ಮುರಿದಿರೋದು ಕಾಲು, ಆತ್ಮವಿಶ್ವಾಸವಲ್ಲ; ಹೊಸ ವರ್ಷಕ್ಕೆ ನಿನಗೊಂದು ಶಾಕ್ ಕೋಡ್ತೀನಿ: ಪ್ರತಾಪ್ ವಿರುದ್ಧ ಪ್ರದೀಪ್ ಕಿಡಿ
ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತೊಮ್ಮೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಈಶ್ವರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರದೀಪ್ ಈಶ್ವರ್, ಪ್ರತಾಪ್ ಸಿಂಹಗೆ ವಾರ್ನಿಂಗ್ ನೀಡಿದ್ದಾರೆ.
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತೊಮ್ಮೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಈಶ್ವರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರದೀಪ್ ಈಶ್ವರ್, ಪ್ರತಾಪ್ ಸಿಂಹಗೆ ವಾರ್ನಿಂಗ್ ನೀಡಿದ್ದಾರೆ.
ಮೈಸೂರಿನ ಮಾಜಿ ಸಂಸದನೊಬ್ಬ ಬೀದಿ ಬೀದಿಯಲ್ಲಿ ಬೊಗಳುತ್ತಾ ತಿರುಗಾಡುತ್ತಿದ್ದಾನೆ. ನಾನು ಅವನಿಗೆ ಹೇಳುವುದಿಷ್ಟೇ. ಲೋ @mepratap, ಕಾಲು ಮುರಿದಿರುವುದರಿಂದ ಸದ್ಯಕ್ಕೆ ಹೊರಗೆ ಬರಲು ಸಾಧ್ಯವಾಗುತ್ತಿಲ್ಲ. ಆದರೆ ನೆನಪಿರಲಿ, ಮುರಿದಿರುವುದು ಕಾಲು, ಆತ್ಮವಿಶ್ವಾಸವಲ್ಲ. ನಾನು ಮರಳಿ ಬಂದೇ ಬರುತ್ತೇನೆ. ಹೊಸ ವರ್ಷದಲ್ಲಿ ನಿನಗೊಂದು ಉಡುಗೊರೆ ಕೊಟ್ಟೇ ಕೊಡುತ್ತೇನೆ. Mind it! ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮಲಯಾಳಿಗಳು ಕೊಡಗಿನ ಸಂಸ್ಕೃತಿ ಹಾಳು ಮಾಡುತ್ತಿದ್ದಾರೆ ಹೇಳಿಕೆ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲು
ಮಲಯಾಳಿಗಳು ಕರ್ನಾಟಕವನ್ನು ಅತಿಕ್ರಮಿಸುತ್ತಿದ್ದು, ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಕೊಡಗಿನ ಸಂಸ್ಕೃತಿಯನ್ನು ಹಾಳು ಮಾಡುತ್ತಿದ್ದಾರೆ ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದ ಮಾಜಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೊಡಗು ಹಿಂದೂ ಮಲಯಾಳಿ ಸಂಘದ ಸದಸ್ಯರು ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ಸಂಘದ ಅಧ್ಯಕ್ಷ ಕೆ.ಪಿ. ಪ್ರಶಾಂತ್ ಖಂಡಿಸಿದ್ದು, ಸಮುದಾಯದ ಬುದ್ಧಿವಂತಿಕೆಯ ಬಗ್ಗೆಯೂ ಅವರು ಪ್ರಶ್ನೆ ಎತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.