ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ online desk
ರಾಜಕೀಯ

ರಾಜ್ಯದಲ್ಲಿ BJP-JDS ಮೈತ್ರಿ ಗಟ್ಟಿಯಾಗಿದೆ, ಹಿರಿಯೂರು ಅಭ್ಯರ್ಥಿ ಆಯ್ಕೆ ಅಮಿತ್ ಶಾ ಕೈಯಲ್ಲಿದೆ: HDK

ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿದ ರೀತಿಯಲ್ಲೇ ಹಿರಿಯೂರಿನಲ್ಲೂ ಮೈತ್ರಿಕೂಟದ ಅಭ್ಯರ್ಥಿಯನ್ನು ಗೆಲ್ಲಿಸುವುದು ನಮ್ಮ ಗುರಿಯಾಗಿದೆ.

ಬೆಂಗಳೂರು: ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ನೀಡಿದ್ದೇನೆ. ಅಭ್ಯರ್ಥಿ ಆಯ್ಕೆ ಕುರಿತು ಎನ್‌ಡಿಎ ನಾಯಕರು ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಕುರಿತು ಸಮಗ್ರ ಚರ್ಚೆ ನಡೆಸಿದ್ದಾಗಿ ಹೇಳಿದರು.

ಹಿರಿಯೂರು ಉಪಚುನಾವಣೆಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ನೀಡಿದ್ದೇನೆ. ಈಗ ರಾಜ್ಯದ ನಾಯಕರು ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದರು.

ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿದ ರೀತಿಯಲ್ಲೇ ಹಿರಿಯೂರಿನಲ್ಲೂ ಮೈತ್ರಿಕೂಟದ ಅಭ್ಯರ್ಥಿಯನ್ನು ಗೆಲ್ಲಿಸುವುದು ನಮ್ಮ ಗುರಿಯಾಗಿದೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಬಲಿಷ್ಠವಾಗಿದ್ದು, ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯದ ವಿರುದ್ಧ ಹೋರಾಟ ನಡೆಸುತ್ತಿದೆ ಎಂದರು.

ಬಿಡದಿ ಟೌನ್‌ಶಿಪ್, ನೈಸ್, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಹಾಗೂ ಕುಟುಕು ಕಾರ್ಯಾಚರಣೆ ಪ್ರಕರಣ ಸೇರಿದಂತೆ ಹಲವು ವಿಚಾರಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದೇನೆ. ಸರ್ಕಾರದ ವಿರುದ್ಧ ತೀವ್ರವಾಗಿ ಟೀಕಿಸಿದ್ದೇನೆ. ಈ ಎಲ್ಲ ಬೆಳವಣಿಗೆಗಳ ಮಾಹಿತಿ ಅಮಿತ್ ಶಾ ಅವರಿಗೂ ಇದೆ ಎಂದು ತಿಳಿಸಿದರು.

ಅಮಿತ್ ಶಾ ಅವರು ಕೆಲವು ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ. ಅದರಂತೆ ಮುಂದಿನ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲಿದ್ದು, ರಾಜ್ಯ ಬಿಜೆಪಿ ನಾಯಕರೊಂದಿಗೂ ಮಾತುಕತೆ ನಡೆಸುವುದಾಗಿ ಹೇಳಿದರು.

ಆಶಾ ಕಾರ್ಯಕರ್ತೆಯರಿಗೆ ನೀಡಲು ಸರ್ಕಾರದ ಬಳಿ ಹಣವಿಲ್ಲವೇ?

ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದರು.

ಭಾರತ್ ಜೋಡೋ ಸಂಘಗಳಿಗೆ ಹಣ ನೀಡಲು ಸರ್ಕಾರದ ಬಳಿ ಅನುದಾನವಿದೆ. ಆದರೆ ಆಶಾ ಕಾರ್ಯಕರ್ತೆಯರಿಗೆ ಹಣ ನೀಡಲು ಮಾತ್ರ ಇಲ್ಲವೇ ಎಂದು ಪ್ರಶ್ನಿಸಿದರು.

ಸಾರ್ವಜನಿಕರ ಹಣವನ್ನು ಅನಗತ್ಯವಾಗಿ ವ್ಯರ್ಥ ಮಾಡುತ್ತಿರುವ ಸರ್ಕಾರಕ್ಕೆ, ಮಕ್ಕಳನ್ನು ಎತ್ತಿಕೊಂಡು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಸಮಸ್ಯೆ ಕಾಣಿಸುತ್ತಿಲ್ಲ ಎಂದು ಟೀಕಿಸಿದರು.

ಇದೇ ವೇಳೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಕೂಡ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಗ್ಯಾರಂಟಿ ಅನುಷ್ಠಾನ ಸಮಿತಿಗಳು ಹಾಗೂ ಭಾರತ್ ಜೋಡೋ ಸಮಿತಿಗಳ ಹೆಸರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಹಣ ನೀಡಲು ಸರ್ಕಾರದ ಬಳಿ ಅನುದಾನವಿದೆ. ಆದರೆ ರೈತರು ಮತ್ತು ಆಶಾ ಕಾರ್ಯಕರ್ತೆಯರಿಗೆ ಹಣ ನೀಡಲು ಮಾತ್ರ ಅನುದಾನವಿಲ್ಲ ಎಂದು ಆರೋಪಿಸಿದರು.

ಗ್ಯಾರಂಟಿ ಅನುಷ್ಠಾನ ಸಮಿತಿಗಳಿಗೆ ನೇಮಕಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತರಿಗಾಗಿ ಸರ್ಕಾರ ಪ್ರತಿ ತಿಂಗಳು ಬರೋಬ್ಬರಿ 1.25 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ ಎಂದು ರವಿಕುಮಾರ್ ದೂರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜಸ್ಥಾನದಲ್ಲಿ ಕಾಂಗ್ರೆಸ್​ಗೆ ಅಭೂತಪೂರ್ವ ಗೆಲುವು: 37 ಜಿಲ್ಲೆಗಳ ಪೈಕಿ 33ರಲ್ಲಿ ಮುನ್ನಡೆ; BJPಗೆ ತೀವ್ರ ಮುಖಭಂಗ!

ಬಾಲವುಡ್ ನಟ ಸನ್ನಿ ಡಿಯೋಲ್ ಪುತ್ರ ರಾಜ್‌ವೀರ್ ಜತೆ ಸಚಿನ್ ಪುತ್ರಿ ಸಾರಾ ತೆಂಡೂಲ್ಕರ್ ಮದುವೆ?

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್: ಕೃಪಾ ಆಳ್ವಾ, ರಾಕೇಶ್ ಶೆಟ್ಟಿಗೆ ಬಿಗ್ ಶಾಕ್; ಜಾಮೀನು ಅರ್ಜಿ ವಜಾ; ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ!

ತಾಯಿ ನಿಧನ: ದುಃಖದಲ್ಲೂ ಕರ್ತವ್ಯ ಪೂರ್ಣಗೊಳಿಸಿದ CM ಯೋಗಿ ಆದಿತ್ಯನಾಥ್; ಪ್ರಧಾನಿ ಮೋದಿ ಸಾಂತ್ವನ!

ಪಾಕ್ ಸಚಿವನಿಗೆ ರೆಡ್ ಕಾರ್ಪೆಟ್: ಪಹಲ್ಗಾಮ್ ಬಲಿಪಶು ಕುಟುಂಬಗಳ ಗಾಯದ ಮೇಲೆ ಉಪ್ಪು ಸವರಿದಂತೆ; ಕಾಂಗ್ರೆಸ್ ಕಿಡಿ!