ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

2028ಕ್ಕೆ ರಾಜ್ಯದಲ್ಲಿ ಮೋದಿ, ದೇವೇಗೌಡ, ಕುಮಾರಣ್ಣ ನೇತೃತ್ವದ NDA ಸರ್ಕಾರ ಅಧಿಕಾರಕ್ಕೆ ಬರುವುದು ಶತಸಿದ್ಧ: ಎಚ್.ಡಿ ರೇವಣ್ಣ; Video

ಮಂಡ್ಯ ಜಿಲ್ಲೆಯ ಋಣವನ್ನು ನಮ್ಮ ಕುಟುಂಬ ಎಂದಿಗೂ ಮರೆಯುವುದಿಲ್ಲ ಎಂದು ಎಚ್ ಡಿ ರೇವಣ್ಣ ಅವರು ತಿಳಿಸಿದ್ದಾರೆ.

ಎಚ್ ಡಿ ರೇವಣ್ಣ
Lingaraj Badiger
Updated On : 23 Nov 2026, 5:37 pm

ಮಂಡ್ಯ: 2028ಕ್ಕೆ ರಾಜ್ಯದಲ್ಲಿ ಮೋದಿ, ದೇವೇಗೌಡರು ಹಾಗೂ ಕುಮಾರಣ್ಣ ನೇತೃತ್ವದ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಮಾಜಿ ಸಚಿವ ಹಾಗೂ ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರು ಸೋಮವಾರ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಜನರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ರಾಜಕೀಯ ಶಕ್ತಿ ತುಂಬಿದ್ದಲ್ಲದೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರನ್ನು 3.5 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ ಕಳುಹಿಸಿದ್ದಾರೆ. ಮಂಡ್ಯ ಜಿಲ್ಲೆಯ ಋಣವನ್ನು ನಮ್ಮ ಕುಟುಂಬ ಎಂದಿಗೂ ಮರೆಯುವುದಿಲ್ಲ ಎಂದು ರೇವಣ್ಣ ತಿಳಿಸಿದ್ದಾರೆ.

ಇಂದು ಮಂಡ್ಯ ತಾಲೂಕಿನ ಕೊತ್ತತ್ತಿ ಹೋಬಳಿ ಎಲೆಚಾಕನಹಳ್ಳಿ ಯಲ್ಲಿ ಆಯೋಜಿಸಿದ್ದ ಶ್ರೀ ಏಳೂರಮ್ಮ ದೇವಸ್ಥಾನದ ಶಂಕುಸ್ಥಾಪನೆ ಕಾರ್ಯಕ್ರಮ ದಲ್ಲಿ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ದೇವಸ್ಥಾನ ನಿರ್ಮಾಣಕ್ಕೆ ತಮ್ಮ ವತಿಯಿಂದ 10 ಲಕ್ಷ ಆರ್ಥಿಕ ನೆರವು ಘೋಷಿಸಿದರು.

Advertisement

Advertisement

Also Read

BJP OBC ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ನೇಮಕ

ಸ್ವಾಮೀಜಿಗಳ ಹೇಳಿಕೆಗೆ ಬೇಸರ

ಇತ್ತೀಚೆಗೆ ಕೆಲವು ಸ್ವಾಮೀಜಿಗಳು ಕುಮಾರ ಸ್ವಾಮಿ ಅವರ ಬಗ್ಗೆ ಲಘುವಾಗಿ ಮಾತನಾಡಿರುವುದು ತೀವ್ರ ನೋವು ತಂದಿದೆ. ದೇವೇಗೌಡರು ತಮ್ಮ ಸ್ವಂತ ಆಸ್ತಿ ಹಾಗೂ ಕೋಟ್ಯಂತರ ರೂಪಾಯಿ ಹಣವನ್ನು ತ್ಯಾಗ ಮಾಡಿ ಮಠ-ಮಾನ್ಯಗಳನ್ನು ಕಟ್ಟಿಕೊಟ್ಟಿದ್ದಾರೆ. ಜನರಿಗೆ ಅನ್ಯಾಯವಾದಾಗ ಧ್ವನಿ ಎತ್ತುವುದು ಕುಮಾರಣ್ಣನ ಗುಣ. ಅದನ್ನೇ ತಪ್ಪಾಗಿ ಬಿಂಬಿಸಬಾರದು. 94 ವರ್ಷ ವಯಸ್ಸಿನಲ್ಲೂ ದೇವೇ ಗೌಡರು ಬಡವರ ಏಳಿಗೆಯ ಬಗ್ಗೆಯೇ ಚಿಂತನೆ ಮಾಡುತ್ತಿದ್ದಾರೆ ಎಂದು ಹೇಳಿದರು.

ರೈತರ ಸಾಲಮನ್ನಾ

ಕುಮಾರಸ್ವಾಮಿ ಮುಖ್ಯ ಮಂತ್ರಿಯಾಗಿದ್ದಾಗ 14 ತಿಂಗಳಲ್ಲೇ 25 ಸಾವಿರ ಕೋಟಿ ರೈತರ ಸಾಲಮನ್ನಾ ಮಾಡಿದ್ದರು. ಮೈಸೂರು-ಬೆಂಗಳೂರು ಹೆದ್ದಾರಿ ವಿಸ್ತರಣೆ ವೇಳೆ ಮನೆ ಅರ್ಧ ಅಡಿ ಹೋದರೂ ಪೂರ್ಣ ಪರಿಹಾರ ನೀಡುವಂತೆ ಆದೇಶಿಸಿ, ಪಕ್ಷಭೇದವಿಲ್ಲದೆ ಕಾಂಗ್ರೆಸ್ ಮುಖಂಡರಿಗೂ 80 ಲಕ್ಷ ಪರಿಹಾರ ಕೊಡಿಸಿದ್ದೆ. ನಾವು 18 ತಿಂಗಳಲ್ಲಿ ಶೇ.95ರಷ್ಟು ಭೂಸ್ವಾಧೀನ ಪೂರ್ಣಗೊಳಿಸಿದ್ದರಿಂದ ಹೆದ್ದಾರಿ ನಿರ್ಮಾಣ ಸಾಧ್ಯವಾಯಿತು. ಆದರೆ ಈಗ ಕೆಲವರು ಜೋಡೆತ್ತುಗಳಂತೆ ಹೆದ್ದಾರಿಯ ಕ್ರೆಡಿಟ್ ಪಡೆಯಲು ಹೊರಟಿದ್ದಾರೆ ಎಂದು ಟೀಕಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments