ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಸಿದ್ದರಾಮಯ್ಯ, ಕುರುಬ ಸಮುದಾಯವನ್ನೇ ಟಾರ್ಗೆಟ್ ಮಾಡ್ತಿದೆಯಾ ಸರ್ಕಾರ..? ಡಿಕೆಶಿ ಸರ್ಕಾರದ ವಿರುದ್ಧ ಅಹಿಂದ ಅಸಮಾಧಾನ ಸ್ಫೋಟ..!

ಹಿಂದಿನ ವರ್ಷಗಳಲ್ಲಿ ಅದ್ಧೂರಿಯಾಗಿ ಕನಕ ಜಯಂತಿ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಸರ್ಕಾರ ಯಾವುದೇ ವಿಶೇಷ ಸಂಭ್ರಮವಿಲ್ಲದೆ ಕಾರ್ಯಕ್ರಮ ಆಯೋಜಿಸಿದೆ. ಇದರಿಂದಾಗಿ ಸಮುದಾಯದ ಜನರು ಸರ್ಕಾರದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು ಬಹಿಷ್ಕರಿಸುವಂತಾಯಿತು.

ಸಿದ್ದರಾಮಯ್ಯ
Manjula VN
Updated On : 29 Nov 2026, 7:56 am

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುರುಬ ಸಮುದಾಯವನ್ನು ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡಿದೆಯೇ ಎಂಬ ಚರ್ಚೆ ಇದೀಗ ಮುನ್ನೆಲೆಗೆ ಬಂದಿದೆ.

539ನೇ ಕನಕ ಜಯಂತಿ ಆಚರಣೆಯಲ್ಲಿನ ಸರ್ಕಾರದ ನಿರ್ಲಕ್ಷ್ಯ ಹಾಗೂ ಜಾತಿ ಗಣತಿ ವರದಿ ಬಿಡುಗಡೆಗೆ ಹಿಂದೇಟು ಹಾಕುತ್ತಿರುವುದರ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಒಬಿಸಿ ನಾಯಕ ರಾಮಚಂದ್ರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಸರ್ಕಾರದ ಕನಕ ಜಯಂತಿ ಕಾರ್ಯಕ್ರಮವನ್ನು ಬಹಿಷ್ಕರಿಸಿರುವ ಅವರು, ಡಿಸೆಂಬರ್‌ನಲ್ಲಿ ಅದ್ಧೂರಿ ಆಚರಣೆಗೆ ಸಿದ್ಧತೆ ನಡೆಸುವುದಾಗಿ ಘೋಷಿಸಿದ್ದಾರೆ.

Advertisement

Advertisement

ಈ ಬೆಳವಣಿಗೆ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದ ವಿರುದ್ಧ ಅಹಿಂದ ವಲಯದಲ್ಲಿ ಅಸಮಾಧಾನ ಹೆಚ್ಚಿದೆಯೇ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.

ಹಿಂದಿನ ವರ್ಷಗಳಲ್ಲಿ ಅದ್ಧೂರಿಯಾಗಿ ಕನಕ ಜಯಂತಿ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಸರ್ಕಾರ ಯಾವುದೇ ವಿಶೇಷ ಸಂಭ್ರಮವಿಲ್ಲದೆ ಕಾರ್ಯಕ್ರಮ ಆಯೋಜಿಸಿದೆ. ಇದರಿಂದಾಗಿ ಸಮುದಾಯದ ಜನರು ಸರ್ಕಾರದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು ಬಹಿಷ್ಕರಿಸುವಂತಾಯಿತು. ಸರ್ಕಾರ ಸಿದ್ದರಾಮಯ್ಯ ಹಾಗೂ ಕುರುಬ ಸಮುದಾಯವನ್ನು ಸರ್ಕಾರ ಗುರಿಯಾಗಿಸಿಕೊಂಡಿದೆ ಎಂದು ರಾಮಚಂದ್ರಪ್ಪ ಅವರು ಆರೋಪಿಸಿದ್ದಾರೆ.

Also Read

ಸಚಿವ ಸಂಪುಟದ ಖಾಲಿ 2 ಸ್ಥಾನಗಳನ್ನು ಮಹಿಳೆ ಮತ್ತು OBC ಗೆ ನೀಡಬೇಕು: ಸಿದ್ದರಾಮಯ್ಯ

ಜಾತಿ ಗಣತಿ ವರದಿ ಕುರಿತು ಮಾತನಾಡಿದ ಅವರು, ಸರ್ಕಾರ ಕೂಡಲೇ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ವರದಿಯ ಶಿಫಾರಸುಗಳನ್ನು ತಕ್ಷಣವೇ ಜಾರಿಗೆ ತರಬೇಕೆಂದು ನಾವು ಒತ್ತಾಯಿಸುತ್ತಿಲ್ಲ. ಮೊದಲು ವರದಿಯನ್ನು ಬಹಿರಂಗಪಡಿಸಲಿ. ಆಗ ವಿವಿಧ ಸಮುದಾಯಗಳ ನೈಜ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ತಿಳಿಯಲಿದೆ ಎಂದು ಹೇಳಿದರು.

ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಜಾತಿ ಗಣತಿ ನಡೆಸುವ ಭರವಸೆ ನೀಡಿತ್ತು. ಚಿತ್ರದುರ್ಗದಲ್ಲಿ ನಡೆದ ಸಮಾವೇಶದಲ್ಲಿಯೂ ಸಾಮಾಜಿಕ ನ್ಯಾಯದ ಬದ್ಧತೆಯನ್ನು ಪುನರುಚ್ಚರಿಸಿತ್ತು. ಆದರೆ ಸರ್ಕಾರ ಈ ಭರವಸೆಯನ್ನು ಈಡೇರಿಸಿಲ್ಲ ಎಂದು ಟೀಕಿಸಿದರು.

ಜಾತಿ ಗಣತಿ ವರದಿಯನ್ನು ಬಿಡುಗಡೆ ಮಾಡಲು ಹಿಂದೇಟು ಹಾಕುವ ಸರ್ಕಾರ ಸಂವಿಧಾನ ದಿನ ಮತ್ತು ಸಾಮಾಜಿಕ ನ್ಯಾಯದ ಬಗ್ಗೆ ಹೇಗೆ ಮಾತನಾಡಲು ಸಾಧ್ಯ? ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮುತ್ತಿಗೆ ಹಾಕಲು ಒಬಿಸಿ ಸಮುದಾಯದ ನಾಯಕರು ನಿರ್ಧರಿಸಿದ್ದರು. ಆದರೆ ಪೊಲೀಸರು ಅದಕ್ಕೆ ಅವಕಾಶ ನೀಡದೆ ತಡೆದಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement