ಡಿ ಕೆ ಶಿವಕುಮಾರ್  
ರಾಜಕೀಯ

ಹಿರಿಯೂರು ಉಪ ಚುನಾವಣೆ: ಅಧಿಸೂಚನೆಗೂ ಮುನ್ನ ಕಾಂಗ್ರೆಸ್ ಸಿದ್ಧತೆ ಚುರುಕು

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ, ಉಪ ಚುನಾವಣೆಯ ಸಿದ್ಧತೆಗಳ ಕುರಿತು ಚರ್ಚೆ ನಡೆಸಿದರು. ಹಿರಿಯ ಕಾಂಗ್ರೆಸ್ ನಾಯಕ ಎನ್. ಚಂದ್ರಪ್ಪ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬೆಂಗಳೂರು: ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದ್ದು, ಕ್ಷೇತ್ರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಪಕ್ಷದ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಕ್ಷದ ನಾಯಕರೊಂದಿಗೆ ಸಮಾಲೋಚನೆ ತೀವ್ರಗೊಳಿಸಿದ್ದಾರೆ.

ನಿನ್ನೆ ಬುಧವಾರ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ, ಉಪ ಚುನಾವಣೆಯ ಸಿದ್ಧತೆಗಳ ಕುರಿತು ಚರ್ಚೆ ನಡೆಸಿದರು. ಹಿರಿಯ ಕಾಂಗ್ರೆಸ್ ನಾಯಕ ಎನ್. ಚಂದ್ರಪ್ಪ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ರಘುಮೂರ್ತಿ ಅವರು ಮುಖ್ಯಮಂತ್ರಿಗಳಿಗೆ ದೀಪಾವಳಿ ಶುಭಾಶಯಗಳನ್ನು ತಿಳಿಸಿ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆತ್ಮಕಥೆಯ ಪ್ರತಿಯನ್ನು ಉಡುಗೊರೆಯಾಗಿ ನೀಡಿದರು.

ಮೂಲಗಳ ಪ್ರಕಾರ, ಕ್ಷೇತ್ರದಲ್ಲಿ ಪಕ್ಷದ ಸಂಘಟನಾತ್ಮಕ ಸಿದ್ಧತೆ ಹಾಗೂ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರ ನಡುವೆ ಒಗ್ಗಟ್ಟು ಕಾಯ್ದುಕೊಳ್ಳುವ ಅಗತ್ಯ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು. ಅದರಲ್ಲೂ ಎನ್‌ಡಿಎ ಮೈತ್ರಿಕೂಟ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ವಿಚಾರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.

ಸಮನ್ವಯದೊಂದಿಗೆ ಚುನಾವಣಾ ಪ್ರಚಾರ ನಡೆಸುವ ಹಾಗೂ ತಳಮಟ್ಟದಲ್ಲಿ ಜನರನ್ನು ತಲುಪುವ ಕಾರ್ಯವನ್ನು ಮತ್ತಷ್ಟು ತೀವ್ರಗೊಳಿಸುವ ಅಗತ್ಯವನ್ನು ಡಿ ಕೆ ಶಿವಕುಮಾರ್ ಒತ್ತಿಹೇಳಿದ್ದಾರೆ ಎನ್ನಲಾಗಿದೆ. ಅಲ್ಲದೆ, ರಾಜ್ಯ ಸರ್ಕಾರದ ಸಾಧನೆಗಳು ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಜನರಿಗೆ ಮನವರಿಕೆ ಮಾಡಿಕೊಡುವಂತೆ ಪಕ್ಷದ ನಾಯಕರಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಹಿರಿಯೂರು ಕ್ಷೇತ್ರದ ಹಾಲಿ ಶಾಸಕ ಹಾಗೂ ಸಚಿವ ಡಿ. ಸುಧಾಕರ್ ಅವರ ನಿಧನದಿಂದ ಈ ಕ್ಷೇತ್ರ ತೆರವಾಗಿದ್ದು, ಉಪ ಚುನಾವಣೆ ಅನಿವಾರ್ಯವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಚೀನಾ Spy ಮೋಹಕ್ಕೆ ಬಿದ್ದರಾ ಟೆಕ್ ದಿಗ್ಗಜ..? Nvidia CEO ಕುರ್ಚಿಗೆ ಕುತ್ತು, Jensen Huang ತಲೆದಂಡಕ್ಕೆ ಮುಹೂರ್ತ ಫಿಕ್ಸ್..?

ಪ್ರೀತಿ, ನಷ್ಟ, ನೋವು, ತ್ಯಾಗದ ಅಪರೂಪದ ಕಥನ; ಪ್ರತಿಯೊಬ್ಬ ಭಾರತೀಯರ ಓದಲೇಬೇಕಾದ ಪುಸ್ತಕ': ಸೋನಿಯಾ ಗಾಂಧಿ ಆತ್ಮಕಥನಕ್ಕೆ ಕಾಂಗ್ರೆಸ್ ನಾಯಕರ ಮೆಚ್ಚುಗೆ..!

'ಕೈ' ಕಾರ್ಯಕರ್ತರಿಗೆ ಸರ್ಕಾರ ಭರ್ಜರಿ ಗಿಫ್ಟ್; 428 ಮಂದಿಗೆ ನಿಗಮ-ಮಂಡಳಿಗಳಲ್ಲಿ ಸ್ಥಾನ..!

ಭಾರತದ ವೀಸಾ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ: ವಿದೇಶಿ ಪ್ರಯಾಣಿಕರ ಪ್ರವೇಶ ಸುಲಭ, ವಿಭಾಗಗಳು 13ರಿಂದ 9ಕ್ಕೆ ಇಳಿಕೆ!

ಕಾಶ್ಮೀರದಲ್ಲಿ ಉಗ್ರ ದಾಳಿ ಬೆನ್ನಲ್ಲೇ ಕಿಶ್ತ್ವಾರ್‌ನಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ನಾಪತ್ತೆ, ಶೋಧ ಕಾರ್ಯಾಚರಣೆ!