ಸಿದ್ದರಾಮಯ್ಯ  
ರಾಜಕೀಯ

'ಸೋನಿಯಾ ಗಾಂಧಿ ಕಾರ್ಯಕ್ರಮಕ್ಕೆ ತಡವಾಗಿ ಹೋದ ಕಾರಣ ಹಿಂದೆ ಕುಳಿತೆ, ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ ಪುನರುಚ್ಛಾರ

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಗೆ 80 ವರ್ಷ ದಾಟಿರುವುದರಿಂದ ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದರು.

ಮೈಸೂರು: 2028ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಸೇರಿದಂತೆ ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ, ನನಗೀಗ 80 ವರ್ಷ ವಯಸ್ಸು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಗೆ 80 ವರ್ಷ ದಾಟಿರುವುದರಿಂದ ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದರು.

ಇತ್ತೀಚೆಗೆ ದೆಹಲಿಯಲ್ಲಿ ನಡೆದ ಎಐಸಿಸಿ ನಾಯಕಿ ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ತಾವು ಐದನೇ ಸಾಲಿನಲ್ಲಿ ಕುಳಿತಿದ್ದ ಕುರಿತು ಜೆಡಿಎಸ್ ಮತ್ತು ಬಿಜೆಪಿ ನಾಯಕರು ಮಾಡಿದ್ದ ಟೀಕೆಗಳಿಗೆ ಮತ್ತೊಮ್ಮೆ ಪ್ರತಿಕ್ರಿಯಿಸಿದ ಅವರು, “ನಾನು ತಡವಾಗಿ ಕಾರ್ಯಕ್ರಮಕ್ಕೆ ಹೋಗಿದ್ದರಿಂದ ಹಿಂದಿನ ಸಾಲಿನಲ್ಲಿ ಕುಳಿತಿದ್ದೆ ಎಂದು ಸ್ಪಷ್ಟಪಡಿಸಿದರು.

ಹಿಂದಿನ‌ ಸಾಲಿನಲ್ಲಿ ಕುರ್ಚಿ ಖಾಲಿಯಿತ್ತು, ಹಾಗಾಗಿ ಅಲ್ಲಿ ಕೂತೆ

ಸಿದ್ದರಾಮಯ್ಯ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ 5ನೇ ಸಾಲಿನಲ್ಲಿ ಕೂತಿದ್ದರು. ಕಾಂಗ್ರೆಸ್‌ ಪಕ್ಷದಲ್ಲಿ ಅವರನ್ನು ಕಡೆಗಣಿಸಲಾಗುತ್ತಿದೆ ಎಂಬ ವಿಷಯದ ಬಗ್ಗೆ ವಿವಿಧ ಪಕ್ಷಗಳ ರಾಜಕೀಯ ನಾಯಕರು, ಮಾಧ್ಯಮಗಳು ಹಾಗೂ ಜಾಲತಾಣಗಳಲ್ಲಿ ಮಾತನಾಡುತ್ತಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ನಾನು ಸಮಾರಂಭಕ್ಕೆ ತಡವಾಗಿ ತೆರಳಿದ್ದೆ, ಹಾಗಾಗಿ ಮುಂದಿನ ಸಾಲಿನಲ್ಲಿದ್ದ ಖುರ್ಚಿಗಳೆಲ್ಲವೂ ಭರ್ತಿಯಾಗಿದ್ದವು. ಹಿಂದಿನ‌ ಸಾಲಿನಲ್ಲಿ ಕುರ್ಚಿ ಖಾಲಿಯಿದ್ದ ಕಾರಣಕ್ಕೆ ಅಲ್ಲಿಯೇ ಕುಳಿತೆ. ಅದು ನನಗಾಗಿ‌ ನಿಗದಿ ಮಾಡಿದ್ದ ಆಸನವಲ್ಲ, ಮೊದಲು ಬಂದವರು ಮುಂದೆ ಕೂತಿದ್ದರು ಅಷ್ಟೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ಸಂಸ್ಕೃತಿ 'ತಿನ್ನು, ಕುಡಿ, ಮೋಜು ಮಾಡು' ಎಂಬುದಲ್ಲ; ನಾವು ಉಳಿತಾಯಕ್ಕೆ ಪ್ರೋತ್ಸಾಹ ನೀಡುತ್ತೇವೆ: ಪ್ರಧಾನಿ ಮೋದಿ

ಖ್ಯಾತ ನಟನಾಗಿದ್ದರೇ ಹೆಂಡತಿ ಕಾಲಿಗೆ ಬೀಳುತ್ತಿದ್ದರಾ? 'ಪ್ರೇಮದ ಊರಲಿ' ಬಗ್ಗೆ ನಾಗತಿಹಳ್ಳಿ ಚಂದ್ರಶೇಖರ್ ಮಾರ್ಮಿಕ ಪೋಸ್ಟ್!

ಭೂಗತಪಾತಕಿ ದಾವೋದ್ ಇಬ್ರಾಹಿಂ ಆಡಿ ಬೆಳೆದಿದ್ದ ಮುಂಬೈ ನಿವಾಸ ಧ್ವಂಸ!

ನಮ್ಮ ಹಳೇ ಬಾಸ್​​ ಭಸ್ಮಾಸುರನಂತೆ, NDA ಕಥೆ ಏನಾಗುತ್ತೋ: ಮತ್ತೆ ಎಚ್​​ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಬಾಲಕೃಷ್ಣ ವಾಗ್ದಾಳಿ

ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಬೆದರಿಕೆ, ಆಡಿಯೋ ಕ್ಲಿಪ್ ವೈರಲ್; ಪತ್ನಿ ಕರೀನಾ ಕಪೂರ್ ಜೊತೆಗಿನ ವಿವಾದ ಇದಕ್ಕೆ ಕಾರಣನಾ? ಪೊಲೀಸರಿಂದ ತನಿಖೆ ಶುರು!