ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ  
ರಾಜಕೀಯ

2028ರ ಚುನಾವಣೆಗೆ BJP ರಣತಂತ್ರ; ವಿಜಯೇಂದ್ರ ನೇತೃತ್ವದಲ್ಲಿ ಒಗ್ಗಟ್ಟಿನ ಹೋರಾಟಕ್ಕೆ ಹರೀಶ್ ದ್ವಿವೇದಿ ಕರೆ

ಕಾಂಗ್ರೆಸ್ ಸರ್ಕಾರ ಸಾರ್ವಜನಿಕ ಹಿತಾಸಕ್ತಿಯನ್ನು ಕಡೆಗಣಿಸಿದ್ದು, ತನ್ನ ನಾಯಕರ ಏಳಿಗೆ ಮತ್ತು ಗಾಂಧಿ ಕುಟುಂಬದ ಹಿತಾಸಕ್ತಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ.

ಬೆಂಗಳೂರು: 2028ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚಿಸುವ ಸಂಕಲ್ಪದೊಂದಿಗೆ ಪಕ್ಷದ ನಾಯಕರು ಒಗ್ಗಟ್ಟಾಗಿ ಕೆಲಸ ಮಾಡಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ಹರೀಶ್ ದ್ವಿವೇದಿ ಹೇಳಿದ್ದಾರೆ.

ಕಳೆದ ಸುಮಾರು ಮೂರೂವರೆ ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಸಾಮಾನ್ಯ ಜನರ ದೈನಂದಿನ ಸಮಸ್ಯೆಗಳು ಸೇರಿದಂತೆ ಎಲ್ಲ ವಿಚಾರಗಳನ್ನೂ ನಿರ್ಲಕ್ಷಿಸಿದೆ. ಕಾಂಗ್ರೆಸ್ ನಾಯಕರು ಲೂಟಿ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಸಾರ್ವಜನಿಕ ಹಿತಾಸಕ್ತಿಯನ್ನು ಕಡೆಗಣಿಸಿದ್ದು, ತನ್ನ ನಾಯಕರ ಏಳಿಗೆ ಮತ್ತು ಗಾಂಧಿ ಕುಟುಂಬದ ಹಿತಾಸಕ್ತಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಎಲ್ಲ ವಿಚಾರಗಳನ್ನು ಬಿಜೆಪಿ ಜನರ ಮುಂದಿಡಲಿದೆ ಎಂದು ಹೇಳಿದರು. ಇದೇ ವೇಳೆ ಹಾಲು ಮತ್ತು ಮೊಸರಿನ ಬೆಲೆಗಳಲ್ಲಿ ಭಾರಿ ಏರಿಕೆ ಮಾಡಿರುವುದಕ್ಕೂ ಅವರು ಟೀಕೆ ವ್ಯಕ್ತಪಡಿಸಿದರು.

ಕರ್ನಾಟಕದ ಪಕ್ಷದ ಉಸ್ತುವಾರಿಯಾಗಿ ನೇಮಕಗೊಂಡ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡಿರುವುದಾಗಿ ದ್ವಿವೇದಿ ತಿಳಿಸಿದರು.

ಸೋಮವಾರ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ರಾಜ್ಯ ಪದಾಧಿಕಾರಿಗಳ ಸಭೆ ಹಾಗೂ ಕೋರ್ ಕಮಿಟಿ ಸಭೆ ನಡೆಸಿದ್ದೇನೆ. ಮಂಗಳವಾರ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾರ್ಗದರ್ಶನ ಪಡೆದಿದ್ದೇನೆ ಎಂದು ಹೇಳಿದರು.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ಮಾತ್ರ ಈ ಪ್ರಕ್ರಿಯೆ ನಡೆಯುತ್ತಿಲ್ಲ. ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ಅವರ ಕಾಲದಿಂದಲೂ ಕಾಲಕಾಲಕ್ಕೆ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಯುತ್ತ ಬಂದಿದೆ ಎಂದರು.

ಚುನಾವಣೆಯಲ್ಲಿ ಸೋತಾಗಲೆಲ್ಲ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳುವ ಬದಲು ಚುನಾವಣಾ ಆಯೋಗ, ಇವಿಎಂಗಳು ಹಾಗೂ ಸುಪ್ರೀಂ ಕೋರ್ಟ್ ವಿರುದ್ಧ ಆರೋಪ ಮಾಡುತ್ತದೆ. ಸಾಂವಿಧಾನಿಕ ಸಂಸ್ಥೆಗಳನ್ನು ಕಾಂಗ್ರೆಸ್ ಗೌರವಿಸುತ್ತಿಲ್ಲ ಎಂದು ದೂರಿದರು.

ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇಂತಹ ನಿರ್ಧಾರಗಳನ್ನು ಪಕ್ಷದ ವರಿಷ್ಠರು ತೆಗೆದುಕೊಳ್ಳುತ್ತಾರೆ. ಸದ್ಯಕ್ಕೆ ಮೈತ್ರಿ ಉತ್ತಮವಾಗಿ ಮುಂದುವರಿಯುತ್ತಿದೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಪಕ್ಷದ ನಾಯಕತ್ವದ ಕುರಿತು ಮಾತನಾಡಿದ ಅವರು, ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ಯುವ ನಾಯಕನ ಮಾರ್ಗದರ್ಶನದಲ್ಲಿ ಪಕ್ಷದ ಸಂಘಟನೆ ಮುನ್ನಡೆಯುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಮೆರಿಕ ಮಧ್ಯಂತರ ಚುನಾವಣೆ: ಡೆಮೋಕ್ರಾಟ್ ಪಕ್ಷ ಮುನ್ನಡೆ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಹಿನ್ನಡೆ

ಇಸ್ರೇಲ್‌ಗೆ ವಾರ್ಷಿಕ 3.8 ಶತಕೋಟಿ ಡಾಲರ್ ಭದ್ರತಾ ನೆರವು ಸ್ಥಗಿತ: ಅಮೆರಿಕ ಮಧ್ಯಂತರ ಚುನಾವಣೆ ನಡುವೆ ಟ್ರಂಪ್ ಘೋಷಣೆ

ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ 23 ಭಾರತೀಯರ ಸಾವು: MEA

'2 ವಿಮಾನ, 6 ನಿವೇಶನ': EDಯಿಂದ ಅನಿಲ್ ಅಂಬಾನಿ ಸಮೂಹದ ₹510 ಕೋಟಿ ರೂ ಮೌಲ್ಯದ ಆಸ್ತಿ ವಶಕ್ಕೆ!

ಪ್ರಧಾನಿ ಮೋದಿ ಮನೆ ಸಮೀಪದ ಮಸೀದಿ ನಂತರ ಮತ್ತೊಂದು ಮಸೀದಿ ತೆರವಿಗೆ ಕೇಂದ್ರ ನಿರ್ಧಾರ; ಹೈಕೋರ್ಟ್‌ಗೆ ಮಾಹಿತಿ!