ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಸಿದ್ದರಾಮಯ್ಯ ನಿವಾಸದಲ್ಲಿ ಬ್ರೇಕ್ ಫಾಸ್ಟ್: ಯಾವೆಲ್ಲಾ ನಾಯಕರು ಭಾಗಿಯಾಗಿದ್ದರು ನೋಡಿ...Video

ಸಚಿವ ಡಾ. ಯತೀಂದ್ರ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಸಚಿವ ಜಮೀರ್ ಅಹಮದ್ ಖಾನ್, ಪಿ.ಎಂ. ನರೇಂದ್ರಸ್ವಾಮಿ ಹಾಗೂ ಮಾಜಿ ಸಚಿವ ಎಚ್.ಸಿ. ಮಹದೇವಪ್ಪ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.

ಸಿದ್ದರಾಮಯ್ಯ ನಿವಾಸದಲ್ಲಿ ಬ್ರೇಕ್ ಫಾಸ್ಟ್
Sumana Upadhyaya
Updated On : 26 Nov 2026, 1:13 pm

ಮೈಸೂರಿನ ಕುವೆಂಪುನಗರದಲ್ಲಿರುವ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಇಂದು ಗುರುವಾರ ಅಹಿಂದ ನಾಯಕರ ಉಪಾಹಾರ ಸಭೆ ನಡೆಯಿತು. ನಗರದಲ್ಲಿ ನಡೆಯಲಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಮೈಸೂರಿಗೆ ಆಗಮಿಸಿದ್ದ ವೇಳೆ ಎಲ್ಲರೂ ಒಟ್ಟಾಗಿ ಉಪಾಹಾರ ಸೇವಿಸಿದರು.

ಸಚಿವ ಡಾ. ಯತೀಂದ್ರ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಸಚಿವ ಜಮೀರ್ ಅಹಮದ್ ಖಾನ್, ಪಿ.ಎಂ. ನರೇಂದ್ರಸ್ವಾಮಿ ಹಾಗೂ ಮಾಜಿ ಸಚಿವ ಎಚ್.ಸಿ. ಮಹದೇವಪ್ಪ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.

ನಾಯಕರು ಒಗ್ಗೂಡಿದ್ದನ್ನು ಅಹಿಂದ ನಾಯಕರ ಒಗ್ಗಟ್ಟಿನ ಪ್ರದರ್ಶನ ಎಂದು ವಿಶ್ಲೇಷಿಸಲಾಗುತ್ತಿದೆ. ಕರ್ನಾಟಕ ಕಾಂಗ್ರೆಸ್‌ನಲ್ಲಿನ ಅಧಿಕಾರ ಹಂಚಿಕೆ ಕುರಿತ ಚರ್ಚೆಗಳ ನಡುವೆಯೇ ಎಚ್.ಸಿ. ಮಹದೇವಪ್ಪ ಅವರೊಂದಿಗಿನ ಮುನಿಸು ಶಮನಗೊಳಿಸುವ ಪ್ರಯತ್ನವೂ ಈ ಸಭೆಯ ಹಿಂದೆ ಇದೆ ಎಂದು ಹೇಳಲಾಗುತ್ತಿದೆ. ಕಳೆದ ಅಕ್ಟೋಬರ್ ಅಂತ್ಯದಲ್ಲಿ ಸಿದ್ದರಾಮಯ್ಯ ಅವರು ಬೆಂಗಳೂರಿನ ನಿವಾಸದಲ್ಲಿ ಸಚಿವರು ಮತ್ತು ಮೈಸೂರು ಭಾಗದ ಶಾಸಕರೊಂದಿಗೆ ಉಪಾಹಾರ ಸಭೆ ನಡೆಸಿದ್ದರು.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement