ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಅವನು ಬಾಲಕೃಷ್ಣ ಅಲ್ಲ, ಬರೀ ಬಾಲ; ಇನ್ನು 25-30 ಸ್ಟಿಂಗ್ ವಿಡಿಯೋಗಳು ಇರಬೇಕು: ಕೆ.ಎನ್ ರಾಜಣ್ಣ ಸುದ್ದಿಗೋಷ್ಠಿ

ಕಾಂಗ್ರೆಸ್‌ನಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತು ಸಚಿವ ಎಚ್.ಸಿ. ಬಾಲಕೃಷ್ಣ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಸಚಿವ ಬಾಲಕೃಷ್ಣ ವಿರುದ್ಧ ರಾಜಣ್ಣ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ಕೆಎನ್ ರಾಜಣ್ಣ, ಎಚ್ ಸಿ ಬಾಲಕೃಷ್ಣ
Vishwanath S
Updated On : 23 Nov 2026, 6:47 pm

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತು ಸಚಿವ ಎಚ್.ಸಿ. ಬಾಲಕೃಷ್ಣ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಸಚಿವ ಬಾಲಕೃಷ್ಣ ವಿರುದ್ಧ ರಾಜಣ್ಣ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಅವನು ಬಾಲಕೃಷ್ಣ ಅಲ್ಲ, ಬರೀ ಬಾಲ. ಅವನಿಗೆಲ್ಲಾ ನಾನು ಉತ್ತರ ಕೊಡೋಕೆ ಹೋಗಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆಎನ್ ರಾಜಣ್ಣ, ಸ್ಟಿಂಗ್ ಆಪರೇಷನ್ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಬೇಸರಗೊಂಡಿದ್ದಾರಾ ಇಲ್ವಾ ಅಂತ ನನಗೆ ಗೊತ್ತಿಲ್ಲ, ಸ್ಟಿಂಗ್ ಆಪರೇಷನ್ ವಿಚಾರವನ್ನು ನಾನು ಮೊದಲೇ ವಿಧಾನಸಭೆಯಲ್ಲಿ ಹೇಳಿದ್ದೇನೆ. ಇನ್ನೂ 25-30 ಸ್ಟಿಂಗ್‌ಗಳು ಇರಬೇಕು. ಸಂದರ್ಭಕ್ಕೆ ತಕ್ಕಂತೆ ಒಬ್ಬೊಬ್ಬರದ್ದೆ ಹೊರಗೆ ಬರುತ್ತದೆ ಎಂದು ಹೇಳಿದರು.

Also Read

ಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video

ಇನ್ನು ತಮ್ಮ ಪುತ್ರ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರು ಜೆಡಿಎಸ್ ಸೇರುತ್ತಾರೆ ಎಂಬ ವದಂತಿಗಳನ್ನು ಕೆ.ಎನ್. ರಾಜಣ್ಣ ತಳ್ಳಿಹಾಕಿದ್ದಾರೆ. ಅದೆಲ್ಲಾ ಸುಳ್ಳು. ಅವನು ಕಾಂಗ್ರೆಸ್ ಪಕ್ಷದ MLC, ಅವನು ಯಾಕೆ ಜೆಡಿಎಸ್‌ಗೆ ಹೋಗ್ತಾನೆ? ಎಂದು ಪ್ರಶ್ನಿಸಿದರು.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments