ಡಿ ಕೆ ಶಿವಕುಮಾರ್  
ರಾಜಕೀಯ

‘ನಾವೆಲ್ಲರೂ ಸ್ನೇಹಿತರು’: ತಮಿಳುನಾಡು ಸಿಎಂ ವಿಜಯ್ ಭೇಟಿ ವೇಳೆ ಆತ್ಮೀಯ ಮಾತುಕತೆ ವಿಡಿಯೊ ವೈರಲ್; ಸಿಎಂ ಡಿಕೆಶಿ ಹೇಳಿದ್ದೇನು? Video

ದೆಹಲಿಯಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದ ಸಂದರ್ಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರೊಂದಿಗಿನ ಆತ್ಮೀಯ ಒಡನಾಟದ ವಿಡಿಯೋಗಳು ವೈರಲ್ ಆದ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಾವು ವಿಜಯ್ ಸ್ನೇಹಿತರು ಎಂದು ಹೇಳಿದ್ದಾರೆ.

ಮೇಕೆದಾಟು ಯೋಜನೆ, ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳು ನಾಡು ಮಧ್ಯೆ ರಾಜಕೀಯ ಸಂಘರ್ಷ ಮುಂದುವರಿದಿರುವ ಮಧ್ಯೆ, ಮೊನ್ನೆ ದೆಹಲಿಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ಬರೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದ್ದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರೊಂದಿಗಿನ ವೈರಲ್ ವಿಡಿಯೋ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

“ನಾವು ಸ್ನೇಹಿತರು. ನಾವೆಲ್ಲರೂ ಭಾರತೀಯರು. ಅವರಿಗೆ ಅವರದೇ ಆದ ರಾಜಕೀಯ ಸಮಸ್ಯೆಗಳಿವೆ. ಎಐಎಡಿಎಂಕೆ ಅಥವಾ ಡಿಎಂಕೆ ಪಕ್ಷದವರು ಸುಪ್ರೀಂ ಕೋರ್ಟ್ ಆದೇಶವನ್ನು ಗಮನಿಸಿದ್ದಾರೆಯೇ? ಕಾವೇರಿ ನದಿಯ 177 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡಲು ಕರ್ನಾಟಕ ಬದ್ಧವಾಗಿದೆ. ಆ ಜವಾಬ್ದಾರಿಯನ್ನು ನಾವು ಈಡೇರಿಸುತ್ತೇವೆ. ಮೇಕೆದಾಟು ಸಮತೋಲನ ಜಲಾಶಯದಿಂದ ಮಂಡ್ಯ, ಮೈಸೂರು, ಹಾಸನ, ಬೆಂಗಳೂರು ಹಾಗೂ ತಮಿಳುನಾಡಿಗೂ ಪ್ರಯೋಜನವಾಗಲಿದೆ. ಸಮತೋಲನ ಜಲಾಶಯ ಎಂದರೇನು ಎಂಬುದನ್ನು ಅವರು ಅರ್ಥಮಾಡಿಕೊಳ್ಳಬೇಕು ಎಂದು ಡಿ ಕೆ ಶಿವಕುಮಾರ್ ಸುದ್ದಿಗಾರರ ಜೊತೆ ಮಾತನಾಡುತ್ತಾ ಹೇಳಿದರು.

ದೆಹಲಿಯಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದ ಸಂದರ್ಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರೊಂದಿಗಿನ ಆತ್ಮೀಯ ಒಡನಾಟದ ವಿಡಿಯೋಗಳು ವೈರಲ್ ಆದ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಾವು ವಿಜಯ್ ಸ್ನೇಹಿತರು ಎಂದು ಹೇಳಿದ್ದಾರೆ.

ನಾವೆಲ್ಲರೂ ಸ್ನೇಹಿತರು. ನಾವೆಲ್ಲರೂ ಭಾರತದವರು. ನಾವು ಸಾರ್ವಜನಿಕ ಜೀವನದಲ್ಲಿದ್ದೇವೆ. ಅವರೂ (ತಮಿಳುನಾಡು) ಅಣೆಕಟ್ಟುಗಳನ್ನು ನಿರ್ಮಿಸುತ್ತಿದ್ದಾರೆ. ನಾವು ಯಾರಿಗೂ ತೊಂದರೆ ನೀಡುತ್ತಿಲ್ಲ ಎಂದು ಶಿವಕುಮಾರ್ ಹೇಳಿದರು.

ಆದರೆ, ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ತಮಿಳುನಾಡಿನ ರಾಜಕೀಯ ಪಕ್ಷಗಳು ವ್ಯಕ್ತಪಡಿಸುತ್ತಿರುವ ವಿರೋಧದ ಬಗ್ಗೆ ಪ್ರಶ್ನಿಸಿದ ಅವರು, ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಆ ಪಕ್ಷಗಳು ಗಮನಿಸಿವೆಯೇ ಎಂದು ಕೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lateef Bhat ಎನ್‌ಕೌಂಟರ್‌; ಎ ಕೆಟಗರಿ ಉಗ್ರ, ಮರಗೆಲಸ ಮಾಡುತ್ತಿದ್ದವ ಉಗ್ರನಾಗಿದ್ದೇ ರೋಚಕ; LeT ಸೇರಿದ ಒಂದೇ ವರ್ಷಕ್ಕೆ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ!

Kulgam Encounter: LeT ಸಂಘಟನೆಯ ಪ್ರಮುಖ ಉಗ್ರ ಲತೀಫ್ ಭಟ್ ಹೊಡೆದುರುಳಿಸಿದ ಭಾರತೀಯ ಸೇನೆ! ಮಸೀದಿಯಲ್ಲಿ ಅಡಗಿದ್ದ ಭಯೋತ್ಪಾದಕ!

'ಕೆಲವು ಲೆಕ್ಕಾಚಾರಗಳನ್ನು ತಣ್ಣಗೇ ಮುಗಿಸಬೇಕು': ಉಗ್ರ ಲತೀಫ್ ಭಟ್ ಎನ್ಕೌಂಟರ್ ಬೆನ್ನಲ್ಲೇ CRPF ಮುಖ್ಯಸ್ಥರ ಪೋಸ್ಟ್ ವೈರಲ್!

RCB ಅಲ್ಲ, IPL ನಿಂದಲೇ ಜೇಕಬ್ ಬೆಥೆಲ್ ಔಟ್‌; ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಸಜ್ಜು

ಗಾಳಿ ಮಾತಲ್ಲ, ಗಾಳಿಯದ್ದೇ ಮಾತು; ಟೀಂ ಇಂಡಿಯಾಗೆ ಆಟಗಾರರಲ್ಲ.. ವಾಯುದೇವನ ತಲೆನೋವು, ಗಿಲ್ ಮಹತ್ವದ ಎಚ್ಚರಿಕೆ!