ಅಮಿತ್ ಶಾ ಭೇಟಿಯಾದ ವಿಜಯೇಂದ್ರ ಮತ್ತು ಕುಮಾರಸ್ವಾಮಿ 
ರಾಜಕೀಯ

ಹಿರಿಯೂರು ಉಪ ಚುನಾವಣೆ ಟಿಕೆಟ್ ಸರ್ಕಸ್: ಕುಮಾರಸ್ವಾಮಿ, ವಿಜಯೇಂದ್ರ ಜೊತೆ ಅಮಿತ್‌ ಶಾ ಪ್ರತ್ಯೇಕ ಸಭೆ; ಹೆಚ್ಚಿದ ಕುತೂಹಲ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಹಿರಿಯೂರು ಉಪಚುನಾವಣೆ ಸೇರಿದಂತೆ ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ.

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸಚಿವ ಮತ್ತು ಜೆಡಿಎಸ್‌ ನಾಯಕ ಎಚ್‌ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಹಿರಿಯೂರು ಉಪಚುನಾವಣೆ ಸೇರಿದಂತೆ ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ.

ಹಿರಿಯೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಅವಕಾಶ ನೀಡುವಂತೆ ಕುಮಾರಸ್ವಾಮಿ ಅವರು ಅಮಿತ್ ಶಾ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಹಿರಿಯೂರಿನಲ್ಲಿ ಜೆಡಿಎಸ್ ಉತ್ತಮ ಅವಕಾಶ ಹೊಂದಿದೆ ಎಂಬುದನ್ನು ಅವರು ವಿವರಿಸಿದ್ದಾರೆ ಎಂಬದು ತಿಳಿದುಬಂದಿದೆ.

ಶೀಘ್ರದಲ್ಲೇ ಅಭ್ಯರ್ಥಿ ಆಯ್ಕೆ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಕುಮಾರಸ್ವಾಮಿಗೆ ಅಮಿತ್ ಶಾ ಭರವಸೆ ನೀಡಿದ್ದಾರೆ. ಈ ಸಂಬಂಧ ಅಭ್ಯರ್ಥಿ ಅಂತಿಮಗೊಳಿಸುವ ಮೊದಲು ಮಾಜಿ ಪ್ರಧಾನಿ ಹಾಗೂ ಪಕ್ಷದ ವರಿಷ್ಠ ಹೆಚ್.ಡಿ. ದೇವೇಗೌಡರೊಂದಿಗೆ ಚರ್ಚಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

ಹಿರಿಯೂರು ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಲಭ್ಯವಿರುವ ವರದಿಗಳು, ಮಾಹಿತಿಗಳನ್ನೆಲ್ಲಾ ಪರಿಶೀಲಿಸಿ ಒಮ್ಮತದ ತೀರ್ಮಾನ ಕೈಗೊಳ್ಳೋಣ ಎಂಬುದಾಗಿ ಅಮಿತ್‌ ಶಾ ಅವರು ಉಭಯ ನಾಯಕರಿಗೆ ತಿಳಿಸಿದ್ದಾರೆ ಎಂದು ಗೊತ್ತಾಗಿದೆ.

ಹಿರಿಯೂರು ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ, ಜೆಡಿಎಸ್‌ ನಡುವೆಯೇ ಪೈಪೋಟಿ ಸೃಷ್ಟಿಯಾಗಿದ್ದು, ಮೈತ್ರಿಕೂಟದಲ್ಲಿಗೊಂದಲಕ್ಕೆ ಕಾರಣವಾಗಿತ್ತು. ಇದು ಮುಂದುವರಿದರೆ ಮೈತ್ರಿ ಪಕ್ಷಗಳಿಂದ ಒಗ್ಗಟ್ಟಿನ ಸ್ಪರ್ಧೆಗೆ ಹಿನ್ನಡೆಯಾಗುವ ಆತಂಕದ ಮಾತುಗಳು ಕೇಳಿಬಂದಿದ್ದವು. ಈ ನಡುವೆಯೇ ಅಮಿತ್‌ ಶಾ ಅವರನ್ನು ಉಭಯ ನಾಯಕರು ಭೇಟಿಯಾಗಿ ಚರ್ಚಿಸುವ ಮೂಲಕ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ಮುಂಬರುವ ಚುನಾವಣೆಗಳಲ್ಲಿ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಎಂಪಿ ಮತ್ತು ಎಂಎಲ್ಸಿ ಚುನಾವಣೆಗಳಂತೆ ಮೈತ್ರಿ ಧರ್ಮವನ್ನು ಪಾಲಿಸಿ ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕು ಎಂದು ಅಮಿತ್ ಶಾ ಹೇಳಿರುವುದು ಗೊತ್ತಾಗಿದೆ. ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಕಾರ್ಯತಂತ್ರ ರೂಪಿಸುವ ಕುರಿತು ಇಬ್ಬರೂ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

35 ವರ್ಷದ ಬಳಿಕ ' ಭಯೋತ್ಪಾದಕರಿಂದ ಕಾಶ್ಮೀರ ಮುಕ್ತ': ಲತೀಫ್ ಭಟ್ ಹತ್ಯೆ ನಂತರ ಅಮಿತ್ ಶಾ ಘೋಷಣೆ

'ಅಕ್ವಾನ್' ಚಂಡಮಾರುತ: ಒಡಿಶಾದಲ್ಲಿ 1.2 ಲಕ್ಷ ಜನರನ್ನು ಸ್ಥಳಾಂತರ, 69 ರೈಲು ಸೇವೆ ರದ್ದು

21,900 ಕೋಟಿ ರೂ.ಅಭಿವೃದ್ಧಿ ಯೋಜನೆಗಳಿಗೆ ಸಂಪುಟ ಸಮ್ಮತಿ; ಬೆಂಗಳೂರಿನ 88 ರಸ್ತೆಗಳಿಗೆ ವೈಟ್ ಟಾಪಿಂಗ್ ಭಾಗ್ಯ, ಸಾಲಗಾರರಿಗೆ ಬಿಗ್ ರಿಲೀಫ್..!

ಉಗ್ರರಿಗೆ ಕುಮ್ಮಕ್ಕು ನಿಲ್ಲಿಸದೆ ಹೊರತು ನಿಮ್ಮ ಜೊತೆ ಸಂಧಾನ ಅಸಾಧ್ಯ: ಪಾಕ್‌ ಜೊತೆಗಿನ ಮಾತುಕತೆಗೆ ಲಕ್ಷ್ಮಣರೇಖೆ ಎಳೆದ ರಾಹುಲ್ ಗಾಂಧಿ

EPFO ನಿಯಮಗಳಲ್ಲಿ 3 ಮಹತ್ವದ ಬದಲಾವಣೆಗಳಿಗೆ ಅನುಮೋದನೆ: ಸಂಸದ ತೇಜಸ್ವಿ ಸೂರ್ಯ ಹೇಳಿದ್ದಿಷ್ಟು...