ಸಿದ್ದರಾಮಯ್ಯನವರು ಚುನಾವಣಾ ಕಣದಿಂದ ದೂರ ಉಳಿಯುವ ನಿರ್ಧಾರ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ: ಕೆ.ಎನ್ ರಾಜಣ್ಣ
ಸಿದ್ದರಾಮಯ್ಯ ಅವರು ತಾವು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿರುವುದರಿಂದ ಕಾಂಗ್ರೆಸ್ ಪಕ್ಷ ಮತ್ತು ಅಹಿಂದ ಸಂಘಟನೆ ಎರಡಕ್ಕೂ ಹಿನ್ನಡೆಯಾಗಲಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವುದು ಕಾಂಗ್ರೆಸ್ ಪಕ್ಷದ ಭವಿಷ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ತಾವು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿರುವುದರಿಂದ ಕಾಂಗ್ರೆಸ್ ಪಕ್ಷ ಮತ್ತು ಅಹಿಂದ ಸಂಘಟನೆ ಎರಡಕ್ಕೂ ಹಿನ್ನಡೆಯಾಗಲಿದೆ. ಅಹಿಂದ ಸಮುದಾಯದಲ್ಲಿ ಕಾಂಗ್ರೆಸ್‌ನ ಪ್ರಭಾವಕ್ಕೆ ಧಕ್ಕೆಯಾಗಲಿದೆ. ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರು ಹೇಳುವ ಅಗತ್ಯವಿಲ್ಲ ಎಂದು ನಾನು ಅವರಿಗೆ ಹೇಳಿದ್ದೇನೆ ಎಂದರು.
Also Read
ಅವನು ಬಾಲಕೃಷ್ಣ ಅಲ್ಲ, ಬರೀ ಬಾಲ; ಇನ್ನು 25-30 ಸ್ಟಿಂಗ್ ವಿಡಿಯೋಗಳು ಇರಬೇಕು: ಕೆ.ಎನ್ ರಾಜಣ್ಣ ಸುದ್ದಿಗೋಷ್ಠಿ
ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಪದೇಪದೆ ಹೇಳಿಕೆ ನೀಡುತ್ತಾ ಬಂದಿದ್ದಾರೆ.