್ರೆಸ್‌ನವರು ಇದ್ದಾರಲ್ಲಾ...’ ಎಂಬ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿ ಕ್ಷಮೆಯಾಚಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸುವಾಗ, ಏಕವಚನದಲ್ಲಿ "ಈ ನನ್ನ ಮಕ್ಕಳು ಕಾಂಗ್ರೆಸ್‌ನವರು ಇದ್ದಾರಲ್ಲಾ..." ಎಂದು ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಇದರೊಂದಿಗೆ, ಕಾಂಗ್ರೆಸ್ ಕಾರ್ಯಕರ್ತರು ಕೂಡ ವಿಜಯೇಂದ್ರ ವಿರುದ್ಧ ಪೋಸ್ಟರ್ ಸಮರ ಪ್ರಾರಂಭಿಸಿದ್ದರು. ಈ ಬೆನ್ನಲ್ಲೇ, ನಾನು ಯಾವುದೇ ಉದ್ದೇಶಪೂರ್ವಕವಾಗಿ ಆ ಪದಗಳನ್ನು ಬಳಸಲಿಲ್ಲ ಎಂದು ಸ್ಪಷ್ಟನೆ ನೀಡಿರುವ ವಿಜಯೇಂದ್ರ, ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿ ಕ್ಷಮೆಯಾಚಿಸಿದ್ದಾರೆ.

BYV ಹೇಳಿದ್ದೇನು?

ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳ ಕಾಯ್ದೆಯನ್ನು ಹೈಕೋರ್ಟ್ ರದ್ದುಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, "ಈ ನನ್ ಮಕ್ಕಳು ಕಾಂಗ್ರೆಸ್ ನವರು ಇದ್ದಾರಲ್ಲಾ..." ಎಂದು ಏಕವಚನದಲ್ಲೇ ಲೇವಡಿ ಮಾಡಿದ್ದರು. ಅವರ ಈ ಆಕ್ರೋಶಭರಿತ ಹೇಳಿಕೆಯ ವಿಡಿಯೋ ಮತ್ತು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಈ ಬೆನ್ನಲ್ಲೇ, ವಿಜಯೇಂದ್ರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್, "ವಿಜಯೇಂದ್ರ ಅವರು ಮುಂದಿನ 3 ದಿನಗಳ ಒಳಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು" ಎಂದು ಆಗ್ರಹಿಸಿದ್ದಾರೆ.

ಮುಂದುವರೆದು ವಿವಾದ ಜೋರಾಗುತ್ತಿದ್ದಂತೆ, ತಾವು ನೀಡಿದ್ದ ಈ ನನ್ನ ಮಕ್ಕಳು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿ ಕ್ಷಮೆಯಾಚಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, "ನಾನು ದಾವಣಗೆರೆಯಲ್ಲಿ ಮಾತನಾಡುವಾಗ ಕೆಲವು ಪದಗಳನ್ನು ಬಳಸಿರುವುದು ನಿಜ, ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಕಾಂಗ್ರೆಸ್‌ನವರಿಗೆ ನನ್ನ ಮಾತಿನಿಂದ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ಆದರೆ ನಾನು ಉದ್ದೇಶಪೂರ್ವಕವಾಗಿ ಅಥವಾ ಯಾರನ್ನಾದರೂ ಅವಮಾನಿಸಬೇಕು ಎಂಬ ಆಲೋಚನೆಯಿಂದ ಆ ಪದಗಳನ್ನು ಬಳಸಿಲ್ಲ. ಮೀಸಲಾತಿ, ಕೆಪಿಎಸ್‌ಸಿ ವಿಚಾರವಾಗಿ ಮಾತನಾಡುವಾಗ ಆಡುಭಾಷೆಯಲ್ಲಿ ಆ ಶಬ್ದ ಬಂದಿದೆಯೇ ವಿನಃ ಬೇರೆ ಯಾವುದೇ ದುರುದ್ದೇಶ ಇರಲಿಲ್ಲ" ಎಂದು ಹೇಳಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಬಿ.ಎಸ್. ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ನಿವಾಸದ ಸುತ್ತಮುತ್ತ “RTGS ಚೋರ್ ಬಿ.ವೈ. ವಿಜಯೇಂದ್ರ” ಹಾಗೂ "ನೀನು ಹೇಡಿ, RTGS ಕೇಡಿ" ಎಂದು ಬರೆದ ಪೋಸ್ಟರ್‌ಗಳನ್ನು ಅಂಟಿಸಿ ತೀವ್ರ ಆಕ್ರೋಶ ಹೊರಹಾಕಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

RTGS ಚೋರ್ ಬಿವೈ ವಿಜಯೇಂದ್ರ: ಈ ನನ್ ಮಕ್ಕಳು ಎಂದಿದ್ದಕ್ಕೆ BYV ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪೋಸ್ಟರ್ ಸಮರ

ಆಂಧ್ರ ಕರಾವಳಿಗೆ ಅಪ್ಪಳಿಸಿದ ಚಂಡಮಾರುತ ‘ಮುರಸು’; ಧರೆಗುರುಳಿದ ಸಾವಿರಾರು ಮರಗಳು, ಮೀನುಗಾರಿಕೆ ದೋಣಿಗಳಿಗೆ ಹಾನಿ – ಭಾರಿ ಅನಾಹುತ; Video

'ಇನ್ಯಾವತ್ತೂ ಪ್ರತಿಭಟನೆಯಲ್ಲಿ ಭಾಗಿಯಾಗಲ್ಲ'; ಕೊನೆಗೂ ಕ್ಷಮೆ ಯಾಚಿಸಿದ ನಟ Imran Khan, ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ!

Iran ಮೇಲೆ ಮತ್ತೆ ಮುಗಿಬಿದ್ದ ಅಮೆರಿಕ; Qeshm ದ್ವೀಪದ ಮೇಲೆ ವೈಮಾನಿಕ ದಾಳಿ, ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಯುದ್ಧದ ಆತಂಕ..!

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ HDK ಕೈವಾಡ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಸ್ಕೆಚ್: ಸಚಿವ ಕೃಷ್ಣ ಬೈರೇಗೌಡ ಗಂಭೀರ ಆರೋಪ..!