ರಾಹುಲ್ ಗಾಂಧಿ, ಡಿ ಕೆ ಶಿವಕುಮಾರ್, ಬಿ ವೈ ವಿಜಯೇಂದ್ರ  
ರಾಜಕೀಯ

‘ನಾಲ್ಕೇ ತಿಂಗಳಲ್ಲಿ ಡಿ ಕೆ ಶಿವಕುಮಾರ್ ಸಿಎಂ ಕುರ್ಚಿ ಅಲುಗಾಡುತ್ತಿದೆ, ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ’: ಬಿ ವೈ ವಿಜಯೇಂದ್ರ

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ನಾಲ್ಕು ತಿಂಗಳೂ ಕಳೆದಿಲ್ಲ. ಆಗಲೇ ಡಿ ಕೆ ಶಿವಕುಮಾರ್ ಅವರ ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳದಿದ್ದರೆ ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿಯ ಆಯ್ಕೆಯ ಸಾಧ್ಯತೆ ಎದುರಾಗಲಿದೆ ಎಂದು ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ನಾಲ್ಕು ತಿಂಗಳೂ ಕಳೆದಿಲ್ಲ. ಆಗಲೇ ಡಿ ಕೆ ಶಿವಕುಮಾರ್ ಅವರ ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿದೆ. ದೆಹಲಿ ಭೇಟಿಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು, ಏನೇ ಮಾಡಿಯಾದರೂ ಸರಿ, ಸಿದ್ದರಾಮಯ್ಯ ಅವರ ಕೈಕಾಲು ಹಿಡಿದಾದರೂ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

ದೆಹಲಿಯಿಂದ ಹಿಂದಿರುಗಿದ ಬಳಿಕ ಡಿ ಕೆ ಶಿವಕುಮಾರ್ ನೇರವಾಗಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿದರು. ಸಿದ್ದರಾಮಯ್ಯ ಅವರೊಂದಿಗಿನ ತಮ್ಮ ಸಂಬಂಧ ಉತ್ತಮವಾಗಿದೆ ಎಂದು ಅವರು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಈ ಸಂಬಂಧ ಶೀಘ್ರದಲ್ಲೇ ಪರೀಕ್ಷೆಗೆ ಒಳಗಾಗಲಿದೆ. ಶಾಸಕರಿಗೆ ಯಾವುದೇ ಅನುದಾನ ಸಿಗದ ಕಾರಣ ಕಾಂಗ್ರೆಸ್‌ನಲ್ಲೇ ಮುಖ್ಯಮಂತ್ರಿಯ ಬಗ್ಗೆ ವಿಶ್ವಾಸವಿಲ್ಲ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

ಡಿ ಕೆ ಶಿವಕುಮಾರ್ ಅವರು ಹಲವು ಬಾರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕವೂ, ಒಂದೇ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಬ್ಬರೂ ಪ್ರತ್ಯೇಕವಾಗಿ ಮೈಸೂರಿಗೆ ಪ್ರಯಾಣಿಸಿದ್ದೇಕೆ, ಡಿ ಕೆ ಶಿವಕುಮಾರ್ ವಿಶೇಷ ವಿಮಾನದಲ್ಲಿ ತೆರಳಿದರೆ, ಸಿದ್ದರಾಮಯ್ಯ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸಿದರು. ಇಬ್ಬರ ನಡುವಿನ ಬಿರುಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಚೀನಾ Spy ಮೋಹಕ್ಕೆ ಬಿದ್ದರಾ ಟೆಕ್ ದಿಗ್ಗಜ..? Nvidia CEO ಕುರ್ಚಿಗೆ ಕುತ್ತು, Jensen Huang ತಲೆದಂಡಕ್ಕೆ ಮುಹೂರ್ತ ಫಿಕ್ಸ್..?

ಪ್ರೀತಿ, ನಷ್ಟ, ನೋವು, ತ್ಯಾಗದ ಅಪರೂಪದ ಕಥನ; ಪ್ರತಿಯೊಬ್ಬ ಭಾರತೀಯರ ಓದಲೇಬೇಕಾದ ಪುಸ್ತಕ': ಸೋನಿಯಾ ಗಾಂಧಿ ಆತ್ಮಕಥನಕ್ಕೆ ಕಾಂಗ್ರೆಸ್ ನಾಯಕರ ಮೆಚ್ಚುಗೆ..!

'ಕೈ' ಕಾರ್ಯಕರ್ತರಿಗೆ ಸರ್ಕಾರ ಭರ್ಜರಿ ಗಿಫ್ಟ್; 428 ಮಂದಿಗೆ ನಿಗಮ-ಮಂಡಳಿಗಳಲ್ಲಿ ಸ್ಥಾನ..!

ಭಾರತದ ವೀಸಾ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ: ವಿದೇಶಿ ಪ್ರಯಾಣಿಕರ ಪ್ರವೇಶ ಸುಲಭ, ವಿಭಾಗಗಳು 13ರಿಂದ 9ಕ್ಕೆ ಇಳಿಕೆ!

ಕಾಶ್ಮೀರದಲ್ಲಿ ಉಗ್ರ ದಾಳಿ ಬೆನ್ನಲ್ಲೇ ಕಿಶ್ತ್ವಾರ್‌ನಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ನಾಪತ್ತೆ, ಶೋಧ ಕಾರ್ಯಾಚರಣೆ!