ಎಚ್ ಡಿ ಕುಮಾರಸ್ವಾಮಿ, ಹೆಚ್ ಸಿ ಬಾಲಕೃಷ್ಣ 
ರಾಜಕೀಯ

ನಮ್ಮ ಹಳೇ ಬಾಸ್​​ ಭಸ್ಮಾಸುರನಂತೆ, NDA ಕಥೆ ಏನಾಗುತ್ತೋ: ಮತ್ತೆ ಎಚ್​​ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಬಾಲಕೃಷ್ಣ ವಾಗ್ದಾಳಿ

ಸಚಿವ ಹೆಚ್ ಸಿ ಬಾಲಕೃಷ್ಣ ಅವರು ಮತ್ತೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಹಳೇ ಬಾಸ್​ ಎಚ್ ಡಿ ಕುಮಾರಸ್ವಾಮಿ ಭಸ್ಮಾಸುರ ಇದ್ದಂತೆ, ಅವರು ಎಲ್ಲಿ ಹೋಗುತ್ತಾರೆ. ಅಲ್ಲಿ ಅವರ ತಲೆಯ ಮೇಲೆ ಕೈ ಇಡುತ್ತಾರೆ ಎಂದು ಬಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

ರಾಮನಗರ: ಸಚಿವ ಹೆಚ್ ಸಿ ಬಾಲಕೃಷ್ಣ ಅವರು ಮತ್ತೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಹಳೇ ಬಾಸ್​ ಎಚ್ ಡಿ ಕುಮಾರಸ್ವಾಮಿ ಭಸ್ಮಾಸುರ ಇದ್ದಂತೆ, ಅವರು ಎಲ್ಲಿ ಹೋಗುತ್ತಾರೆ. ಅಲ್ಲಿ ಅವರ ತಲೆಯ ಮೇಲೆ ಕೈ ಇಡುತ್ತಾರೆ ಎಂದು ಬಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ NDA ಸರ್ಕಾರ ಬರಲಿದೆ ಎಂದು ಕುಮಾರಸ್ವಾಮಿ ಹೇಳಿದ್ದರು. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಬಾಲಕೃಷ್ಣ, ನಾವು ನಮ್ಮ ಸರ್ಕಾರದ ಬರಲಿದೆ ಎಂದು ಹೇಳುತ್ತೇವೆ. ಏನೇ ಆಗಿದ್ದರೂ ಅಂತಿಮವಾಗಿ ಜನರು ತೀರ್ಪು ಕೊಡುತ್ತಾರೆ. ಚುನಾವಣೆಗೆ ಇನ್ನೂ ಒಂದೂವರೆ ವರ್ಷ ಬಾಕಿ ಇದೆ. ವಿರೋಧ ಪಕ್ಷದಲ್ಲಿರುವವರು ಸರ್ಕಾರದ ಯಾವ ಕೆಲಸಗಳನ್ನು ಹೊಗಳುವುದಿಲ್ಲ. ಕುಮಾರಸ್ವಾಮಿಗೆ ಕೇಂದ್ರದಿಂದ ನಮಗೆ ಸಾಮಾಜಿಕ ನ್ಯಾಯ ಕೊಡಿಸಲು ಹೇಳಿ ಎಂದರು.

ಕೈಗಾರಿಕೆ ಸ್ಥಾಪನೆ ಮಾಡುವುದಾದರೇ ಮಾಗಡಿಯಲ್ಲಿ 150 ಎಕರೆ ಜಾಗ ಕೊಡುತ್ತೇವೆ. ಅಲ್ಲಿ ಕಾರ್ಖಾನೆಗಳ್ನು ಸ್ಥಾಪನೆ ಮಾಡಿ ಉದ್ಯೋಗ ಕೊಡುತ್ತಾರಾ ಕೇಳಿ. ಬರೀ ಕಥೆ ಹೇಳಿಕೊಂಡು ಓಡಾಡಿದ್ರೆ ಏನೂ ಆಗಲ್ಲ. ಕುಮಾರಸ್ವಾಮಿ ಅವರು ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿಲ್ಲ. ರಾಜ್ಯದಲ್ಲಿ ಎಲ್ಲೂ ಕೂಡ ಒಂದು ಕೈಗಾರಿಕೆ ಮಾಡಲಿಲ್ಲ. ಎಲ್ಲರಿಗೂ ಕಿವಿ ಮೇಲೆ ಹೂವಿಡುತ್ತಿದ್ದಾರೆ ಎಂದು ಹೆಚ್​​.ಸಿ ಬಾಲಕೃಷ್ಣ ಕಿಡಿಕಾರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ; ಮುಹಮ್ಮದ್ ಯೂನಸ್ ಮನೆಗೆ ಬೆಂಕಿ, ಗ್ರಾಮೀಣ್ ಬ್ಯಾಂಕ್ ಗಳ ಮೇಲೂ ದಾಳಿ, ಕನಿಷ್ಠ 4 ಸಾವು!

ಭಾರತೀಯ ಸಂಸ್ಕೃತಿ 'ತಿನ್ನು, ಕುಡಿ, ಮೋಜು ಮಾಡು' ಎಂಬುದಲ್ಲ; ನಾವು ಉಳಿತಾಯಕ್ಕೆ ಪ್ರೋತ್ಸಾಹ ನೀಡುತ್ತೇವೆ: ಪ್ರಧಾನಿ ಮೋದಿ

Video: 'ಇನ್ಮೇಲೆ ನೀರಿಗಾಗಿ ಗಲಾಟೆ ಇರೋಲ್ಲ': ಕಾವೇರಿ-ಗೋದಾವರಿ ಜೋಡಣೆ ಕುರಿತು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಮಹತ್ವದ ಹೇಳಿಕೆ!

Arnab ಚಂಡಮಾರುತ ಸಂಕಷ್ಟದಲ್ಲಿ ನೆರವು; ಕರ್ನಾಟಕಕ್ಕೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಧನ್ಯವಾದ; ಡಿಕೆಶಿ ಹೇಳಿದ್ದೇನು?

ದೆಹಲಿ ವಿಮಾನ ನಿಲ್ದಾಣದಲ್ಲಿ ಆಗಂತುಕನ ಆತಂಕ: ಟಿಕೆಟ್ ಇಲ್ಲ, ದಾಖಲೆಗಳೂ ಇಲ್ಲ, ಬಲವಂತವಾಗಿ ನುಗ್ಗಲು ಯತ್ನಿಸಿದವ CISF ವಶಕ್ಕೆ! Video