ಬಿವೈ ವಿಜಯೇಂದ್ರ 
ರಾಜಕೀಯ

ಅಮಿತ್ ಶಾ ಭೇಟಿ ಮಾಡಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಚರ್ಚಿಸಿದ್ದೇನೆ: ಬಿವೈ ವಿಜಯೇಂದ್ರ!

ನಾನು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ರಾಜ್ಯ ರಾಜಕೀಯದ ಬಗ್ಗೆ, ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ, ಹಿರಿಯೂರು ಉಪ ಚುನಾವಣೆ ಬಗ್ಗೆ ಮತ್ತು ರಾಜ್ಯಾಧ್ಯಕ್ಷ ಸ್ಥಾನದ ವಿಚಾರವಾಗಿ ವಿಸ್ತಾರವಾಗಿ ಚರ್ಚಿಸಿರುವುದಾಗಿ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಮಾತುಗಳು ಕೇಳಿಬರುತ್ತಿವ ಸಂದರ್ಭದಲ್ಲೇ ಕೇಸರಿ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಅವರನ್ನು ಭೇಟಿ ಮಾಡಿದ್ದಾರೆ.

ನಾನು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ರಾಜ್ಯ ರಾಜಕೀಯದ ಬಗ್ಗೆ, ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ, ಹಿರಿಯೂರು ಉಪ ಚುನಾವಣೆ ಬಗ್ಗೆ ಮತ್ತು ರಾಜ್ಯಾಧ್ಯಕ್ಷ ಸ್ಥಾನದ ವಿಚಾರವಾಗಿ ವಿಸ್ತಾರವಾಗಿ ಚರ್ಚಿಸಿರುವುದಾಗಿ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ಅಮಿತ್ ಶಾ ಭೇಟಿಯ ಆಂತರಿಕ ವಿಚಾರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಆದರೆ ಈ ಮಾತುಕತೆಯು ತಮ್ಮ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಿದ್ದಾರೆ.

ಹಿರಿಯೂರು ಉಪಚುನಾವಣೆಯ ಕುರಿತು ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಉತ್ತಮ ಅವಕಾಶವಿದ್ದು, ಯಾವುದೇ ಗೊಂದಲವಿಲ್ಲದೆ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಿತ್ರ ಪಕ್ಷ ಜೆಡಿಎಸ್ ಟಿಕೆಟ್ ಕೇಳುವುದು ಸಹಜವಾಗಿದ್ದು, ಅಂತಿಮವಾಗಿ ಪಕ್ಷದ ವರಿಷ್ಠರು ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ನಮಗೆ ಟಿಕೆಟ್ ವಿಚಾರದಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ, ಬದಲಾಗಿ ಚುನಾವಣೆಯಲ್ಲಿ ಗೆಲ್ಲುವುದೇ ನಮ್ಮ ಏಕೈಕ ಗುರಿ ಮತ್ತು ಹಠ. ರಾಜ್ಯದ ನಾಯಕರು ಹಾಗೂ ಕಾರ್ಯಕರ್ತರ ಅಭಿಪ್ರಾಯಗಳನ್ನು ಈಗಾಗಲೇ ಅಮಿತ್ ಶಾ ಅವರಿಗೆ ತಲುಪಿಸಲಾಗಿದ್ದು, ನಾಲ್ಕು ಗೋಡೆಗಳ ನಡುವೆ ಚರ್ಚಿಸಿ ವರಿಷ್ಠರು ಅಂತಿಮ ತೀರ್ಮಾನ ಪ್ರಕಟಿಸಲಿದ್ದಾರೆ ಎಂದು ವಿಜಯೇಂದ್ರ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಭಾರತದೊಂದಿಗೆ ನಮ್ಮ ಎಲ್ಲಾ ಸಂಬಂಧಗಳು ಸುಧಾರಿಸುತ್ತವೆ': ಪಾಕ್ ಸಚಿವರ ಭರವಸೆ; ಆದರೆ ಭಯೋತ್ಪಾದನೆ ಬಗ್ಗೆ ಮೌನ!

ರಾಜಸ್ಥಾನ ಪಂಚಾಯತ್ ಚುನಾವಣೆ: ಕಾಂಗ್ರೆಸ್‌ ಭರ್ಜರಿ ಗೆಲುವು; ಆಡಳಿತರೂಢ BJPಗೆ ತೀವ್ರ ಮುಖಭಂಗ!

'ನಮ್ಮಲ್ಲಿ ನೀರಿದ್ದರೆ ಖಂಡಿತ ತಮಿಳುನಾಡಿಗೆ ಕೊಡ್ತೇವೆ, ಈ ವರ್ಷ ಕುಡಿಯುವ ನೀರಿಗೇ ತತ್ವಾರವಾಗಿದೆ': ಸಿಎಂ; Video

ಪತಿ ಜೊತೆ ಅಕ್ರಮ ಸಂಬಂಧ ಶಂಕೆ; ಇಂಡಿಗೋ ಸಿಬ್ಬಂದಿ ವರ್ಷಾ ಹತ್ಯೆ; ಪತ್ನಿಯಿಂದಲೇ ಸುಪಾರಿ!

ನಾಳೆ ಪ್ರಧಾನಿ ಮೋದಿಯಿಂದ 'ನಿತೀಶ್ ಸೇತು' ಉದ್ಘಾಟನೆ